ತುರ್ತು ಪರಿಹಾರಕ್ಕೆಆಗ್ರಹಿಸಿ ನೇಕಾರರ ಪ್ರತಿಭಟನೆ


Team Udayavani, May 19, 2020, 8:42 AM IST

turtu-parihara

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೇಕಾರರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಈ ಕೂಡಲೇ ತುರ್ತು ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು. ಜೊತೆಗೆ ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ನೇಕಾರರ ಹಿತರಕ್ಷಣೆ  ಸಮಿತಿ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌ಗೆ ಮನವಿ ಸಲ್ಲಿಸಲಾಯಿತು.

ನೇಕಾರರನ್ನು ತಡೆದ ಪೊಲೀಸರು: ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀರಸಂದ್ರದ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲು ವಿವಿಧ ವಾಹನಗಳಲ್ಲಿ ತೆರಳುತ್ತಿದ್ದ ನೂರಾರು ನೇಕಾರರು ಹಾಗೂ ಮುಖಂಡರನ್ನು ರಘುನಾಥಪುರದ ಬಳಿ ಪೊಲೀಸರು ತಡೆದರು. ಕೊರೊನಾ ಲಾಕ್‌ಡೌನ್‌ ವಿಸ್ತರಣೆ ಇರುವುದರಿಂದ ಇಷ್ಟೊಂದು ಮಂದಿಯನ್ನು ತೆರಳಲುಬಿಡುವುದಿಲ್ಲ ಎಂದು ಅಡ್ಡ ಹಾಕಿದರು.

ಉಪವಿಭಾಗಾಧಿಕಾರಿಗೆ ಮನವಿ: ಇದಕ್ಕೆ ಪ್ರತಿಕ್ರಿಯಿಸಿದ ನೇಕಾರ ಮುಖಂಡರು, ನಾವು ಮನವಿ ಸಲ್ಲಿಸುವ ಕುರಿತಂತೆ ಸಭೆ ಸೇರಿದ್ದ ವೇಳೆ ಮೇ 17ಕ್ಕೆ ಲಾಕ್‌ಡೌನ್‌ ಅವಧಿ ಮುಗಿಯುವು  ದಾಗಿ ಘೋಷಣೆಯಾಗಿತ್ತು. ಹೀಗಾಗಿ ಮನವಿ ಸಲ್ಲಿಸಲು ತೆರಳುತ್ತಿದ್ದೇವೆ. ನಿಯಮ ಮೀರಿಲ್ಲ ಎಂದು ಸ್ಪಷ್ಟಪಡಿಸಿದರು. ನೂರಾರು ನೇಕಾರರು ರಸ್ತೆಯಲ್ಲಿ ಸೇರಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ನಂತರ ಜಿಲ್ಲಾಧಿ  ಕಾರಿಗಳೇ ಇಲ್ಲಿಗೆ ಬಂದು ನಮ್ಮ ಮನವಿ ಸ್ವೀಕರಿಸಲಿ ಎಂದು ನೇಕಾರ ಮುಖಂಡರು ಒತ್ತಾ ಯಿಸಿದಾಗ ಜಿಲ್ಲಾಧಿಕಾರಿ ಬದಲಿಗೆ ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಮನವಿ ಸಲ್ಲಿಸಿದ ನೇಕಾರ ಮುಖಂಡ ಪಿ.ಎ.ವೆಂಕಟೇಶ್‌ ಮಾತನಾಡಿ,  ಕೊರೊನಾ ಪರಿಣಾಮ ನೇಕಾರಿಕೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ, ರೇಷ್ಮೆ ಬೆಲೆ ಹೆಚ್ಚಳ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆ ಇಲ್ಲ.

ನೇಕಾರರು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದಾರೆ.  ನೇಕಾರರಿಗೆ ನೆರವು ನೀಡಬೇಕೆನ್ನುವ ಮನವಿಯನ್ನು ಮುಖ್ಯಮಂತ್ರಿಗಳಾದಿಯಾಗಿ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೆ ನೇಕಾರರಿಗೆ ತುರ್ತಾಗಿ ನೆರವು ದೊರೆತಿಲ್ಲ. ನೇಕಾರರ ಕುಟುಂಬಕ್ಕೆ ಮಾಸಿಕ 7.5 ಸಾವಿರ ಧನ ಸಹಾಯ  ನೀಡಬೇಕು. ಉದ್ಯಮ ಚೇತರಿಸಿ  ಕೊಳ್ಳುವವರೆಗೆ ವಿದ್ಯುತ್‌ ಬಿಲ್‌ (ಗೃಹ ಬಳಕೆಯೂ ಸೇರಿ) ಮನ್ನಾ ಸೇರಿ ಹಲವು ಬೇಡಿಕೆ ಈಡೇರಿಸಬೇಕು ಎಂದರು. ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ನೇಕಾರರ ಸಂಕಷ್ಟ  ಮನವರಿಕೆಯಾಗಿದೆ.

ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ, ಜಿಲ್ಲಾಧಿಕಾರಿ ಗಳೊಂದಿಗೆ ಸಭೆ ನಡೆಸಿ, ಸಂಬಂಧಪಟ್ಟ ಸಚಿವರ ಹಾಗೂ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು. ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌,  ನೇಕಾರರ ಹಿತರಕ್ಷಣೆ ಸಮಿತಿ ಕೆ.ಮಲ್ಲೇಶ್‌, ಎಸ್‌.ಅಶೋಕ್‌, ಎಂ.ಮುನಿರಾಜು, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್‌. ಚಂದ್ರತೇಜಸ್ವಿ, ಜಿಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್‌ ನಾಯಕ್‌, ಕಾರ್ಯದರ್ಶಿ ಡಿ.ಪಿ.ಆಂಜನೇಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.