ನೀರಿಲ್ಲದೆ ಒಣಗುತ್ತಿದೆ ತೋಟ

ಫಸಲು ಬಿಡುವ ಮರ ಕಳೆದುಕೊಳ್ಳುವ ಭೀತಿ•ರೈತರಲ್ಲಿ ಹೆಚ್ಚಿದ ಆತಂಕ

Team Udayavani, May 30, 2019, 10:27 AM IST

30-May-9

ಭಟ್ಕಳ: ಕಡವಿನಕಟ್ಟೆ ಡ್ಯಾಂ ಬತ್ತಿ ಹೋಗಿರುವುದು.

ಆರ್ಕೆ ಭಟ್ಕಳ
ಭಟ್ಕಳ:
ಮಳೆಯಿಲ್ಲದೇ ಭೂಮಿ ಬಿರಿಯುತ್ತಿದ್ದರೆ, ಹನಿ ನೀರೂ ಇಲ್ಲದೆ ರೈತರ ತೋಟಗಳು ಒಣಗುತ್ತಿವೆ. ಫಸಲು ಬಿಡುವ ಮರಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಪ್ರತಿವರ್ಷ ಏಪ್ರಿಲ್ ಮೇ ತಿಂಗಳಲ್ಲಿ ಕನಿಷ್ಠ 2-3 ದಿನಗಳಾದರೂ ಮಳೆ ಬರುತ್ತಿತ್ತು. ಆದರೆ ಈ ಬಾರಿ ಮಳೆಯೇ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಕರಾವಳಿಯಲ್ಲಿ ಸಾಧಾರಣ ತಾಪಮಾನ ಇರುತ್ತಿದ್ದರೆ, ಈ ಬಾರಿ ಕರಾವಳಿಯೂ ಕಾದ ಕಬ್ಬಿಣದಂತಾಗಿದ್ದು, 35ರಿಂದ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಅಂತರಜಲ ಕುಸಿತ:ತಾಲೂಕಿನ ಗ್ರಾಮೀಣ ಭಾಗದಲ್ಲಿ ಇಷ್ಟು ವರ್ಷಗಳ ಕಾಲ ಕೆರೆ, ಬಾವಿ ಒಣಗಿ ಹೋದ ಉದಾಹರಣೆಯೇ ಇಲ್ಲ. ಕೇವಲ ಕೆಲವೊಂದು ಕಡೆಗಳಲ್ಲಿ ಮಾತ್ರ ಒಣಗಿ ಹೋಗುತ್ತಿತ್ತು. ಈ ಬಾರಿ ಎಲ್ಲರ ಮನೆ ಬಾವಿ, ಕೆರೆಗಳು ಒಣಗಿ ಹೋಗಿದ್ದು, ಬರದ ಛಾಯೆ ಮೂಡಿದೆ. ಈ ಹಿಂದೆ ಪ್ರತಿಯೊಂದು ಊರಿನಲ್ಲಿಯೂ ಹಳ್ಳ, ಹೊಳೆ, ನದಿಗಳಿಗೆ ಬಾಂದಾರ ಕಟ್ಟಿ ನೀರನ್ನು ಹಿಡಿದಿಟ್ಟು ಕೊಳ್ಳುತ್ತಿದ್ದರು. ಕೃಷಿ ಚಟುವಟಿಕೆಗೆ ಉಪಯೋಗ ಮಾಡುತ್ತಿದ್ದ ಬಾಂದಾರ ಇತ್ತೀಚಿನ ವರ್ಷಗಳಲ್ಲಿ ಕೃಷಿಯೇ ಇಲ್ಲ ಎನ್ನುವುದು ಬಾಂದಾರವೂ ಇಲ್ಲವಾಗಿದೆ. ಇದರಿಂದ ಅಂತರಜಲ ಕುಸಿದು ನೀರಿಗೆ ಹಾಹಾಕಾರ ಎದ್ದಿದೆ.

ಕುಡಿವ ನೀರಿಗೂ ತತ್ವಾರ:ತಾಲೂಕಿನಲ್ಲಿ ಈಗಾಗಲೇ ಕುಡಿಯುವ ನೀರಿಗೂ ಹಾಹಾಕಾರ ಎದ್ದಿದ್ದು, ಕಡವಿನ ಕಟ್ಟೆ ಡ್ಯಾಂ ಒಣಗಿ ತಿಂಗಳ ಹತ್ತಿರ ಬಂದಿದೆ. ತಾಲೂಕಿನಲ್ಲಿ ನೀರು ಸರಬರಾಜು ಮಾಡುವ ಕುರಿತು ಟೆಂಡರ್‌ ಕರೆದಿದ್ದು, ಹೊಳೆಯ ನೀರು ತಂದು ಸರಬರಾಜು ಮಾಡುತ್ತಾರೆಂದು ಈಗಾಗಲೇ ಮುಟ್ಟಳ್ಳಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ನೀರು ಸರಬರಾಜು ಮಾಡುವ ವಾಹನಕ್ಕೆ ಜಿಪಿಎಸ್‌ ಕಡ್ಡಾಯ ಮಾಡಿದ್ದರೂ ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ ಎನ್ನುವ ದೂರು ಕೇಳಿ ಬಂದಿದೆ. ಈ ಕುರಿತು ತಹಶೀಲ್ದಾರ್‌ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಚೆಕ್‌ ಡ್ಯಾಂ ನಿರ್ಮಾಣ ಆಗಲಿ: ತಾಲೂಕಿನಲ್ಲಿ ಅನೇಕ ಚಿಕ್ಕ ಚಿಕ್ಕ ನದಿಗಳು, ಹೊಳೆಗಳು ಇದ್ದು, ಅವುಗಳಲ್ಲಿನ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತಿವೆ. ಮೊದಲು ರೈತರು ತಮ್ಮ ಬೆಳೆಗೆ ನೀರುಣಿಸಲಿಗೋಸ್ಕರವಾಗಿ ಪ್ರತಿಯೊಂದು ಹೊಳೆಗೆ ಚೆಕ್‌ ಡ್ಯಾಂ ನಿರ್ಮಿಸಿಕೊಂಡು ನೀರನ್ನು ಹಿಡಿದಿಟ್ಟುಕೊಳ್ಳುತ್ತಿದ್ದರು. ಸುಮಾರು ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ಒಡ್ಡು ನಿರ್ಮಾಣ ಮಾಡಿದರೆ ಮೇ ಕೊನೆಯ ತನಕವೂ ನೀರು ಇರುತ್ತಿತ್ತು. ಗದ್ದೆಗೂ ನೀರಾಯಿತು, ಅಂತರ್‌ಜಲವೂ ವೃದ್ಧಿಯಾಯಿತು ಎನ್ನುವಂತಾಗುತ್ತಿತ್ತು. ಆದರೆ ಇಂದು ಗದ್ದೆಗಳನ್ನು ನಾಟಿ ಮಾಡುವುದೇ ಕಡಿಮೆಯಾದ್ದರಿಂದ ರೈತರು ಒಡ್ಡು ನಿರ್ಮಾಣ ಮಾಡುವುದನ್ನೇ ಬಿಟ್ಟಿದ್ದಾರೆ. ಇದೂ ಕೂಡಾ ನೀರಿಗಾಗಿ ಹಾಹಾಕಾರಕ್ಕೆ ಕಾರಣವಾಗಿದೆ. ಒಟ್ಟಾರೆ ಸರಕಾರ ಈಗಿಂದಲೇ ಮುಂದಿನ ವರ್ಷಕ್ಕೆ ತಯಾರಿ ನಡೆಸಬೇಕಾಗಿದೆ.

ಕಡವಿನಕಟ್ಟೆಯಲ್ಲಿ ಇನ್ನೊಂದು ಡ್ಯಾಂ ನಿರ್ಮಿಸಿ
ಕಳೆದ ಹಲವಾರು ವರ್ಷಗಳಿಂದ ಕಡವಿನಕಟ್ಟೆ ಡ್ಯಾಂನಿಂದ ಸುಮಾರು 500 ಮೀಟರ್‌ ದೂರದಲ್ಲಿ ಇನ್ನೊಂದು ಸಣ್ಣ ಡ್ಯಾಂ ನಿರ್ಮಾಣ ಮಾಡಿ ನೀರನ್ನು ಹಿಡಿದಿಟ್ಟುಕೊಳ್ಳುವ ಯೋಜನೆ ರೂಪಿಸುವಂತೆ ಮಾಡಿದ ಜನತೆಯ ಮನವಿ ಅರಣ್ಯ ರೋಧನವಾಗಿದೆ. ಯಾವುದೇ ಜನ ಪ್ರತಿನಿಧಿಗಳು, ಅಧಿಕಾರಿಗಳು ಇದಕ್ಕೆ ಕಿವಿಗೊಡುವುದೇ ಇಲ್ಲ. ಇನ್ನಾದರೂ ಇದಕ್ಕೆ ಚಾಲನೆ ದೊರಕಿಸಿಕೊಟ್ಟಲ್ಲಿ ಕನಿಷ್ಠ ಒಂದು ತಿಂಗಳಿಗಾಗುವಷ್ಟು ನೀರು ಸಂಗ್ರಹ ಇರುವುದರಲ್ಲಿ ಸಂಶಯವಿಲ್ಲ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.