Udayavni Special

ತರಕಾರಿ ತವೂರೂರಾಯ್ತು ಕಲ್ಲುಗುಡ್ಡೆ


Team Udayavani, Aug 24, 2019, 2:49 PM IST

24-April-27

ಸಿದ್ಧನಹಳ್ಳಿಯಲ್ಲಿ ಪ್ರವಾಹದಿಂದ ಹೊಲಗಳಲ್ಲಿ ಕಲ್ಲು ತುಂಬಿ ಗುಡ್ಡದಂತಾಗಿವೆ.

ಭೈರೋಬಾ ಕಾಂಬಳೆ
ಬೆಳಗಾವಿ:
ಬಳ್ಳಾರಿ ನಾಲಾದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನೀರು ಬಂದು ಸುತ್ತಲಿನ ಕೃಷಿ ಜಮೀನುಗಳನ್ನೇ ನುಂಗಿದೆ. ಜಮೀನುಗಳಿಗೆ ನುಗ್ಗಿದ ಪ್ರವಾಹದ ನೀರಿನಿಂದ ತರಕಾರಿಯ ತವರೂರು ಎಂದೇ ಪ್ರಸಿದ್ಧಿಯಾದ ಸಿದ್ಧನಹಳ್ಳಿಯ ಹೊಲಗಳಲ್ಲಿ ರಾಶಿ ರಾಶಿ ಕಲ್ಲುಗಳು ಬಿದ್ದು ಗುಡ್ಡ ನಿರ್ಮಾಣಗೊಂಡು ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಸಿದ್ಧನಹಳ್ಳಿ ಎಂಬ ಮುಳುಗಡೆ ಪ್ರದೇಶದ ಹೊಲಗಳಲ್ಲಿ ನೀರು ನುಗ್ಗುವುದಷ್ಟೇ ಅಲ್ಲದೇ ರಾಶಿ ರಾಶಿ ಕಲ್ಲುಗಳು ಬಂದು ಬಿದ್ದಿವೆ. ಅತ್ಯಂತ ಫಲವತ್ತಾದ ಜಮೀನು ಹೊಂದಿರುವ ಈ ಗ್ರಾಮದ ರೈತರಲ್ಲಿ ಆತಂಕ ಮೂಡಿದ್ದು, ಕಣ್ಣೀರು ಕಪಾಳಕ್ಕೆ ಬಂದಿವೆ.

ಅನ್ನದಾತನ ಜೀವನ ಸರ್ವನಾಶ: ಬಳ್ಳಾರಿ ನಾಲಾಕ್ಕೆ ಹಿಂದೆಂದೂ ಕಂಡು ಕೇಳರಿಯದಷ್ಟು ನೀರು ಬಂದಿದೆ. 10-15 ದಿನಗಳ ಕಾಲ ಸುರಿದ ಭಾರೀ ಮಳೆಯಿಂದ ಕೃಷಿ ಜಮೀನುಗಳು ಕೊಚ್ಚಿ ಹೋಗಿವೆ. ಮುಂಗಾರು ಮಳೆ ಉತ್ತಮವಾಗಿ ಬರುವುದೆಂಬ ಆಸೆಯಿಂದ ರೈತರು ನಾಟಿ ಮಾಡಿದ್ದ ಭತ್ತ, ಜೋಳ, ಗೋವಿನ ಜೋಳ, ತರಕಾರಿ ಕೊಚ್ಚಿ ಹೋಗಿದೆ. ಮಳೆಯ ಅಂದಾಜು ನೋಡಿ ಗೊಬ್ಬರ ಹಾಕಿದ್ದರು. ಇನ್ನೇನು ಬೆಳೆ ಕೈಗೆ ಬರಬಹುದೆಂಬ ಆಸೆಯಿಂದ ಕಾಯುತ್ತ ಕುಳಿತಿದ್ದ ಅನ್ನದಾತನ ಬೆಳೆಯನ್ನು ಈ ಮಳೆ ಸರ್ವನಾಶ ಮಾಡಿದೆ.

ಇಡೀ ಜೀವನವನ್ನೇ ನುಂಗಿ ಹಾಕಿರುವ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಎಲ್ಲೆಲ್ಲೂ ನೀರು ನುಗ್ಗಿ ಹೊಟ್ಟೆಗೆ ತಣ್ಣೀರು ಎರಚಿದೆ. ಮೇಲ್ಭಾಗದಿಂದ ಸಿದ್ಧನಹಳ್ಳಿ, ಮಾಸ್ತಿಹೊಳಿ ಗ್ರಾಮಗಳಿಗೆ ಇಳಿದು ಬಂದ ನೀರಿಗೆ ಹಚ್ಚ ಹಸುರಾಗಿದ್ದ ಬೆಳೆಗಳೆಲ್ಲ ನಾಲ್ಕೈದು ದಿನಗಳಲ್ಲಿ ಕೊಚ್ಚಿ ಹೋಗಿವೆ. ಮುಂದಿನ ಬದುಕಿನ ಬಗ್ಗೆ ಚಿಂತಾಕ್ರಾಂತರಾಗಿರುವ ರೈತರು ತಲೆಗೆ ಕೈ ಹಚ್ಚಿ ಕುಳಿತಿದ್ದಾರೆ.

ಹೊಲ ನೋಡಿ ರೈತರ ಕಣ್ಣೀರು: ಬಳ್ಳಾರಿ ನಾಲಾದಿಂದ ಹರಿದು ಬಂದ ನೀರಿನಿಂದ ಸಂಪೂರ್ಣ ಬೆಳೆಗಳೆಲ್ಲ ಸರ್ವನಾಶಗೊಂಡಿವೆ. ಭೂಮಿಯ ಮಣ್ಣೆಲ್ಲ ಕಿತ್ತುಕೊಂಡು ಹೊಲಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ದೂರದಿಂದ ಬೃಹತ್‌ ಆಕಾರದ ಮರಗಳು ಕೊಚ್ಚಿ ಬಂದು ಹೊಲಗಳಲ್ಲಿ ಬಿದ್ದಿವೆ. ಬೆಳೆ ಸಹಿತ ಮಣ್ಣನ್ನೂ ಕಿತ್ತುಕೊಂಡು ಹೋಗಿರುವ ಈ ಹಳ್ಳದ ನೀರು ಸದ್ಯ ಸಂಪೂರ್ಣ ಇಳಿಮುಖವಾಗಿದೆ. ರೈತರು ಈಗ ತಮ್ಮ ಗದ್ದೆಗಳಿಗೆ ಹೋಗಿ ಬೆಳೆ ನೋಡಿ ಕಣ್ಣೀರು ಹಾಕುತ್ತಿದ್ದಾರೆ.

ಜೂನ್‌, ಜುಲೈ ತಿಂಗಳಲ್ಲಿ ಮಳೆ ಮುನ್ಸೂಚನೆ ನೋಡಿ ಬಿತ್ತನೆ ಆರಂಭವಾಗುತ್ತದೆ. ಅದರಂತೆ ಈ ಸಲ ಬಹುತೇಕ ರೈತರು ಬಿತ್ತನೆ ಕಾರ್ಯ ಮುಗಿಸಿದ್ದರಿಂದ ಅಲ್ಪಸ್ವಲ್ಪ ಬೆಳೆಗಳು ಬಂದಿದ್ದವು. ಇನ್ನೇನು ನಾಲ್ಕೈದು ದಿನಗಳಲ್ಲಿ ತರಕಾರಿಗಳನ್ನು ಕಿತ್ತು ಮಾರುಕಟ್ಟೆಗೆ ಸಾಗಿಸುವ ತಯಾರಿ ನಡೆದಿತ್ತು. ನೀರಿನ ಪ್ರವಾಹದಲ್ಲಿ ಎಲ್ಲವೂ ಕೊಚ್ಚಿ ಹೋಗಿದೆ. ನಾಟಿ ಮಾಡಿದ್ದ ಭತ್ತದ ಒಂದೂ ಗಿಡ ಕೈಗೆ ಸಿಕ್ಕಿಲ್ಲ. ಇದು ಭೂಮಿಯೋ ಅಥವಾ ಗುಡ್ಡಗಾಡು ಪ್ರದೇಶವೋ ಎಂಬಂತೆ ಕಾಣಿಸುತ್ತಿದೆ ಎನ್ನುತ್ತಾರೆ ರೈತ ಯಲ್ಲಪ್ಪ ಪೂಜೇರಿ.

ಗ್ರಾಮದಲ್ಲಿ ಭುಗಿಲೆದ್ದ ಆಕ್ರೋಶ: ಪ್ರವಾಹ ಬಂದು ಇಷ್ಟೆಲ್ಲ ಅವಾಂತರ ಸೃಷ್ಟಿಸಿದ್ದರೂ ಯಾರೂ ಕಣ್ಣೆತ್ತಿ ನೋಡುತ್ತಿಲ್ಲ. ಕೇಂದ್ರ ಸಚಿವ ಸುರೇಶ ಅಂಗಡಿ ಬಿಟ್ಟರೆ ಇನ್ನೂ ಯಾರೂ ಇತ್ತ ಬಂದಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಬಂದು ಸಮೀಕ್ಷೆ ಮಾಡಿಲ್ಲ. ಈ ಭಾಗದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಎಲ್ಲ ಊರು ತಿರುಗಾಡುತ್ತಿದ್ದಾರೆ. ಆದರೆ ನಮ್ಮೂರಿಗೆ ಬಂದು ಸಾಂತ್ವನ ಹೇಳುತ್ತಿಲ್ಲ. ಅನೇಕ ಮನೆಗಳು ಬಿದ್ದು ಹೋಗಿ ಬೇರೆಯವರ ಮನೆಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ನಮ್ಮ ಬಗ್ಗೆ ಯಾರಿಗೂ ಅನುಕಂಪ ಇಲ್ಲವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಳುಗಡೆ ಪ್ರದೇಶ ಎಂಬ ಶಾಪ ನಮ್ಮನ್ನು ಅಂಟಿಕೊಂಡಿದೆ. ಅನೇಕ ವರ್ಷಗಳಿಂದ ಸಿದ್ಧನಹಳ್ಳಿ ಸೇರಿದಂತೆ ಸುತ್ತಲಿನ ಕೆಲ ಹಳ್ಳಿಗಳು ಬಳ್ಳಾರಿ ನಾಲಾ ಅಣೆಕಟ್ಟು ನಿರ್ಮಾಣಕ್ಕಾಗಿ ಸ್ಥಳಾಂತರ ಮಾಡುವುದಾಗಿ ಸರ್ಕಾರ ಹೇಳುತ್ತ ಬಂದಿದೆ. ಆದರೆ ಇನ್ನೂವರೆಗೆ ಸ್ಥಳಾಂತರ ಮಾಡದೇ, ಸೌಲಭ್ಯವನ್ನೂ ಕಲ್ಪಿಸದೇ ಜಿಲ್ಲಾಡಳಿತ ಚೆಲ್ಲಾಟ ಆಡುತ್ತಿದೆ. ಈ ಬಾರಿಯ ಮಳೆ ಸಂಪೂರ್ಣ ಜೀವನವನ್ನೇ ಕಸಿದುಕೊಂಡಿದೆ ಎಂದು ಗ್ರಾಮದ ನಿವಾಸಿ ಲಗಮಣ್ಣ ಸುಲಧಾಳ ಅಳಲು ತೋಡಿಕೊಂಡರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯಲ್ಲಿ ಮತ್ತೆ ನಾಲ್ಕು ಕೋವಿಡ್ 19 ಪ್ರಕರಣ

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

sm-tdy-1

ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ

ಮನೋವೈದ್ಯರಿಂದ ಕೌನ್ಸೆಲಿಂಗ್‌

ಮನೋವೈದ್ಯರಿಂದ ಕೌನ್ಸೆಲಿಂಗ್‌

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ