ಘಟಪ್ರಭಾ ಬಲದಂಡೆ ಕಾಲುವೆಗೆ 10 ದಿನ ನೀರು
Team Udayavani, Apr 17, 2020, 4:32 PM IST
ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ 10 ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಎರಡು ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ 5500 ಕ್ಯೂಸೆಕ್ ನೀರನ್ನು ಬಿಡಲಾಗುತ್ತದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೀರನ್ನು ಹರಿಸಲಾಗುತ್ತಿದೆ. ಈ ನೀರನ್ನು ಘಟಪ್ರಭಾ ಬಲದಂಡೆ ಕಾಲುವೆಯ ವ್ಯಾಪ್ತಿಯ ರೈತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್