ಉತ್ತರ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನಕ್ಕೆ ಆಗ್ರಹ

•ಸರ್ಕಾರಕ್ಕೆ ಶಾಸಕ ಬೆನಕೆ ಮನವಿ•ಸಾಂಕ್ರಾಮಿಕ ರೋಗ ವಿರುದ್ಧ ಮುನ್ನಚ್ಚರಿಕೆ

Team Udayavani, Aug 14, 2019, 12:45 PM IST

ಬೆಳಗಾವಿ: ಗುರು ವಿವೇಕಾನಂದ ಸೊಸೈಟಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಲಕ್ಷ ರೂ. ಡಿಡಿಯನ್ನು ಶಾಸಕ ಬೆನಕೆಗೆ ನೀಡಲಾಯಿತು.

ಬೆಳಗಾವಿ: ಪ್ರವಾಹದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಉತ್ತರ ಮತ ಕ್ಷೇತ್ರದ ಪರಿಸ್ಥಿತಿ ಸುಧಾರಣೆಗಾಗಿ 100 ಕೋಟಿ ರೂ. ವಿಶೇಷ ಅನುದಾನ ನೀಡಬೇಕು ಎಂದು ಶಾಸಕ ಅನಿಲ ಬೆನಕೆ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 146 ಮಿಮೀ. ಆಗಬೇಕಾಗಿದ್ದ ಮಳೆ ಪ್ರಮಾಣ ಕಳೆದ 15 ದಿನಗಳ ಅವಧಿಯಲ್ಲಿ 360 ಮಿಮೀ. ಸುರಿದಿದೆ. ಇಷ್ಟು ದೊಡ್ಡ ಮಳೆಯಿಂದ ಇಡೀ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕಾರಿ ದಾಖಲೆಗಳ ಪ್ರಕಾರ 150 ಮನೆಗಳಿಗೆ ಹಾನಿಯಾಗಿದೆ. ಆದರೆ ಸದ್ಯ ನಾವು ಮಾಡಿರುವ ಸಮೀಕ್ಷೆ ಪ್ರಕಾರ 300ಕ್ಕಿಂತ ಹೆಚ್ಚು ಮನೆಗಳಿಗೆ ಹಾನಿಯಾಗಿರುವುದು ಕಂಡು ಬಂದಿದೆ. ರಸ್ತೆಗಳು, ದೊಡ್ಡ ಪ್ರಮಾಣದ ನಾಲಾಗಳು, ಗಟಾರುಗಳ ದುರಸ್ತಿಗೆ ಹಾಗೂ ಸಂಕಷ್ಟಕ್ಕೆ ಸಿಲುಕಿದ 10 ಸಾವಿರ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಸದ್ಯ ಮಳೆಯ ಅಬ್ಬರ ತಗ್ಗಿದ್ದರೂ ಇನ್ನೂ ಅನೇಕ ತಗ್ಗು ಪ್ರದೇಶಗಳು, ಬಡಾವಣೆಗಳು ಪ್ರವಾಹದ ಸಂಕಷ್ಟದಿಂದ ಹೊರ ಬಂದಿಲ್ಲ. ಅ ಪ್ರದೇಶಗಳಲ್ಲಿ ಅನಾರೋಗ್ಯ ವಾತಾವರಣ ಸೃಷ್ಟಿಯಾಗುತ್ತಿರುವುದರಿಂದ ಸಾಂಕ್ರಾಮಿಕ ಕಾಯಿಲೆ ವೇಗವಾಗಿ ಪಸರಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಬಡಾವಣೆಗಳಲ್ಲಿ ಕಾಯಿಲೆ ನಿಯಂತ್ರಣ ಔಷಧ ಸಿಂಪಡಿಸಬೇಕು ಎಂದು ಪಾಲಿಕೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರವಾಹದಿಂದ ಹಾನಿಗೊಳಗಾದ ಶಿವಾಜಿನಗರ, ವೀರಭದ್ರನಗರ, ಫುಲ್ಬಾಗ ಮಾಳ, ಕೋನವಾಳಗಲ್ಲಿ, ಪಾಟೀಲ ಮಾಳಾ, ಗ್ಯಾಂಗ್‌ವಾಡಿ, ವಡ್ಡರವಾಡಿ, ರುಕ್ಮಿಣಿನಗರದಲ್ಲಿ ಸಾವಿರಾರು ಜನ ನಿರಾಶ್ರಿತರಾಗಿದ್ದು, ಇವರ ಬದುಕು ಕಟ್ಟಿಕೊಡಲು ಸರಕಾರ ಬದ್ಧವಾಗಿದೆ.

ಧರ್ಮನಾಥ ಭವನ, ಅಂಬೇಡ್ಕರ ಭವನ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗಾಗಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ದಾನಿಗಳ ನೆರವಿನಿಂದ ಊಟ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭೇಟಿ ನೀಡಿ ಸಂತ್ರಸ್ತರಿಗೆ ಹೆಚ್ಚಿನ ನೆರವು ನೀಡುವುದಾಗಿ ತಿಳಿಸಿದ್ದಾರೆ. ಮನೆಗಳ ಪುನರ್‌ ನಿರ್ಮಾಣಕ್ಕಾಗಿ ಐದು ಲಕ್ಷ ರೂ. ಸಹಾಯಧನ ಮಂಜೂರು ಮಾಡಲು ವಿನಂತಿಸಲಾಗಿದೆ. ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ಶಾಸಕರ ಮಾಸಿಕ ವೇತನ 72 ಸಾವಿರ ರೂ. ನೀಡುವುದಾಗಿ ಶಾಸಕ ಅನಿಲ ಬೆನಕೆ ಘೋಷಿಸಿದರು.

ಪರಿಹಾರ ಕಾರ್ಯಕ್ಕೆ 1 ಲಕ್ಷ ರೂ. ದೇಣಿಗೆ:

ಬೆಳಗಾವಿ ನಗರದ ಕಚೇರಿಗಲ್ಲಿಯಲ್ಲಿರುವ ಗುರು ವಿವೇಕಾನಂದ ಮಲ್ಟಿಪರ್ಪಸ್‌ ಕೋ-ಆಪರೇಟಿವ್‌ ಸೊಸೈಟಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಲಕ್ಷ ರೂ. ಚೆಕ್‌ನ್ನು ಶಾಸಕ ಅನಿಲ್ ಬೆನಕೆ ಅವರಿಗೆ ಈ ಸಂದರ್ಭದಲ್ಲಿ ನೀಡಲಾಯಿತು. ಸೊಸೈಟಿ ಅಧ್ಯಕ್ಷ ಡಾ. ನಾರಾಯಣ ನಾಯ್ಕ, ಮುನಿರಾಜ ಜೈನ್‌, ಆನಂದ ರಾವ್‌, ರಾಜೇಶ ಗೌಡ, ಅಂಜನಕುಮಾರ ಗಂಡಗುದ್ರಿ, ಮಹಾವೀರ ಜೈನ್‌, ಆನಂದ ಶೆಟ್ಟಿ, ವಿಶಾಲ ಪಾಟೀಲ, ಭಾರತಿ ಡಿ. ಶೆಟ್ಟಿಗಾರ, ಜಗದೀಶ ಹೆಗ್ಡೆ, ಗಣೇಶ ಮರಕಾಲ, ಪಿಗ್ಮಿ ಸಂಗ್ರಹಕಾರರು, ಸಿಬ್ಬಂದಿ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಉಡುಪಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅವರ ಪದಗ್ರಹಣ ಸಮಾರಂಭ ಫೆ. 24ರ ಸಂಜೆ 4 ಗಂಟೆಗೆ ಹೊಟೇಲ್‌ ಕಿದಿಯೂರಿನ ಶೇಷಶಯನ ಸಭಾಭವನದಲ್ಲಿ...

  • ಕಡಬ: ರಾಜ್ಯದಲ್ಲಿ ಘೋಷಣೆಯಾಗಿರುವ ಎಲ್ಲ 50 ನೂತನ ತಾಲೂಕುಗಳು ಅನುದಾನದ ಕೊರತೆಯಿಂದ ಕಾರ್ಯಾರಂಭ ಮಾಡಿಲ್ಲ. ಆರು ದಶಕಗಳ ಹೋರಾಟದ ಫಲವಾಗಿ ಘೋಷಣೆಯಾದ ಕಡಬ ತಾಲೂಕಿನ...

  • ಒಂದು ದಿನ ಮಧ್ಯಾಹ್ನ ಮರವೊಂದು ತಿಳಿಗಾಳಿಗೆ ತಾನೇ ತೂಗಿಕೊಳ್ಳುತ್ತ ನಿದ್ರಿಸುತ್ತಿತ್ತು. ಅಷ್ಟರಲ್ಲಿ ಮಹಾನ್‌ ಪಂಡಿತನಾದ ಡಾಂಗೌಜಿ ತನ್ನ ಸ್ನೇಹಿತನೊಡನೆ...

  • ಲಕ್ಷಾಂತರ ರೂಪಾಯಿ ವ್ಯಯಿಸಿ ಅಳವಡಿಸಿರುವ ರಬ್ಬರ್‌ ಕೋನ್‌ಗಳ ಪ್ರಸ್ತುತ ಸ್ಥಿತಿ ಹೇಗಿದೆ ಎಂದು ತಿಳಿಯುವ ನಿಟ್ಟಿನಲ್ಲಿ "ಸುದಿನ' ತಂಡವು ರಿಯಾಲಿಟಿ ಚೆಕ್‌ ನಡೆಸಿದೆ....

  • ಮನೆಯ ಸುತ್ತುಮುತ್ತಲಿನಲ್ಲಿ ಬರುವ ಪ್ರತಿಯೊಂದು ಹಕ್ಕಿಗೂ ಅದರದ್ದೇ ಆದ ಚೆಲುವು, ಬೆಡಗು, ಆಕರ್ಷಣೆ. ಅಶ್ವತ್ಥಮರದ ಎಲೆಗಳ ನಡುವೆ ಕುಳಿತಿರುವ ವಸಂತದ ಹಕ್ಕಿ ಕಣ್ಣಿಟ್ಟು...