ಬೆಳಗಾವಿಯಲ್ಲಿ ಒಂದೇ ದಿನ 11 ಮಂದಿ ಪಾಸಿಟಿವ್: ಹಿರೇಬಾಗೇವಾಡಿಯಲ್ಲಿ 10 ಮಂದಿಗೆ ಸೋಂಕು
Team Udayavani, May 8, 2020, 1:09 PM IST
ಬೆಳಗಾವಿ: ಹಿರೇಬಾಗೇವಾಡಿ ಗ್ರಾಮದಲ್ಲಿ ಶುಕ್ರವಾರ ಒಂದೇ ದಿನ 10 ಪ್ರಕರಣಗಳು ದಾಖಲಾಗುವ ಮೂಲಕ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಗ್ರಾಮದಲ್ಲಿ ಒಟ್ಟು 47 ಪಾಸಿಟಿವ್ ಕೇಸುಗಳು ಬಂದಿವೆ. ಕುಡಚಿಯಲ್ಲಿ ಒಂದು ಕೇಸು ದಾಖಲಾಗಿದೆ.
ಜಿಲ್ಲೆಯಲ್ಲಿ ಒಂದೇ ದಿನ 11 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಪಾಲಿಗೆ ಶುಕ್ರವಾರ ಅಶುಭವಾಗಿವೆ. ಹಿರೇಬಾಗೇವಾಡಿಯಲ್ಲಿ ಇದೀಗ ಕೋವಿಡ್ ಮನೆ ಮಾಡಿದೆ.
ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ಹೋಗಿ ಬಂದಿದ್ದ ವ್ಯಕ್ತಿಯ ಸಂಪರ್ಕದಿಂದ ಇಡೀ ಗ್ರಾಮ ಈಗ ತೊಂದರೆ ಅನುಭವಿಸುವಂತಾಗಿದೆ. ಹಿರೇಬಾಗೇವಾಡಿ ಗ್ರಾಮದ ಪಿ.128 ದ್ವಿತೀಯ ಸಂಪರ್ಕಕ್ಕೆ ಬಂದ ಹತ್ತು ಜನರಿಗೆ ಕೋವಿಡ್-19 ಸೋಂಕು ತಗುಲಿದೆ.
ರಾಜ್ಯದಲ್ಲಿ ಇಂದು ಒಟ್ಟು 45 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 750 ತಲುಪಿದೆ. ಇವರಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 371 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ