ತರಬೇತಿ ಅವಧಿ ಪೂರ್ಣಗೊಳಿಸಿದ 650 ಯೋಧರು

Team Udayavani, Jan 19, 2020, 12:49 PM IST

bg-tdy-1

ಬೆಳಗಾವಿ: ಪ್ರಾಣ ಭಯ ಬಿಟ್ಟು ದೇಶ ರಕ್ಷಣೆ ಮಾಡುತ್ತೇವೆ. ಯಾರ ದಾಳಿಗೂ ಹೆದರುವುದಿಲ್ಲ ಎಂಬ ಪ್ರತಿಜ್ಞೆಯೊಂದಿಗೆ ಬೆಳಗಾವಿಯ ಮರಾಠಾ ಲಘು ಪದಾತಿ ದಳ ಕೇಂದ್ರದ 650 ಯೋಧರು ಶನಿವಾರ ತಮ್ಮ ತರಬೇತಿ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕರ್ತವ್ಯಕ್ಕೆ ತೆರಳಲು ಸಿದ್ಧರಾದರು.

ಎಂಎಲ್‌ಐಆರ್‌ಸಿ ಕೇಂದ್ರದಲ್ಲಿ ಶನಿವಾರ ನಡೆದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಯೋಧರು ರಾಷ್ಟ್ರಧ್ವಜ ಹಿಡಿದು ಲೆಫ್ಟ್ ನಂಟ್‌ ಜನರಲ್‌ ದುಷ್ಯಂತಸಿಂಗ್‌ ಅವರ ಸಮ್ಮುಖದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು. ಬ್ರಿಗೇಡಿಯರ್‌ ಗೋವಿಂದ ಕಾಲವಾಡ ಅವರು ಎಂಎಲ್‌ಐಆರ್‌ಸಿಯಿಂದ ಭವ್ಯ ಸ್ವಾಗತ ನೀಡಿದರು.

ನಂತರ ತರಬೇತಿ ಪಡೆದ ಯೋಧರಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಲೆಫ್ಟ್ ನಂಟ್‌ ಜನರಲ್‌ ದುಷ್ಯಂತ ಸಿಂಗ್‌ ಅವರು, ಭಾರತೀಯ ಸೇನಾ ಯೋಧರನ್ನು ಪರಿಪೂರ್ಣವಾಗಿ ತರಬೇತಿಗೊಳಿಸಿ ದೇಶ ಸೇವೆಗೆ ಸಿದ್ಧಗೊಳಿಸುವ ಹಿರಿಮೆ ಮತ್ತು ಇತಿಹಾಸ ಮರಾಠಾ ಲಘು ಪದಾತಿ ದಳ ಕೇಂದ್ರಕ್ಕಿದೆ. ಇದರ ಘನತೆ ಹಾಗೂ ಗೌರವ ಕಾಪಾಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಯೋಧರಿಗೆ ಕಿವಿಮಾತು ಹೇಳಿದರು.

ಯೋಧರು ತಮ್ಮ ಜೀವನದಲ್ಲಿ ಶಿಸ್ತು ಹಾಗೂ ದೈಹಿಕ ಕ್ಷಮತೆಗೆ ಹೆಚ್ಚಿನ ಮಹತ್ವ ನೀಡಬೇಕು. ಇದು ಮುಂದೆ ನಿಮ್ಮ ಉಜ್ವಲ ಭವಿಷ್ಯಕ್ಕೆ ಕಾರಣವಾಗಲಿದೆ. ದೇಶ ರಕ್ಷಣೆಯ ವಿಷಯ ಬಂದಾಗ ನೀವು ಇಲ್ಲಿ ಪಡೆದ ಕಠಿಣ ತರಬೇತಿಯನ್ನು ದೇಶ ರಕ್ಷಣೆಗೆ ಮುಡಿಪಾಗಿರಬೇಕು ಎಂದು ಕಿವಿಮಾತು ಹೇಳಿದರು.

ತರಬೇತಿ ಸಮಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಯೋಧರಿಗೆ ವಿವಿಧ ಪುರಸ್ಕಾರ ನೀಡಿ ಗೌರವಿಸಲಾಯಿತು. ಎಲ್ಲ ವಿಭಾಗದಲ್ಲಿ ಆತ್ಯುತ್ತಮ ಪ್ರದರ್ಶನ ನೀಡಿದ ಸುನೀಲ ಪಾಟೀಲಗೆ ಕರ್ನಲ್‌ ಆರ್‌.ಡಿ. ನಿಕ್ಕಮ್‌ ಪ್ರಶಸ್ತಿ, ಕೇಶವರಾವ್‌ ತಾಳೇಕರ ಪ್ರಶಸ್ತಿಯನ್ನು ಸಿಪಾಯಿ ಸ್ವಪ್ನಿಲ್‌ ಕವಳೆ, ಮೇ. ಎಸ್‌.ಎಸ್‌. ಬ್ರಾರ್‌ ಟ್ರೋಫಿಯನ್ನು ಸಿಪಾಯಿ ಅನಿಕೇತ ಕರಾಡೆ, ಕರ್ನಲ್‌ ಎನ್‌.ಜೆ. ನಾಯರ್‌ ಪ್ರಶಸ್ತಿಯನ್ನು ಸಿಪಾಯಿ ಆಕಾಶ ಪರಾಂಡೆ, ಸುಚಾ ಸಿಂಗ್‌ ಸ್ಮಾರಕ ಪ್ರಶಸ್ತಿಯನ್ನು ಸಿಪಾಯಿ ಮೋಜೆ ಸುನಿಲ ಟ್ರಿಂಬಕ್‌ ಮತ್ತು ನಾಮದೇವ ಜಾಧವ ಪ್ರಶಸ್ತಿಯನ್ನು ಸಿಪಾಯಿ ಸುನೀಲ ಪಾಟೀಲ ಪಡೆದುಕೊಂಡರು. ಮರಾಠಾ ಲಘು ಪದಾತಿ ದಳ ಕೇಂದ್ರದ ಹಿರಿಯ ಸೇನಾಧಿಕಾರಿಗಳು ಹಾಗೂ ಯೋಧರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

police

Belgavi;ಗೋ ಸಾಗಾಟ ಲಾರಿ ತಡೆದ ಹಿಂದೂ ಕಾರ್ಯಕರ್ತರು: ಬಿಗುವಿನ ವಾತಾವರಣ

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.