7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ

Team Udayavani, Jan 2, 2020, 12:41 PM IST

bg-tdy-3

ಬೆಳಗಾವಿ: ಆರ್ಥಿಕ ಗಣತಿ ಕಾರ್ಯವನ್ನು ಪ್ರಪ್ರಥಮ ಬಾರಿಗೆ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್‌. ಬಿ. ಬೊಮ್ಮನಹಳ್ಳಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 7ನೇ ಆರ್ಥಿಕ ಗಣತಿಯ ಕ್ಷೇತ್ರ ಕಾರ್ಯಾಚರಣೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಕೃಷಿ ಹಾಗೂ ಕೃಷಿಯೇತರ ಉದ್ಯಮಗಳ ಪಟ್ಟಿಯನ್ನು ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ತಯಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ಆರ್ಥಿಕ ಗಣತಿಯಲ್ಲಿ ಗಣತಿದಾರರು ತಮಗೆ ನಿರ್ದಿಷ್ಟ ಪಡಿಸಿದ, ಗಡಿಯೊಳಗೆ ಬರುವ ಪ್ರತಿ ಮನೆ, ಕಟ್ಟಡಗಳಿಗೂ ಭೇಟಿ ನೀಡುವುದರ ಮೂಲಕ ಅಲ್ಲಿ ನಡೆಯುವ ಉದ್ಯಮ ಅಥವಾ ವ್ಯಾಪಾರ ಘಟಕಗಳ, ಮಾಲೀಕರ ಲಿಂಗವಾರು, ಸಾಮಾಜಿಕ  ಪಂಗಡವಾರು ಮಾಹಿತಿಯನ್ನು, ಉದ್ಯಮವಾರು ಕೆಲಸಗಾರರ ಮಾಹಿತಿ, ಉದ್ಯಮಿ ಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಯನ್ನು ಕಲೆ ಹಾಕುತ್ತಾರೆ ಎಂದರು.

ಈ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಲು ಮಾತ್ರ ಉಪಯೋಗಿಸಲಾಗುತ್ತಿದ್ದು, ಎಲ್ಲ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದರು.

ಸಾಮಾನ್ಯ ಸೇವಾ ಕೇಂದ್ರದ ಮುಖ್ಯಸ್ಥರು ಗಣತಿದಾರರು ಮತ್ತು ಮೇಲ್ವಿಚಾರರಿಗೆ ಜನಸಾಮಾನ್ಯರೊಂದಿಗೆ ಸೌಹಾರ್ದ ಯುತವಾಗಿ ಸಂವಹನ ನಡೆಸಿ ಅಪೇಕ್ಷಿತ ಮಾಹಿತಿಯನ್ನು ಸಂಗ್ರಹಿಸಲು ಸೂಕ್ತ ನಿರ್ದೇಶನಗಳನ್ನು ನೀಡಲು ಸೂಚಿಸಿದ ಜಿಲ್ಲಾಧಿಕಾರಿಗಳು ಈ ಗಣತಿ ಕಾರ್ಯವನ್ನು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಜಿಲ್ಲೆಯಾದ್ಯಂತ ನಿರ್ವಹಿಸಿ ಗುಣಮಟ್ಟದ ಅಂಕಿ ಅಂಶಗಳನ್ನು ನಿಗದಿತ ಅವಧಿಯಲ್ಲಿ ಸಂಗ್ರಹಿಸಬೇಕು ಎಂದರು.

ಈ ಗಣತಿ ಕಾರ್ಯವು 2020 ಜನವರಿ 1ರಿಂದ ಮಾರ್ಚ್‌ 31ರವರೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿದೆ. ಜನ ಸಾಮಾನ್ಯರು ಸಹ ಸಾಮಾನ್ಯ ಸೇವಾ ಕೇಂದ್ರದಿಂದ ನೀಡಲಾದ ಗುರುತಿನಚೀಟಿಯೊಂದಿಗೆ ತಮ್ಮ ಮನೆ ಮತ್ತು ಉದ್ಯಮಗಳಿಗೆ ಆಗಮಿಸುವ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದರು.

ಗಣತಿ ಸಂದರ್ಭದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಹಂತದ ಅಧಿಕಾರಿ, ಸಿಬ್ಬಂದಿಗಳಿಂದ ಸೂಕ್ತ ಸಹಕಾರ ಅಗತ್ಯವಾಗಿದೆ ಎಂದರು.  ರೇಖಾ ಬಿ. ಶೆಟ್ಟರ, ಪಿ.ಜಿ. ಕುಲಕರ್ಣಿ, ವೀರೇಶ ಪುರಾಣಿಕ, ಕಿರಣ ಜೋಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.