Udayavni Special

ದೌರ್ಜನ್ಯ ಪ್ರಕರಣ ಸಮರ್ಪಕ ತನಿಖೆಗೆ ಕ್ರಮ

ಎಸ್‌ಸಿ-ಎಸ್‌ಟಿ ಜಿಲ್ಲಾ ಜಾಗೃತಿ-ಉಸ್ತುವಾರಿ ಸಮಿತಿ ಸಭೆ |ಒತ್ತಾಯಪೂರ್ವಕ ಸಾಲ ವಸೂಲಿ ಬೇಡ

Team Udayavani, Jul 8, 2021, 6:22 PM IST

7bgv-17

ಬೆಳಗಾವಿ: ಸ್ಮಶಾನ ಭೂಮಿ ಒದಗಿಸಲು ಸರ್ಕಾರಿ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸುವಂತೆ ಎಲ್ಲ ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ. ಪ್ರಸ್ತಾವ ಸಲ್ಲಿಕೆಯಾದ ತಕ್ಷಣವೇ ಮಂಜೂರಾತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಸಭೆಗಳಲ್ಲಿ ಚರ್ಚಿಸಿದಂತೆ ಬೆ„ಲಹೊಂಗಲ, ಅಥಣಿ ಹಾಗೂ ಇತರ ತಾಲೂಕುಗಳಲ್ಲಿ ಸ್ಮಶಾನಕ್ಕೆ ಜಾಗ ನೀಡುವ ಕುರಿತು ಮಾತನಾಡಿದ ಜಿಲ್ಲಾ  ಧಿಕಾರಿಗಳು, ತಾಲೂಕು ಮಟ್ಟದ ಅಧಿ ಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂಪರ್ಕದಲ್ಲಿದ್ದು, ಪರಿಶೀಲಿಸಲಾಗುತ್ತಿದೆ. ಸ್ಮಶಾನಕ್ಕೆ ಜಾಗ ನೀಡಲು ಖಾಸಗಿ ಭೂ ಮಾಲೀಕರಿಗೂ ಅವಕಾಶ ನೀಡಲಾಗುವುದು. ಖಾಸಗಿ ಭೂ ಮಾಲೀಕರು ಸ್ವಇಚ್ಛೆಯಿಂದ ಜಾಗ ನೀಡಲು ಮುಂದಾಗಬೇಕು ಎಂದು ತಿಳಿಸಿದರು.

ನಗರದ ಆರ್‌.ಪಿ.ಡಿ. ವೃತ್ತದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ಸ್ಥಾಪನೆಗೆ ಸಂಬಂಧಿ ಸಿದಂತೆ ನಿಯಮಾವಳಿ ಪ್ರಕಾರ ಪ್ರಕ್ರಿಯೆ ಆರಂಭಿಸಬೇಕು ಎಂದು ಪಾಲಿಕೆಯ ಆಯುಕ್ತರಿಗೆ ನಿರ್ದೇಶನ ನೀಡಿದ ಅವರು, ನಿಪ್ಪಾಣಿಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಖರೀದಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಅಧಿ ಕಾರಿಗಳಿಗೆ ಸೂಚನೆ ನೀಡಿದರು. ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಮರ್ಪಕ ತನಿಖೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ಮುಂದಿನ ದೌರ್ಜನ್ಯ ತಡೆ ಸಭೆಗಳಿಗೆ ಡಿ.ಎಸ್‌.ಪಿ.ಗಳು ಕೂಡ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಡಿಸಿ ಸೂಚನೆ ನೀಡಿದರು.

ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು ಎಂದು ಮೈಕ್ರೊಫೈನಾನ್ಸ್‌ ಹಾಗೂ ಮತ್ತಿತರ ಹಣಕಾಸು ಸಂಸ್ಥೆಗಳ ಸಭೆ ನಡೆಸಿ, ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿ ವೇತನ ವಿಳಂಬವಾಗಿದ್ದರೆ ಕೂಡಲೇ ಉನ್ನತ ಅ ಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗುವುದು ಎಂದು ತಿಳಿಸಿದರು. ನ್ಯಾಯಾಲಯದಲ್ಲಿ ದೌರ್ಜನ್ಯ ಪ್ರಕರಣಗಳ ಸಮರ್ಪಕ ನಿರ್ವಹಣೆಗೆ ಒಬ್ಬ ಅ ಧಿಕಾರಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಅಮರನಾಥ್‌ ರೆಡ್ಡಿ ತಿಳಿಸಿದರು.

ಡಿಸಿಪಿ ಡಾ| ವಿಕ್ರಮ್‌ ಆಮ್ಟೆ ಮಾತನಾಡಿ, ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನಿಯಮಾವಳಿ ಪ್ರಕಾರ ತನಿಖೆ ಕೈಗೊಂಡು ದೋಷಾರೋಪಣೆ ಪಟ್ಟಿ ಸಲ್ಲಿಸಲಾಗುತ್ತಿದೆ. ಯಾವುದೇ ಪ್ರಕರಣಗಳಲ್ಲಿ ಬಿ ರಿಪೋರ್ಟ್‌ ಹಾಕುವುದು ಸುಲಭವಲ್ಲ. ಹಿರಿಯ ಅ ಧಿಕಾರಿಗಳೂ ಪರಿಶೀಲಿಸುವುದರಿಂದ ವಿನಾಕಾರಣ ಬಿ ರಿಪೋರ್ಟ್‌ ಹಾಕಲಾಗುವುದಿಲ್ಲ ಎಂದು ಸದಸ್ಯರ ಗಮನಕ್ಕೆ ತಂದರು. ನಿಪ್ಪಾಣಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಷಯ ಪ್ರಸ್ತಾಪಿಸಿದ ಸದಸ್ಯ ಅಶೋಕ ಅಸೋದೆ ಅವರು, ಸ್ಥಳೀಯ ಭೂಮಾಲೀಕರು ಜಮೀನು ನೀಡಲು ಮುಂದಾಗಿದ್ದು, ಇದನ್ನು ತಕ್ಷಣವೇ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸುವಂತಹ ಡಿ.ಎಸ್‌.ಪಿ ಮಟ್ಟದ ಅ ಧಿಕಾರಿಗಳು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದರೆ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸಾಧ್ಯವಾಗಲಿದೆ. ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳನ್ನು ನಿರ್ವಹಿಸುವ ಡಿ.ಎಸ್‌.ಪಿ.ಗಳನ್ನು ಸಭೆಗೆ ಕರೆಸಬೇಕು. ಇದರಿಂದ ಇಂತಹ ಪ್ರಕರಣಗಳ ಸಮರ್ಪಕ ತನಿಖೆ ಹಾಗೂ ದೋಷಾರೋಪಣೆ ಪಟ್ಟಿ ಸಲ್ಲಿಸಲು ಸಾಧ್ಯವಾಗಲಿದೆ ಎಂದು ಹೇಳಿದರು. ನೂರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡಿದ್ದರೂ ಉತಾರ ಇಲ್ಲದಿರುವ ಕಾರಣಕ್ಕೆ ಪರಿಹಾರ ಮತ್ತಿತರ ಸೌಲಭ್ಯ ಸಿಗುತ್ತಿಲ್ಲ. ಹೀಗಾಗಿ ಅಂತಹ ಕುಟುಂಬಗಳಿಗೆ ಉತಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ ತಳವಾರ ಅವರು, ಹುಕ್ಕೇರಿ ತಾಲೂಕು ಇಂಗಳಿ ಗ್ರಾಮದ ಸ್ಮಶಾನ ಭೂಮಿ ಉತಾರ ಇನ್ನೂ ನೀಡುತ್ತಿಲ್ಲ. ಇನ್ನೂ 36 ಗ್ರಾಮಗಳಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಭೂಮಿ ಮಂಜೂರಾತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿ ಸಿದ ತಹಶೀಲ್ದಾರರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕರಿಗೆ ಮುಕ್ತವಾಗಿ ಕೋವಿಡ್‌ ಲಸಿಕೆ ನೀಡಲಾಗುತ್ತಿದ್ದರೂ ಕೆಲ ರಾಜಕೀಯ ವ್ಯಕ್ತಿಗಳು ತಮಗೆ ಬೇಕಾದವರಿಗೆ ಮಾತ್ರ ಟೋಕನ್‌ ನೀಡುವ ಮೂಲಕ ಲಸಿಕಾಕರಣವನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಧಿಕಾರಿಗಳಿಗೆ ಒತ್ತಾಯಿಸಿದರು.

ಜಿಪಂ ಸಿಇಒ ದರ್ಶನ್‌ ಎಚ್‌.ವಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಸಕಲೇಶಪುರದಲ್ಲಿ60 ಕೋತಿಗಳ ಮಾರಣ ಹೋಮ:ಅಮಾನವೀಯ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಬಾಲಿವುಡ್ ನಟ

Putturu Udayavani News

ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ

CII to work with Serum Institute to expand vaccination across small towns, rural areas

 ಎಸ್‌ ಐ ಐ ನೊಂದಿಗೆ ಸಿಐಐ ಒಪ್ಪಂದ ..!

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಮಕ್ಕಳ ಕಳ್ಳ ಸಾಗಾಣಿಕೆ;  ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

ಶಿಶುಕಾಮ/ಮಕ್ಕಳ ಕಳ್ಳ ಸಾಗಾಣಿಕೆ; ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

fghfyhrtytr

ಸಿಎಂ ಹುದ್ದೆ ತಪ್ಪಿದರೂ ಸಿಹಿ ಬೆಲ್ಲದ ಆಸೆ

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢ

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Putturu Udayavani News

ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

gfdgf

ಯೋಗೀಶಗೌಡ ಕೊಲೆ ಪ್ರಕರಣ; ಮತ್ತೆ ಚುರುಕಾದ ಸಿಬಿಐ ತನಿಖೆ

fghfyhrtytr

ಸಿಎಂ ಹುದ್ದೆ ತಪ್ಪಿದರೂ ಸಿಹಿ ಬೆಲ್ಲದ ಆಸೆ

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ನೆರವು

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ರೂ. ನೆರವು

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

ಸಕಲೇಶಪುರದಲ್ಲಿ60 ಕೋತಿಗಳ ಮಾರಣ ಹೋಮ:ಅಮಾನವೀಯ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಬಾಲಿವುಡ್ ನಟ

Putturu Udayavani News

ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ

CII to work with Serum Institute to expand vaccination across small towns, rural areas

 ಎಸ್‌ ಐ ಐ ನೊಂದಿಗೆ ಸಿಐಐ ಒಪ್ಪಂದ ..!

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

gfdgf

ಯೋಗೀಶಗೌಡ ಕೊಲೆ ಪ್ರಕರಣ; ಮತ್ತೆ ಚುರುಕಾದ ಸಿಬಿಐ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.