ಸಿಪಿಐ ವರ್ತನೆ ಖಂಡಿಸಿ ವಕೀಲರ ಪ್ರತಿಭಟನೆ

Team Udayavani, Feb 6, 2021, 7:14 PM IST

advocate protest

ಬೆಳಗಾವಿ: ನಗರದ ಮಾಳಮಾರುತಿ ಪೊಲೀಸ್‌ ಠಾಣೆಗೆ ಹೋಗಿದ್ದ ನ್ಯಾಯವಾದಿಯೊಬ್ಬರಿಗೆ ಅಲ್ಲಿನ ಸಿಪಿಐ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ನ್ಯಾಯವಾದಿಗಳು ಸುಮಾರು ಮೂರು ಗಂಟೆಗಳ ಕಾಲ ರಸ್ತೆ ನಡೆ ನಡೆಸಿ ಪ್ರತಿಭಟಿಸಿದ ಪ್ರಸಂಗ ಶುಕ್ರವಾರ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ದಿಢೀರನೆ ರಸ್ತೆ ತಡೆ ನಡೆಸಿದ ವಕೀಲರು, ಕಕ್ಷಿದಾರರ ಪರ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ವಕೀಲರ ಸಂಘದ ಸದಸ್ಯ ಚೇತನ್‌ ಈರಣ್ಣವರ ಜೊತೆ ಮಾಳಮಾರುತಿ ಠಾಣೆಯ ಸಿಪಿಐ ಸುನೀಲ ಪಾಟೀಲ ಅಸಭ್ಯವಾಗಿ  ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಡಿಸಿಪಿ ವಿಕ್ರಮ್‌ ಆಮ್ಟೆ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರೂ ವಕೀಲರು ರಸ್ತೆ ತಡೆ ಕೈಬಿಡಲಿಲ್ಲ. ಬದಲಾಗಿ ವಕೀಲರನ್ನು ಗೌರವಿಸದ ಸಿಪಿಐ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ವಕೀಲರ ಪ್ರತಿಭಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಮತ್ತು ಸಾರ್ವಜನಿಕರು  ಪರದಾಡಬೇಕಾಯಿತು. ವಕೀಲರು ತಮ್ಮ ಪಟ್ಟು ಸಡಿಲಿಸದೇ ರಸ್ತೆ ತಡೆ ಮುಂದುವರಿಸಿದ್ದರಿಂದ ಸ್ಥಳಕ್ಕೆ ಆಗಮಿಸಿದ ಮಾಳಮಾರುತಿ ಸಿಪಿಐ ಸುನೀಲ ಪಾಟೀಲ ಕ್ಷಮೆ ಕೋರಿದರು. ನಾನು ಅವಾಚ್ಯ ಶಬ್ದಗಳನ್ನು ಬಳಸಿಲ್ಲ. ಆದರೂ ವಕೀಲರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದರು.

 ಇದನ್ನೂ ಓದಿ :ಬಿಜೆಪಿಗೇ ಅರವಿಂದ ಪಾಟೀಲ ತಿರುಗುಬಾಣ

ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ಉಪ ಆಯುಕ್ತರು ವಕೀಲರ ಜೊತೆ ಸಂಧಾನ ಮಾತುಕತೆ ನಡೆಸಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.