ವಾಯುಪಡೆ ತರಬೇತಿ ಕೇಂದ್ರಕ್ಕೆ ಏರ್ ಮಾರ್ಷಲ್ ಭೇಟಿ
Team Udayavani, Nov 6, 2019, 12:22 PM IST
ಬೆಳಗಾವಿ: ಭಾರತೀಯ ವಾಯು ಸೇನೆಯ ಏರ್ ಮಾರ್ಷಲ್ ಎ.ಎಸ್.ಬುಟೋಲಾ ಸಾಂಬ್ರಾದಲ್ಲಿರುವ ಭಾರತೀಯ ವಾಯುಪಡೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಆಲ್ಲಿನ ತರಬೇತಿ ಚಟುವಟಿಕೆಗಳನ್ನು ಪರಿಶೀಲಿಸಿದರು.
ಏರ್ ಮಾರ್ಷಲ್ ಅವರನ್ನು ಸ್ವಾಗತಿಸಿದ ಏರಮನ್ ತರಬೇತಿ ಶಾಲೆಯ ಏರ್ ಕಮಾಂಡರ್ ಆರ್ ರವಿಶಂಕರ್ ತರಬೇತಿ ಕೇಂದ್ರದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ತರಬೇತಿಯ ವಿವಿಧ ಹಂತದ ಚಟುವಟಿಕೆಗಳನ್ನು ವೀಕ್ಷಿಸಿದ ಏರ್ ಮಾರ್ಷಲ್ ಅವರು ತರಬೇತಿದಾರರ ಜೊತೆ ಸಂವಾದ ನಡೆಸಿದರು. ನಂತರ ಮಾತನಾಡಿದ ಏರ್ ಮಾರ್ಷಲ್ ಎ.ಎಸ್. ಬುಟೋಲಾ ಅವರು, ಏರ್ಮನ್ಗಳು ಭಾರತೀಯ ವಾಯುಪಡೆಯ ಭವಿಷ್ಯವಾಗಿರುವುದರಿಂದ ಅವರಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡುವ ಮತ್ತು ಅದನ್ನು ನಿರ್ವಹಿಸುವ ಅಗತ್ಯವಿದೆ. ತರಬೇತಿದಾರರು ಈ ಅವಧಿಯಲ್ಲಿ ಉನ್ನತ ತಂತ್ರಜ್ಞಾನದ ಜ್ಞಾನ ಪಡೆದುಕೊಳ್ಳಬೇಕು ಎಂದರು. ಏರ್ ಮಾರ್ಷಲ್ ಅವರ ಪತ್ನಿ ಮೋನಿಕಾ ಬುಟೋಲಾ ಹಾಗೂ ವಾಯುಪಡೆ ಹಿರಿಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ