Udayavni Special

ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ


Team Udayavani, Jan 17, 2021, 4:26 PM IST

ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಳಗಾವಿ: ಇಲ್ಲಿನ ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ನಿವಾಸ “ಸ್ಫೂರ್ತಿ” ಗೆ ಭಾನುವಾರ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಭೇಟಿ ನೀಡಿದರು.

ದಿ.ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮನಗಳನ್ನು ಅರ್ಪಿಸಿದ ಅವರು,  ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅವರು ಕೋವಿಡ್ ನಿಂದ ಬಳಲುತ್ತಿರುವಾಗ ತಾವೂ ಸಹ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದನ್ನು ನೆನಪಿಸಿಕೊಂಡು, ಅವರ ನಿಧನ ದೊಡ್ಡ ನಷ್ಟ ಉಂಟುಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ದಿ.ಸುರೇಶ ಅಂಗಡಿಯವರ ಧರ್ಮಪತ್ನಿ ಮಂಗಳಾ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ.ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ.ಅಂಗಡಿಯವರಿಗೆ  ಸಾಂತ್ವನ ಹೇಳಿ, ದುಃಖ ಸಹಿಸಿಕೊಳ್ಳುವ ಶಕ್ತಿ ಬರಲೆಂದು ತೀವ್ರ ಶೋಕ ವ್ಯಕ್ತಪಡಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ದಿ‌.ಸುರೇಶ ಅಂಗಡಿಯವರ ತಾಯಿ ಸೋಮವ್ವ ಚನ್ನಬಸಪ್ಪ ಅಂಗಡಿಯವರು ನಾಗೇರಹಾಳದ (ಕೊಂಡಸಕೊಪ್ಪ) ನಿವಾಸದಲ್ಲಿದ್ದರು‌.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್ , ಶಾಸಕ ಅನಿಲ ಬೆನಕೆ, ಉಪಸ್ಥಿತರಿದ್ದರು.

ಇದನ್ನೂ ಓದಿ:ರೈತರು- ಜನರ ಅಭಿವೃದ್ದಿಗೆ ಯಡಿಯೂರಪ್ಪ ಯಾವುದೇ ರೀತಿ ಹಿಂದೆ ಬಿದ್ದಿಲ್ಲ: ಅಮಿತ್ ಶಾ

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ತಲುಪುವ ಎಲ್ಲಾ ಮಾರ್ಗಗಳಲ್ಲಿ ತೀವ್ರ ಬಿಗಿ, ಭದ್ರತೆ ಏರ್ಪಡಿಸಲಾಗಿತ್ತು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆಹಾರ ಸುರಕ್ಷತಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಉಪಹಾರ ಸಿದ್ಧಪಡಿಸಲಾಗಿತ್ತು.

ದಿ.ಸುರೇಶ್ ಅಂಗಡಿಯವರ ಆಪ್ತ ಸಿಬ್ಬಂದಿ ವರ್ಗದ ರಾಜು ಜೋಷಿ, ಶ್ರೀಕಾಂತ ಕಡಕೋಳ, ಸಂತೋಷ ತುಬಚಿ, ಶಿವಲಿಂಗಯ್ಯ ಅಲ್ಲಯ್ಯನವರಮಠ ಮತ್ತಿತರ ಕೆಲವೇ ಜನರಿಗೆ ಭೇಟಿ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

ಶಶಿಕಲಾರ ರಾಜಕೀಯ ನಿವೃತ್ತಿಯ ಅಸಲಿ ಕಹಾನಿ ಏನು?

ಶಶಿಕಲಾರ ರಾಜಕೀಯ ನಿವೃತ್ತಿಯ ಅಸಲಿ ಕಹಾನಿ ಏನು?

ಮೂರೇ ತಿಂಗಳಲ್ಲಿ ಬದುಕು ತುಟ್ಟಿ

ಮೂರೇ ತಿಂಗಳಲ್ಲಿ ಬದುಕು ತುಟ್ಟಿ

ಕೇಂದ್ರ ಬಜೆಟ್‌-ಭಾರತದ ನಗರಗಳಿಗೆ ನವಯುಗ

ಕೇಂದ್ರ ಬಜೆಟ್‌-ಭಾರತದ ನಗರಗಳಿಗೆ ನವಯುಗ

ಆರೆಸ್ಸೆಸ್‌-ಕ್ರೈಸ್ತ ಪ್ರತಿನಿಧಿ ಸಭೆ

ಆರೆಸ್ಸೆಸ್‌-ಕ್ರೈಸ್ತ ಪ್ರತಿನಿಧಿ ಸಭೆ

ಲಸಿಕೆ ನೋಂದಣಿ ಪ್ರಕ್ರಿಯೆ ಸರಳೀಕರಣವಾಗಬೇಕು

ಲಸಿಕೆ ನೋಂದಣಿ ಪ್ರಕ್ರಿಯೆ ಸರಳೀಕರಣವಾಗಬೇಕು

Untitled-1

ಸಂಸ್ಕೃತಿ; ಜೀವನಶೈಲಿ ನಿರ್ದೇಶಿಸುವ ಕಲೆ

ಒಳಗನ್ನು ತುಂಬುವುದು ಹೊಸ ಬೆಳಕು

ಒಳಗನ್ನು ತುಂಬುವುದು ಹೊಸ ಬೆಳಕುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರೇ ತಿಂಗಳಲ್ಲಿ ಬದುಕು ತುಟ್ಟಿ

ಮೂರೇ ತಿಂಗಳಲ್ಲಿ ಬದುಕು ತುಟ್ಟಿ

Untitled-1

ಸುಲಲಿತ ಜೀವನ ಸೂಚ್ಯಂಕ ಹೊಂದಿದ ದೇಶದ ನಗರಗಳ ಯಾದಿ : ಮಂಗಳೂರಿಗೆ 20ನೇ ಸ್ಥಾನ

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Congress protest in chikkaballapura

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ.ಅಕ್ಕಿ

narayan

ಮೆಘಾ ಫುಡ್ ಪಾರ್ಕ್ ಕಾಮಗಾರಿ ವಿಳಂಬ: ಸಚಿವ ಡಾ. ನಾರಾಯಣಗೌಡ ಗರಂ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಶಶಿಕಲಾರ ರಾಜಕೀಯ ನಿವೃತ್ತಿಯ ಅಸಲಿ ಕಹಾನಿ ಏನು?

ಶಶಿಕಲಾರ ರಾಜಕೀಯ ನಿವೃತ್ತಿಯ ಅಸಲಿ ಕಹಾನಿ ಏನು?

Untitled-1

ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾನಿಲಯ ಘಟನೆ ಮಣಿಪಾಲದ ರಶ್ಮಿ ಪರ ಶೋಭಾ ಟ್ವೀಟ್‌

ಕ್ವಾರ್ಟರ್‌ ಫೈನಲ್‌ಗೆ ಸಿಂಧು

ಕ್ವಾರ್ಟರ್‌ ಫೈನಲ್‌ಗೆ ಸಿಂಧು

Untitled-1

ಮತ್ತೂಂದು ಸ್ಪೇಸ್‌ ಎಕ್ಸ್‌ ರಾಕೆಟ್‌ ಸ್ಫೋಟ

ಕಾರು ಮಾರಾಟ ಪ್ರಕರಣ : ಸಿಐಡಿ ಅಧಿಕಾರಿ ಜತೆ ಆರೋಪಿ ಸಂಭಾಷಣೆ!

ಕಾರು ಮಾರಾಟ ಪ್ರಕರಣ : ಸಿಐಡಿ ಅಧಿಕಾರಿ ಜತೆ ಆರೋಪಿ ಸಂಭಾಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.