ನೌಕರರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಯತ್ನ

ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ 6ನೇ ತಾಲೂಕು ಸಮ್ಮೇಳನ

Team Udayavani, Jun 28, 2022, 6:06 PM IST

20

ಚಿಕ್ಕೋಡಿ: ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳಲ್ಲಿ 63 ಸಾವಿರ ನೌಕರರು ಕಾರ್ಯ ಮಾಡುತ್ತಿದ್ದಾರೆ. ನೌಕರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿಐಟಿಯು ನೌಕರರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾದ ಹೋರಾಟ ಮಾಡುತ್ತಿದೆ ಎಂದು ಗ್ರಾಮ ಪಂಚಾಯತ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ. ಜೈನೆಖಾನ್‌ ಹೇಳಿದರು.

ಇಲ್ಲಿನ ಶ್ರೀ ಪರಟಿನಾಗಲಿಂಗೇಶ್ವರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡ 6ನೇ ತಾಲೂಕು ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೆಮ್ಮಾರಿ ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ನೌಕರರ ಕುಟುಂಬಗಳಿಗೆ ಸರಕಾರದಿಂದ 30 ಲಕ್ಷ ರೂ. ಪರಿಹಾರ ಕೊಡಿಸಲಾಗಿದೆ ಎಂದರು.

ಕೇಂದ್ರ-ರಾಜ್ಯ ಸರಕಾರ ಜನ ಹಾಗೂ ನೌಕರರ ವಿರೋಧಿ ಶಾಸನಗಳನ್ನು ಜಾರಿಗೆ ತರುವ ಮೂಲಕ ನೌಕರರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ನೌಕರರ ಸಮಸ್ಯೆ ಬಗೆಹರಿಸುವುದಕ್ಕಾಗಿ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ 1988ರಲ್ಲಿ ಮಾರುತಿ ಮಾನ್ಪಡೆ ಹಾಗೂ ಎನ್‌.ಕೆ. ಉಪಾಧ್ಯಾಯ ಅವರು ಸಂಘಟನೆ ಹುಟ್ಟು ಹಾಕಿದರು. ಮಾನ್ಪಡೆಯವರು ಜಿಲ್ಲಾ ಪರಿಷತ್‌ಗೆ ಆಯ್ಕೆಯಾದ ನಂತರ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವವರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಸರಕಾರದ ಗಮನಕ್ಕೆ ತಂದು ಅವುಗಳನ್ನು ಬಗೆಹರಿಸುವ ಕಾರ್ಯ ಮಾಡಿದರು ಎಂದರು.

ತಾಪಂ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಮಾಜಿ ಅಧ್ಯಕ್ಷ ಟಿ. ಎನ್‌. ಬಭಗೌಡ ಮಾತನಾಡಿ, ಸಂಘಟನೆಯೊಂದಿಗೆ ನೌಕರರು ಸದಾಕಾಲ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ನೌಕರರ ಸಂಘದ ದುಂಡಪ್ಪಾ ಭಜನಾಯಕ, ಸಿಕಂದರ ಸಯ್ಯದ, ಗಣಪತಿ ಗುರವ, ಸುಮಿತ ಸಿರಗುಪ್ಪಿ, ಪ್ರವೀಣ ಖೋತ ಕುಮಾರ ಯಮಕನಮರಡಿ, ಗೌರವ್ವಾ ಮಡಿವಾಳ, ಶಕುಂತಲಾ ಉರಣೆ, ಭಾರತಿ ಸನದಿ, ಯಲ್ಲಪ್ಪಾ ನಾಯಿಕ, ಮಡ್ಡಪ್ಪಾ ಭಜಂತ್ರಿ, ದಯಾನಂದ ಪಾಟೀಲ, ರಮೇಶ ಪಾಟೀಲ, ಇತರರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.