ಹೋರಾಟಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಸಿದ್ಧತೆ

Team Udayavani, Sep 18, 2019, 10:43 AM IST

ಬೆಳಗಾವಿ: ಕೇಂದ್ರ ಸರ್ಕಾರ ಎಲ್ಲ ವಲಯದಲ್ಲೂ ಉದ್ಯೋಗ ಭದ್ರತೆ ನೀಡುವ ಬದಲು ಕಸಿದುಕೊಳ್ಳುವ ಚಿಂತನೆ ನಡೆಸುತ್ತಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಅಪಾಯದಲ್ಲಿದ್ದು, ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 28 ಲಕ್ಷ ಕಾರ್ಯಕರ್ತೆಯರು ಅಪಾಯದಲ್ಲಿ ಇದ್ದಾರೆ. ಉದ್ಯೋಗ ಭದ್ರತೆ ಒದಗಿಸುವ ಬದಲು ಉದ್ಯೋಗ ಕಸಿದುಕೊಳ್ಳುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಸರ್ಕಾರದ ವಿರುದ್ಧ ಸಹಿ ಚಳವಳಿ, ಬಾಲ ವಿಕಾಸ ಕೇಂದ್ರಗಳಲ್ಲಿ ಜನರಿಂದ ಸಭೆ, ಜಾಥಾ ನಡೆಸಲಾಗುವುದು. ಇದಕ್ಕೂ ಬಗ್ಗದಿದ್ದರೆ ಹೋರಾಟ ತೀವ್ರತೆ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಅನೇಕ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಕೌಶಲ ಅಭಿಯಾನ, ಮಾತೃ ವಂದನಾ ಯೋಜನೆಗಳನ್ನು ಹೆಚ್ಚುವರಿಯಾಗಿ ಹೇರುತ್ತಿದ್ದಾರೆ. ಬ್ಯಾಂಕುಗಳ ವಿಲೀನ, ಮೋಟಾರು ಕಾಯ್ದೆ ತಿದ್ದುಪಡಿ, ರೈಲ್ವೆ ಖಾಸಗೀಕರಣ, ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭಿಸಲು ಸರ್ಕಾರ ಮುಂದಾಗಿದೆ. ಇದು ಸುಮಾರು 1500 ಅಂಗನವಾಡಿ ಕೇಂದ್ರಗಳ ಮೇಲೆ ಪ್ರಭಾವ ಬೀರಲಿದೆ ಎಂದು ಆಪಾದಿಸಿದರು.

ಸರ್ಕಾರದ ವಿವಿಧ ಯೋಜನೆಗಳಿಗೆ ಹೆಚ್ಚುವರಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಂದ ಕೆಲಸ ಮಾಡಿಸಿಕೊಳ್ಳಲಾಗುತ್ತಿದ್ದು, ಆದರೆ ಕಳೆದ ಆರು ತಿಂಗಳಿಂದ ಉಳಿದಿರುವ ತಲಾ 18 ಸಾವಿರ ರೂ. ಬಾಕಿ ಹಣ ಇನ್ನೂವರೆಗೆ ಪಾವತಿಸಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಪ್ರಾಮಾಣಿಕತೆಯನ್ನು ಪ್ರಶ್ನೆ ಮಾಡಲಾಗುತ್ತಿದೆ. ಎಂಟು ತಿಂಗಳಿಂದ ಕಡತ ವಿಲೇವಾರಿಯಾಗದೇ ಹಣಕಾಸು ಇಲಾಖೆಯಲ್ಲಿ ತುಕ್ಕು ಹಿಡಿದು ಕುಳಿತಿದೆ. ಸಚಿವೆ ಶಶಿಕಲಾ ಜೊಲ್ಲೆ ಅವರು ನಮ್ಮ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

9,500 ರೂ. ಸಿಗಬೇಕಾದ ಸಂಬಳದಲ್ಲಿ ಕೇವಲ 8 ಸಾವಿರ ರೂ. ಮಾತ್ರ ಕೈಗೆ ಸಿಗುತ್ತಿದೆ. ರಾಜ್ಯದಲ್ಲಿ ಪದೇ ಪದೇ ಸರ್ಕಾರಗಳು ಬದಲಾಗುತ್ತಿರುವುದರಿಂದ ಆಡಳಿತ ಸಮರ್ಪಕವಾಗಿ ಇಲ್ಲವಾಗಿದೆ. ಅಧಿಕಾರಿಗಳು ವರ್ಗಾವಣೆ ಆಗುತ್ತಿರುವುದರಿಂದ ಸಮಸ್ಯೆ ತಲೆದೋರಿದೆ. ತಾಲೂಕಿಗೆ ಒಬ್ಬರೇ ಮೇಲ್ವಿಚಾರಕರು ಇದ್ದಾರೆ. ಒಂದು ತಾಲೂಕನ್ನು ಒಬ್ಬರೇ ನಿರ್ವಹಣೆ ಮಾಡಲು ಸಾಧ್ಯವೇ. ಜನಪ್ರತಿನಿಧಿಗಳು ರಾಜಕಾರಣ ಮಾಡುತ್ತಿದ್ದರೆ ಜನರ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಸಮಗ್ರ ಬಾಲ ವಿಕಾಸ ಯೋಜನೆ ಸೇವೆ(ಐಸಿಡಿಎಸ್‌)ಗೆ ಇನ್ನೂವರೆಗೆ ಪ್ರಾಥಮಿಕವಾಗಿ ಅನುದಾನ ಹೆಚ್ಚಳ ಮಾಡಿಲ್ಲ. ಯಾವುದೇ ಸವಲತ್ತು ನೀಡಿಲ್ಲ. ಆರೂವರೆ ಗಂಟೆ ಕೆಲಸ ಹೆಚ್ಚಳ ಮಾಡಲಾಗಿದೆ. ಈ ಮುಂಚೆ ಕೇವಲ ನಾಲ್ಕೂವರೆ ತಾಸು ಕೆಲಸ ಮಾಡುತ್ತಿದ್ದರು. ಮಕ್ಕಳ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ನಿರ್ವಹಿಸುತ್ತಿದ್ದರೂ ಸರ್ಕಾರ ಮಾತ್ರ ನಮ್ಮ ಸಮಸ್ಯೆ ಕೇಳುತ್ತಿಲ್ಲ ಎಂದು ದೂರಿದರು.

ಯೋಜನೆಗಳು ಜಾರಿಯಾದಾಗ ಕಾರ್ಯಕರ್ತೆಯರಿಂದ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಆದರೆ ಅನುದಾನ ಬಿಡುಗಡೆ ಮಾಡದೇ ಸತಾಯಿಸಲಾಗುತ್ತಿದೆ. ಆರು ತಿಂಗಳಾದರೂ ಇನ್ನೂ ಬಾಕಿ ಹಣ ಬಂದಿಲ್ಲ. ಮಹಿಳೆಯರು ಕಣ್ಣೀರು ಸುರಿಸುತ್ತಿದ್ದಾರೆ. ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಎಂದು ನೆಪ ಹೇಳಿ ಜಾರಿಕೊಳ್ಳುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ತರಕಾರಿ, ಮೊಟ್ಟೆಗೆ ಹಣ ಕೊಡುತ್ತಿಲ್ಲ. ಸಚಿವರು, ಹಿರಿಯ ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವ ಮುನ್ನ ನಿಮ್ಮ ಕಚೇರಿಗಳಿಗೆ ಹೋಗಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಸರಿಯಾಗಿ ಬರುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಸಲಹೆ ನೀಡಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್‌.ಎಸ್‌. ಸುನಂದಾಮ ಜಿಲ್ಲಾಧ್ಯಕ್ಷೆ ದೊಡ್ಡವ್ವ ಪೂಜಾರಿ, ಮಂದಾ ನೇವಗಿ, ಜಿ.ಎಂ. ಜೈನೇಖಾನ ಸುದ್ದಿಗೋಷ್ಠಿಯಲ್ಲಿದ್ದರು.

ರಾಜ್ಯದಲ್ಲಿ ಸರ್ಕಾರಗಳು ಬದಲಾಗುತ್ತಿರುವುದರಿಂದ ಆಡಳಿತ ಸಮರ್ಪಕವಾಗಿ ಇಲ್ಲವಾಗಿದೆ. ತಾಲೂಕಿಗೆ ಒಬ್ಬರೇ ಮೇಲ್ವಿಚಾರಕರು ಇದ್ದಾರೆ. ಒಂದು ತಾಲೂಕನ್ನು ಒಬ್ಬರೇ ನಿರ್ವಹಣೆ ಮಾಡಲು ಸಾಧ್ಯವೇ. ಜನಪ್ರತಿನಿಧಿಗಳು ರಾಜಕಾರಣ ಮಾಡುತ್ತಿದ್ದರೆ ಜನರ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ ಪ್ರಶ್ನಿಸಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಚನ್ನಮ್ಮನ ಕಿತ್ತೂರು: ಕಿತ್ತೂರು ಚನ್ನಮ್ಮಾಜಿಯ ವಿಜಯೋತ್ಸವ ನಿಮಿತ್ತ ಕಿತ್ತೂರು ಪಟ್ಟಣದಲ್ಲಿ ಹಮ್ಮಿಕೊಳ್ಳಲುವ ಕಿತ್ತೂರು ಉತ್ಸವ ಅ. 23, 24 ಹಾಗೂ 25ರಂದು ಅದ್ಧೂರಿಯಾಗಿ...

  • ಅಥಣಿ: ಗುಂಡೆವಾಡಿ ಗ್ರಾಮದ ಪಿಕೆಪಿಎಸ್‌ನಲ್ಲಿ ನಡೆದ ಚುನಾವಣೆಯಲ್ಲಿ ಖೊಟ್ಟಿ ಮತದಾನ ವಿರೋಧಿಸಿ ಹಾಗೂ ಮರು ಮತದಾನಕ್ಕೆ ಆಗ್ರಹಿಸಿ ಪಿಕೆಪಿಎಸ್‌ ಕಚೇರಿ ಬಂದ್‌...

  • ಉಗಾರ ಬಿಕೆ: ಗ್ರಾಮೀಣ ಕಲಾವಿದರಿಗೆ ಗ್ರಾಪಂ ಮಟ್ಟದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಾನಪದ ಕಲಾವಿದರು ಸಂಸದ ಅಣ್ಣಾಸಾಹೇಬ ಜೊಲ್ಲೆ...

  • ಸವದತ್ತಿ: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಇನಾಮಹೊಂಗಲದ ರಸ್ತೆಗೆ ನಿರ್ಮಿಸಿದ ಪರ್ಯಾಯ ರಸ್ತೆಯ ಮೇಲೆ ನೀರು ಹರಿಯುತ್ತಿರುವುದರಿಂದ ಶನಿವಾರ...

  • ಚಿಕ್ಕೋಡಿ: ಶೈಕ್ಷಣಿಕ ಜಿಲ್ಲಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಚಿಕ್ಕೋಡಿ ನಗರದಲ್ಲಿರುವ ಸಾರ್ವಜನಿಕ ಕೇಂದ್ರ ಗ್ರಂಥಾಲಯ ಅವ್ಯವಸ್ಥೆ ಆಗರವಾಗಿದೆ. ಶಿಥಿಲಾವಸ್ಥೆ...

ಹೊಸ ಸೇರ್ಪಡೆ