Anganwadi ಮೊಟ್ಟೆ ಪ್ರಕರಣ: ಸಿಡಿಪಿಓ ಅಮಾನತುಗೊಳಿಸಿ ಹೆಬ್ಬಾಳ್ಕರ್ ಆದೇಶ
Team Udayavani, Aug 10, 2024, 2:14 PM IST
ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸಚಿವರು ಆದೇಶಿಸಿದ್ದಾರೆ.
ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು.
ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ ಸುಧಾರಣೆ ತರಬೇಕೆಂದು ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು. ಚಿತ್ರೀಕರಣದ ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸಪ್ ಗ್ರೂಪ್ ಗಳ ಮೂಲಕ ಅಪ್ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೋ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ. ಇದೀಗ ವೀಡಿಯೋ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು.
ಇಂತಹ ತಪ್ಪನ್ನು ಮಾಡಿದರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್ ಕಂಬಗಳಿಗೆ ಹಾನಿ
Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ
Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು
Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್ ಪತ್ತೆ
Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.