ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೊಬ್ಬ ಶಿಕ್ಷಕಿ ಕೋವಿಡ್ ಸೋಂಕಿನಿಂದ ಸಾವು
Team Udayavani, May 23, 2021, 3:18 PM IST
ಬೆಳಗಾವಿ: ಇತ್ತೀಚೆಗೆ ಲೋಕಸಭೆ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹುದಲಿಯ ಕನ್ನಡ ಭಾಷಾ ಶಿಕ್ಷಕಿ, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀದೇವಿ ಹುಕ್ಕೇರಿ (37) ಶನಿವಾರ ರಾತ್ರಿ ಕೋವಿಡ್ ಸೋಂಕಿನಿಂದ ಅಕಾಲಿಕ ಮರಣ ಹೊಂದಿದ್ದಾರೆ.
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೋವಿಡ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಸಾವಿಗೀಡಾಗಿದ್ದಾರೆ. ಲೋಕಸಭೆ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರೇ ಕೊರೊನಾಗೆ ಬಲಿಯಾಗಿದ್ದು ಆಘಾತ ಮೂಡಿಸಿದೆ.
ನಿನ್ನೆಯಷ್ಟೇ ಹುಕ್ಕೇರಿ ತಾಲೂಕಿನ ಹುಲ್ಲೋಳ್ಳಿ ಗ್ರಾಮದ ಹುಲ್ಲೋಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ರಾಜಶೇಖರ ತಳವಾರ (56) ಕೋವಿಡ್ ಸೋಂಕಿಗೆ ಬಲಿಯಾಗಿದ್ದರು.
ಇದನ್ನೂ ಓದಿ : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉತ್ತಮ: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ