ಹೋರಾಟದಲ್ಲಿ ಪಾಲ್ಗೊಳ್ಳಲು ಮನವಿ

ಅಕಾಲಿಕ ಮಳೆಗೆ ನಾಶವಾಗಿರುವ ಬೆಳೆಗೆ ಪರಿಹಾರ ಘೋಷಣೆ ಮಾಡಬೇಕು.

Team Udayavani, Dec 10, 2021, 6:05 PM IST

ಹೋರಾಟದಲ್ಲಿ ಪಾಲ್ಗೊಳ್ಳಲು ಮನವಿ

ಅಡಹಳ್ಳಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಸರ್ಕಾರಕ್ಕೆ ತಮ್ಮ ಅಹವಾಲನ್ನು ಹೋರಾಟದ ಮೂಲಕ ಸಲ್ಲಿಸಿ ಸರ್ಕಾರದ ಗಮನ ಸೆಳೆಯಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಜಿಲ್ಲಾ ಅಧ್ಯಕ್ಷ ಈರನಗೌಡ ಪಾಟೀಲ ಮನವಿ ಮಾಡಿದರು.

ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ನಡೆದ ರೈತ ಸಂಘ ಹಾಗೂ ಹಸಿರುಸೇನೆ ಸಂಘದ ಸದಸ್ಯರುಗಳ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಡಿ.13ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಜಿಲ್ಲಾದ್ಯಂತ ಅಕಾಲಿಕ ಮಳೆಗೆ ನಾಶವಾಗಿರುವ ಬೆಳೆಗೆ ಪರಿಹಾರ ಘೋಷಣೆ ಮಾಡಬೇಕು.

ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಯವರು ಕಬ್ಬಿನ ದರ ನಿಗದಿ ಪಡಿಸಬೇಕು, ಸಿ2 ಪ್ಲಸ್‌ 50% ಕನಿಷ್ಟ ಬೆಂಬಲ ಬೆಲೆ ಕಾನೂನಾತ್ಮಕವಾಗಿ ಜಾರಿಗೊಳಿಸಿ ವಿದ್ಯುತ್‌ ಖಾಸಗೀಕರಣ ಹಿಂಪಡೆಯಬೇಕು, ರಾಜ್ಯ ಸರ್ಕಾರದ ಭೂ ಸುಧಾರಣೆ, ಕಾರ್ಮಿಕರ,  ಜಾನುವಾರ ಮಾರಾಟ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು, ಶಿವಸಾಗರ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಿಸಿ ರೈತರ ಕಬ್ಬಿನ ಬಾಕಿ ಹಣ ನೀಡಬೇಕು, ರಾಮದುರ್ಗ ತಾಲೂಕಿನ ಪ್ಯಾರಿ ಶುಗರ್ನವರು ರೈತರಿಂದ 2500 ರೂ. ಕಬ್ಬಿನ ದರದ ಒಪ್ಪಿಗೆ ಪತ್ರ ಪಡೆದು ಕಬ್ಬು ಕಟಾವಿಗೆ ಆದೇಶ ನೀಡುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮದುರ್ಗ ಸುತ್ತಲಿನ ಸಕ್ಕರೆ ಕಾರ್ಖಾನೆಯವರು ನೀಡುವ ಸ್ಪರ್ಧಾತ್ಮಕ ದರ 2700 ನೀಡುವಂತೆ ಪ್ಯಾರಿ ಶುಗರ್ನವರಿಂದಲೂ 2700 ರೂ. ದರ ಕೋಡಿಸಬೇಕು. ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ತೇರದಾಳ ಸಾವರಿನ್‌ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬರಬೇಕಾದ 21 ಕೋಟಿ ರೂ. ಕಬ್ಬಿನ ಬಾಕಿ ಹಣ ಕೊಡಿಸಿ ಪುನಃ ಕಾರ್ಖಾನೆ ಪ್ರಾರಂಭಿಸುವ ಕುರಿತು ಸರ್ಕಾರದ ಗಮನ ಸೆಳೆಯಲು ರೈತರ ಆಂದೋಲನ ನಡೆಸಲಾಗುತ್ತಿದ್ದು, ಡಿ.12ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯ ಹಿಂಭಾಗದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಆಂದೋಲನದಲ್ಲಿ ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ ಹಾಗೂ ಹಾವೇರಿ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕು ಅಧ್ಯಕ್ಷ ಬಾಳಪ್ಪ ಬಿರಾದಾರಪಾಟೀಲ, ಅಥಣಿ ತಾಲೂಕು ಅಧ್ಯಕ್ಷ ರಾವಸಾಬ ಜಗತಾಪ, ರೈತ ಮುಖಂಡ ಶಿವಪುತ್ರ ಜಕಬಾಳ, ಯಮನಪ್ಪ ಚಿಂಚನೂರ, ಉದಕುಮಾರ ಪಾಟೀಲ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.