ನಾಯಕರ ಚುನಾವಣೆ ಪ್ರಚಾರಕ್ಕೆ ಸರಕಾದ ಅನ್ನದಾತರ ಆತ್ಮಹತ್ಯೆ!


Team Udayavani, Apr 20, 2018, 7:00 AM IST

Farmers-Suicide-Election.jpg

ಬೆಳಗಾವಿ: ರೈತರ ಆತ್ಮಹತ್ಯೆಯನ್ನೇ ಅಸ್ತ್ರವಾಗಿಟ್ಟುಕೊಂಡು ರಾಜಕಾರಣಿಗಳು ಚುನಾವಣೆಯಲ್ಲಿ ಹಣಾಹಣಿ ನಡೆಸುತ್ತಿದ್ದಾರೆ. 
ಸಾಮಾನ್ಯವಾಗಿ ರೈತರ ಸಮಸ್ಯೆಗಳು ಚುನಾವಣೆಗೆ ಮಾತ್ರ ಸೀಮಿತವಾಗಿರುತ್ತವೆ ಎಂಬುದಕ್ಕೆ ಪೂರಕವಾಗಿಯೇ ಈಗ ರೈತರ ಆತ್ಮಹತ್ಯೆಗಳನ್ನೇ ಬತ್ತಳಿಕೆಯ ಬಾಣ ತೆಗೆದಂತೆ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಗ್ರಾಮೀಣ ಭಾಗದಲ್ಲಿ ಸಮಾವೇಶ ನಡೆಸುವಾಗ ರೈತರ ಆತ್ಮಹತ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷಗಳ ಅವಧಿಯಲ್ಲಿ ಹೆಚ್ಚು ಆತ್ಮಹತ್ಯೆಗಳು ನಡೆದಿವೆ ಎಂದು ಬಿಜೆಪಿಯವರು ಪ್ರಚಾರ ನಡೆಸುತ್ತಿದ್ದಾರೆ. ದೇಶದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ರೈತರ ಆತ್ಮಹತ್ಯೆಗಳ ಪ್ರಮಾಣ ಹೆಚ್ಚಾಗಿದೆ ಎಂದು ಕಾಂಗ್ರೆಸ್‌ನವರು ಅಂಕಿ- ಅಂಶಗಳ ಸಮೇತ ಹೇಳುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿಗಳು ಈ ಎರಡೂ ಪಕ್ಷಗಳ ಸರಕಾರ ಬಂದರೆ ಆತ್ಮಹತ್ಯೆಯೇ ಗತಿ ಎಂಬ ಪ್ರಚಾರಕ್ಕೆ ಬಿದ್ದಿದ್ದಾರೆ.

ಆತ್ಮಹತ್ಯೆ ಪ್ರಮಾಣ ಹೆಚ್ಚಳ: ಸಾಲ ಮಾಡಿ ಆತ್ಮಹತ್ಯೆ ಒಂದೇ ದಾರಿ ಎಂದು ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಾಲ ಮನ್ನಾ ಮಾಡಿಲ್ಲ ಎಂದು ಸರಕಾರಗಳತ್ತ ಬೆರಳು ಮಾಡಿ ಅನ್ನದಾತ ನೇಣಿಗೆ ಕೊರಳೊಡ್ಡುವುದು ಸಾಮಾನ್ಯವಾಗಿದೆ. ಏಪ್ರಿಲ್‌ 2013ರಿಂದ 2017ರ ನವೆಂಬರ್‌ವರೆಗೆ ರಾಜ್ಯದಲ್ಲಿ ಒಟ್ಟು 2,515 ರೈತರು ಆತ್ಮಹತ್ಯೆ ಮಾಡಿಕೊಂಡರೆ, 2018 ಮಾರ್ಚ್‌ವರೆಗೆ 15 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2017-18ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 85 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಈವರೆಗೆ 3.05 ಕೋಟಿ ರೂ. ವಿತರಿಸಲಾಗಿದೆ. ಸವದತ್ತಿ ತಾಲೂಕಿನಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಜಿಲ್ಲೆಯಲ್ಲಿ ಮೊದಲನೇ ಸ್ಥಾನದಲ್ಲಿದೆ.

ರೈತರ ಮತಗಳನ್ನು ಸೆಳೆಯಲು 
ವಿವಿಧ ಕಸರತ್ತುಗಳನ್ನು ಮಾಡಲು ಹೊರಟಿರುವ ಅಭ್ಯರ್ಥಿಗಳು ತಮ್ಮ ಭಾಷಣದುದ್ದಕ್ಕೂ ರೈತರ ಬಗ್ಗೆ ಅಪಾರ ಕಾಳಜಿ ಎಂಬಂತೆ ಬಿಂಬಿಸಲು ಹೊರಟಿದ್ದಾರೆ. ಚುನಾವಣೆ ಬಂದಾಗ ಎಲ್ಲರೂ ರೈತರ ಸಂಪೂರ್ಣ ಸಾಲ ಮನ್ನಾ, ಬೆಳೆಗೆ ಬೆಂಬಲ ಬೆಲೆ, ಬಡ್ಡಿ ರಹಿತ ಸಾಲ ಎಂಬ ಅನೇಕ ಭರವಸೆಗಳನ್ನೇ ಕೊಡುತ್ತಾರೆ ಹೊರತು ಇಲ್ಲಿಯವರೆಗೆ ಯಾರೊಬ್ಬರೂ ಈ ಭರವಸೆ ಈಡೇರಿಸಲು ಮುಂದಾಗುತ್ತಿಲ್ಲ.

ಹಸಿರು ಶಾಲುಗಳ ಸರದಾರರು: ಅಭ್ಯರ್ಥಿಗಳು ಚುನಾವಣೆ ಪ್ರಚಾರಕ್ಕಾಗಿ ಹಸಿರು ಶಾಲುಗಳನ್ನೇ ಹೆಗಲಿಗೆ ಹಾಕಿಕೊಳ್ಳುತ್ತಿದ್ದಾರೆ. ಗಂಟೆಗಟ್ಟಲೇ ಭಾಷಣ ಕೊಡುತ್ತ ರೈತರೇ ದೇಶದ ಬೆನ್ನೆಲುಬು ಅಂತ ಪ್ರಚಾರಕ್ಕೆ ನಿಂತಿದ್ದಾರೆ. ಈ ಬಾರಿ ರೈತರಿಗೆ ಆಶಾಕಿರಣವಾಗಿ ನಮ್ಮ ಪಕ್ಷ ನಿಲ್ಲಲಿದೆ. ರೈತರ ಕಣ್ಣೊರೆಸುವ ಕೆಲಸ ಮಾಡಲಾಗುವುದು ಎಂದು ಉದ್ದುದ್ದ ಭಾಷಣ ಮಾಡುತ್ತಿದ್ದಾರೆ. ರೈತರನ್ನೇ ಗುರಿಯಾಗಿಸಿಕೊಂಡು ಹಸಿರು ಶಾಲುಗಳೇ ಚುನಾವಣೆಯ ಅಜೆಂಡಾವಾಗಿ ಮಾಡಿಕೊಂಡಿರುವುದು ಕಂಡು ಬರುತ್ತಿದೆ.

ಹಳ್ಳಿಗಳಲ್ಲಿ ರೈತ ಪರ ಪ್ರಚಾರ
ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಇರುವ ಹಳ್ಳಿಗಳಲ್ಲಿ ಅಭ್ಯರ್ಥಿಗಳು ರೈತ ಪರ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಅಥಣಿ, ಚಿಕ್ಕೋಡಿ, ರಾಯಬಾಗ, ಕಿತ್ತೂರ, ಬೈಲಹೊಂಗಲ, ಹುಕ್ಕೇರಿ, ರಾಮದುರ್ಗ ಸಹಿತ ವಿವಿಧ ತಾಲೂಕಿನಲ್ಲಿ ಈಗಾಗಲೇ ಹಸಿರು ಶಾಲು ಹಾಕಿಕೊಂಡು ರೈತರು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ರೈತರು ಯಾವ ಅಭ್ಯರ್ಥಿಗಳ ಕೈ ಹಿಡಿಯುತ್ತಾರೆ ಎಂಬುದು ನೋಡಬೇಕಾಗಿದೆ.

ಸುಳ್ಳು ಭರವಸೆ ನೀಡಿ ಮತದಾರರನ್ನು ಸೆಳೆಯುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಜನರನ್ನು ಯಾಮಾರಿಸಿ ಗೆದ್ದ ಬಳಿಕ ಮತ್ತೆ ಮುಂದಿನ ಚುನಾವಣೆಗೆ ಇವರು ಬರುತ್ತಾರೆ. ಇಂಥ ಖೊಟ್ಟಿ ಭರವಸೆಗಳಿಗೆ ಆಯೋಗ ಕಡಿವಾಣ ಹಾಕಬೇಕು.
– ಕುರಬೂರು ಶಾಂತಕುಮಾರ, ರೈತ ಹೋರಾಟಗಾರರು

– ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.