Assembly session; ಆನ್‌ಲೈನ್‌ ಗೇಮಿಂಗ್‌ಗೆ ಜಿಎಸ್‌ಟಿ: ವಿಧೇಯಕ ಅಂಗೀಕಾರ

ಗದ್ದಲದ ನಡುವೆ ಐದು ಪ್ರಮುಖ ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಒಪ್ಪಿಗೆ

Team Udayavani, Dec 11, 2023, 8:46 PM IST

Assembly session; ಆನ್‌ಲೈನ್‌ ಗೇಮಿಂಗ್‌ಗೆ ಜಿಎಸ್‌ಟಿ: ವಿಧೇಯಕ ಅಂಗೀಕಾರ

ಸುವರ್ಣ ವಿಧಾನಸೌಧ: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌, ಕ್ಯಾಸಿನೋ ಸೇರಿ ದಂಡನಾರ್ಹ ಕ್ರೀಡೆಗಳಿಗೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವ ಕರ್ನಾಟಕ ಸರಕು-ಸೇವೆಗಳ ತಿದ್ದುಪಡಿ ವಿಧೇಯಕವನ್ನೂ ಒಳಗೊಂಡಂತೆ ಐದು ಪ್ರಮುಖ ವಿಧೇಯಕಗಳಿಗೆ ಗದ್ದಲದ ನಡುವೆ ಯಾವುದೇ ಚರ್ಚೆ ಇಲ್ಲದೇ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಜಿಎಸ್‌ಟಿ, ಕಡ್ಡಾಯ ಗ್ರಾಮೀಣ ವೈದ್ಯ ಸೇವೆ, ಗ್ರಾಮ ಸ್ವರಾಜ್‌, ಮುದ್ರಾಂಕ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ದೊರೆತಿದೆ. ವಿಧೇಯಕದ ಚರ್ಚೆಯಲ್ಲಿ ಭಾಗವಹಿಸುವಂತೆ ಸ್ಪೀಕರ್‌ ಯು.ಟಿ.ಖಾದರ್‌ ಮಾಡಿದ ಮನವಿಗೆ ಬಿಜೆಪಿ ಹಾಗೂ ಜೆಡಿಎಸ್‌ ಸ್ಪಂದಿಸದ ಕಾರಣಕ್ಕೆ ಗದ್ದಲದ ನಡುವೆಯೇ ವಿಧೇಯಕಗಳನ್ನು ಪಾಸು ಮಾಡಿಕೊಳ್ಳಲಾಗಿದೆ.

ಯಾವುದಕ್ಕೆ ಜಿಎಸ್‌ಟಿ ?: ಜಿಎಸ್‌ಟಿ ಕೌನ್ಸಿಲ್‌ನ 51ನೇ ಸಭೆಯಲ್ಲಿ ಆನ್‌ಲೈನ್‌ ಗೇಮ್‌ , ಡಿಜಿಟಲ್‌ ಸ್ವತ್ತುಗಳು, ದಂಡನಾರ್ಹ ಆಟಗಳು ಎಂದು ಪರಿಗಣಿಸಲ್ಪಟ್ಟ ಬೆಟ್ಟಿಂಗ್‌, ಕ್ಯಾಸಿನೋ, ಜೂಜು, ಕುದುರೆ ರೇಸ್‌ ಹಾಗೂ ಲಾಟರಿಗೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದರ ಅನುಸಾರ ಎಲ್ಲ ರಾಜ್ಯಗಳು ಜಿಎಸ್‌ಟಿ ಕಾಯಿದೆಗೆ ತಿದ್ದುಪಡಿ ತರಬೇಕಿದ್ದರಿಂದ ಸಂಪುಟದ ಒಪ್ಪಿಗೆಯೊಂದಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿತ್ತು. ಈ ಸುಗ್ರೀವಾಜ್ಞೆಯನ್ನು ಈಗ ಕಾಯಿದೆ ರೂಪದಲ್ಲಿ ಜಾರಿಗೆ ತರಲು ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ.

ಈ ವಿಧೇಯಕದ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್‌ ಹಾಗೂ ಬಿಜೆಪಿಯ ಹಲವು ಶಾಸಕರು ಬೇಡಿಕೆ ಸಲ್ಲಿಸಿದ್ದರು. ಆದರೆ ಜಮೀರ್‌ ಅಹ್ಮದ್‌ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಧರಣಿ ನಡೆಸುತ್ತಿರುವುದರಿಂದ ಧ್ವನಿಮತದೊಂದಿಗೆ ಅಂಗೀಕಾರ ನೀಡಲಾಗಿದೆ.

54 ಸೇವೆಗಳ ಮುದ್ರಾಂಕ ಶುಲ್ಕ ಹೆಚ್ಚಳ
ಸಾಲದ ಕರಾರು ಪತ್ರ, ಅಡಮಾನ, ದತ್ತು, ಹಸ್ತಾಂತರ ಪ್ರಮಾಣಪತ್ರ, ಒಪ್ಪಂದ ಪತ್ರ ಸೇರಿ 54 ನೋಂದಣಿಯೇತರ ದಾಖಲೆಗಳ ಮೇಲಿನ ಮುದ್ರಾಂಕ ಶುಲ್ಕವನ್ನು ಕನಿಷ್ಠ ಎರಡರಿಂದ ನಾಲ್ಕು ಪಟ್ಟು ಹೆಚ್ಚಿಸಲು ಅನುಕೂಲವಾಗುವಂತೆ ಮುದ್ರಾಂಕ ಕಾಯಿದೆಗೆ ತಿದ್ದುಪಡಿ ತರಲಾಗಿದೆ.

ಪರ್ಯಾಲೋಚನೆ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನೋಂದಣಿ ಶುಲ್ಕ ಪರಿಷ್ಕರಣೆ ಮಾಡಲಾಗಿದೆ ಎಂಬ ತಪ್ಪು ಅಭಿಪ್ರಾಯ ರವಾನೆಯಾಗಿದೆ. ಆದರೆ ಇದು ನೋಂದಣಿಯೇತರ ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾತ್ರವಾಗಿದೆ. ಬ್ರಿಟಿಷ್‌ ಕಾಲದಿಂದಲೂ ಈ ಶುಲ್ಕ ವಿಧಿಸಲಾಗುತ್ತಿದೆ. 1994ರ ಬಳಿಕ ಇದುವರೆಗೆ ಪರಿಷ್ಕರಣೆಯಾಗಿಲ್ಲ, 5, 10, 20 ರೂ.ನಷ್ಟಿದ್ದ ಶುಲ್ಕವನ್ನು ಈಗ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಿ ಆದಾಯ ಸೋರಿಕೆ ತಡೆಗಟ್ಟುತ್ತಿದ್ದೇವೆ. ಸುಮಾರು 54 ಸೇವೆಗಳಿಗೆ ಇದು ಅನ್ವಯವಾಗಲಿದೆ ಎಂದು ವಿವರಿಸಿದರು.
ದತ್ತು ಪ್ರಮಾಣಪತ್ರದ ಮುದ್ರಾಂಕ ಶುಲ್ಕವು 500ರಿಂದ 1,000 ರೂ.ಗಳಿಗೆ ಹೆಚ್ಚಳವಾಗಲಿದೆ. ಅಫಿಡವಿಟ್‌ಗಳ ಶುಲ್ಕ 20ರಿಂದ 100 ರೂ.ಗಳಿಗೆ, 1 ಲಕ್ಷದವರೆಗಿನ ಚಿಟ್‌ಫ‌ಂಡ್‌ ಒಪ್ಪಂದದ ಮುದ್ರಾಂಕ ಶುಲ್ಕವನ್ನು 100ರಿಂದ 500 ರೂ.ಗಳಿಗೆ, 1 ಲಕ್ಷದವರೆಗಿನ ಸಾಲದ ಒಪ್ಪಂದದ ಮೇಲಿನ ಮುದ್ರಾಂಕ ಶುಲ್ಕವನ್ನು ಶೇ. 0.1ರಿಂದ ಶೇ 0.5ಕ್ಕೆ ಹೆಚ್ಚಿಸುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಕಂಪನಿ ಆರಂಭಕ್ಕೆ ಸಂಬಂಧಿಸಿದ ಪ್ರಮಾಣಪತ್ರಗಳಿಗೆ ಪ್ರಸ್ತುತ 10 ಲಕ್ಷದಿಂದ 50 ಲಕ್ಷದವರೆಗಿನ ಮೌಲ್ಯದ ಕಂಪನಿಗಳಿಗೆ ಪ್ರತಿ ಹತ್ತು ಲಕ್ಷಕ್ಕೆ 1,000 ರೂ. ಶುಲ್ಕವಿದೆ. ಇನ್ಮುಂದೆ ಅದನ್ನು ಪ್ರತಿ ಹತ್ತು ಲಕ್ಷದಿಂದ 1 ಕೋಟಿಯವರೆಗಿನ ಮೌಲ್ಯದ ಕಂಪನಿಗಳಿಗೆ ಪ್ರತಿ ಹತ್ತು ಲಕ್ಷಕ್ಕೆ 5,000 ರೂ. ಶುಲ್ಕ ವಿಧಿಸುವ ಪ್ರಸ್ತಾವ ಮಾಡಲಾಗಿದೆ.

ವಿವಾಹ ವಿಚ್ಛೇದನ ಪ್ರಮಾಣಪತ್ರ, ವಿಭಾಗ ಪತ್ರ, ಬಾಂಡ್‌ಗಳು, ಗುತ್ತಿಗೆ ಒಪ್ಪಂದಗಳೂ ಈ ಮಸೂದೆ ವ್ಯಾಪ್ತಿಯಲ್ಲಿವೆ. ಕಂಪನಿ ಆರಂಭಕ್ಕೆ ಸಂಬಂಧಿಸಿದ ಒಪ್ಪಂದ, ಚಿಟ್‌ ಫ‌ಂಡ್‌ ಒಪ್ಪಂದಗಳು, ವಕೀಲರ ಅಫಿಡವಿಟ್‌ಗಳ ಮುದ್ರಾಂಕ ಶುಲ್ಕವನ್ನು ಹೆಚ್ಚಿಸಲಾಗುತ್ತದೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.