ಲಂಚ ಕೊಡದಿದ್ರೆ ಇಲ್ಲಿ ಚಿಕಿತ್ಸೆ ನೀಡಲ್ಲ!

ಅಥಣಿ ತಾಲೂಕು ಆಸ್ಪತ್ರೆಗೆ ಬೇಕಿದೆ ಮೇಜರ್‌ ಸರ್ಜರಿ

Team Udayavani, Jun 29, 2020, 4:40 PM IST

ಲಂಚ ಕೊಡದಿದ್ರೆ ಇಲ್ಲಿ ಚಿಕಿತ್ಸೆ ನೀಡಲ್ಲ !

ಅಥಣಿ: “”ವೈದ್ಯೋ ನಾರಾಯಣೊ ಹರಿ” ಎಂಬ ಮಾತು ಈಗಲೂ ಪ್ರಚಲಿತದಲ್ಲಿದೆ. ಸಾಕಷ್ಟು ಪ್ರಸಂಗಗಳಲ್ಲಿ ವೈದ್ಯರು ಅನೇಕರಿಗೆ ಪುನರ್ಜನ್ಮ ನೀಡಿದ್ದಾರೆ. ಎಷ್ಟೋ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಆದರೆ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ವ್ಯವಸ್ಥೆ ಇದೆ.

ಕೋವಿಡ್ ಹಾವಳಿಯ ಈ ಸಂಕಷ್ಟ ಕಾಲದಲ್ಲಿ ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವ ಪ್ರತಿಯೊಬ್ಬರಿಂದಲೂ ಚಿಕಿತ್ಸೆಗಾಗಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅಥಣಿ ತಾಲೂಕಾ ಆಸ್ಪತ್ರೆಯಲ್ಲಿ ಹಣ ನೀಡದಿದ್ದರೆ ರೋಗಿಗಳನ್ನು ಮಾತನಾಡಿಸುವುದೇ ಇಲ್ಲ. ಇನ್ನು ಸಮರ್ಪಕ ಚಿಕಿತ್ಸೆ ಕನಸಿನ ಮಾತಾಗಿದೆ. ಒಳಗಡೆ ಹೋದರೆ ಸಾಕು, ಖಾಸಗಿ ಆಸ್ಪತ್ರೆಗಳಂತೆ ಇಲ್ಲಿಯೂ ಪ್ರತಿಯೊಂದು ಚಿಕಿತ್ಸೆಗೂ ಇಂತಿಷ್ಟು ಹಣ ನೀಡಬೇಕು ಎಂದು ದರ ನಿಗದಿ ಮಾಡಲಾಗಿದೆ. ದುಡ್ಡು ಕೊಟ್ಟರಷ್ಟೇ ಚಿಕಿತ್ಸೆ ಮಾಡಲಾಗುತ್ತಿದೆ ಎಂಬ ದೂರುಗಳು ಸಾಮಾನ್ಯವಾಗಿವೆ.

ಹೆರಿಗೆ ಸಮಯದಲ್ಲಿ ಸಿಜೇರಿಯನ್‌ ಮಾಡಿದರೆ ಸುಮಾರು 6ರಿಂದ 7 ಸಾವಿರ ರೂಪಾಯಿ ಕೊಡಬೇಕಾದ ಪರಿಸ್ಥಿತಿ ಇದೆ. ಸಾಮಾನ್ಯ ಹೆರಿಗೆಗೂ ಕೂಡ ಕನಿಷ್ಟ ಒಂದರಿಂದ ಎರಡು ಸಾವಿರ ರೂಪಾಯಿ ತೆರಬೇಕು. ಹಣ ಪಡೆಯದೇ ಯಾವುದೇ ಹೆರಿಗೆ ಸೇವೆ ಸಿಗುವುದಿಲ್ಲ. ಈ ಕುರಿತು ಮೇಲಾಧಿಕಾರಿಗಳಿಗೆ ಸಾಕಷ್ಟು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ಆರೋಪ.

ವೈದ್ಯರು-ಸಿಬ್ಬಂದಿ ಜಗಳ: ಇಲ್ಲಿಯ ಸಿಬ್ಬಂದಿ ಮತ್ತು ವೈದ್ಯರ ನಡುವೆ ಸಮನ್ವಯತೆ ಇಲ್ಲ. ಇದರಿಂದ ನಿತ್ಯವೂ ಸಿಬ್ಬಂದಿ ಮತ್ತು ವೈದ್ಯರ ನಡುವೆ ಜಗಳಗಳು ನಡೆಯುತ್ತಲೇ ಇವೆ. ರೋಗಿಗಳ ವಾರ್ಡ್‌ ಬಳಿಯೇ ವೈದ್ಯರು ಮತ್ತು ಸಿಬ್ಬಂದಿ ಹಲವು ಬಾರಿ ಕಿತ್ತಾಡಿಕೊಂಡಿದ್ದಾರೆ. ವೈದ್ಯರು ಸರಿಯಾದ ಸಮಯಕ್ಕೆ ಬರದೇ ಇರುವುದನ್ನು ಪ್ರಶ್ನಿಸಿದ ಸಿಬ್ಬಂದಿಯೊಬ್ಬರಿಗೆ ಸಾರ್ವಜನಿಕರ ಎದುರೇ ವೈದ್ಯರು ಬೆದರಿಕೆ ಹಾಕಿದ್ದಲ್ಲದೆ ಕೈ ಕೈ ಮಿಲಾಯಿಸಿರುವ ಘಟನೆಯೂ ನಡೆದಿದೆ. ಇದರಿಂದ ತೊಂದರೆ ಅನುಭವಿಸುತ್ತಿರುವವರು ಆಸ್ಪತ್ರೆಗೆ ಬರುವ ರೋಗಿಗಳಾಗಿದ್ದಾರೆ. ಸರಕಾರಿ ಆಸ್ಪತ್ರೆಯ ದುರವಸ್ಥೆಗೆ ಬೇಸತ್ತ ಸ್ಥಳೀಯರು ಅನಾಮಧೇಯ ವ್ಯಕ್ತಿಯ ಹೆಸರಿನಲ್ಲಿ, ನಮಗೆ ಇಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ-ಸಿಗುವ ಭರವಸೆಯೂ ಇಲ್ಲ ಎಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಆದರೆ ಇದುವರೆಗೆ ಯಾವುದೇ ಕ್ರಮ ಆಗಿಲ್ಲ. ಇನ್ನು 108 ಆಂಬುಲೆನ್ಸ್‌ ಸೇವೆಗೂ ಇಲ್ಲಿ ಹಣ ಕೊಡಬೇಕು. ಇಲ್ಲದಿದ್ದರೆ ರೋಗಿ ಮೃತಪಟ್ಟರೂ ಆಂಬುಲೆನ್ಸ್‌ ಬರುವುದಿಲ್ಲ. ಇದರಿಂದ ಬೇಸತ್ತು ಸ್ವಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಿ ಎಂದು ನೊಂದ ರೋಗಿಯೊಬ್ಬ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗಳಿಗಾಗಿ ಹಣ ಪಡೆಯಲಾಗುತ್ತಿದೆ ಎಂಬ ವಿಷಯವಾಗಿ ಇದುವರೆಗೆ ತಮಗೆ ಯಾರೂ ಲಿಖೀತವಾಗಿ ದೂರು ನೀಡಿಲ್ಲ, ಹಣ ಕೊಟ್ಟವರು ಲಿಖೀತವಾಗಿ ದೂರು ನೀಡಿದರೆ ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. – ಡಾ| ಚನಗೌಡ ಪಾಟೀಲ ತಾಲೂಕು ವೈದ್ಯಾಧಿಕಾರಿ

ಇಲ್ಲಿ ಮಾನವೀಯತೆಗಿಂತ ಹಣಕ್ಕೆ ಹೆಚ್ಚು ಬೆಲೆ ಇದೆ. ಸ್ವತಃ ನನ್ನ ಸಹೋದರಿಯ ಹೆರಿಗೆಗಾಗಿ ನಾನೇ ಇಲ್ಲಿ ಮೂರು ಸಾವಿರ ರೂ. ಕೊಟ್ಟಿದ್ದೇನೆ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೇ ಬೆದರಿಕೆ ಹಾಕಿದ್ದಾರೆ. ಉಡಾಫೆಯ ಮಾತು ಆಡಿದ್ದಾರೆ. ಮೇಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. – ಚಿದಾನಂದ ಶೇಗುಣಸಿ ಸಾಮಾಜಿಕ ಕಾರ್ಯಕರ್ತ, ಅಥಣಿ

 

ಸಂತೋಷ ರಾ. ಬಡಕಂಬಿ

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.