ಬಸವ ಧರ್ಮಕ್ಕೆ ಆಂತರಿಕ ಶಕ್ತಿಗಳಿಂದಲೇ ಅಪಾಯ

Team Udayavani, Jul 17, 2019, 10:24 AM IST

bg-tdy-3.

ಬೆಳಗಾವಿ: ಬಸವೇಶ್ವರ ಉದ್ಯಾನವನದಲ್ಲಿ ಮಂಗಳವಾರ ಬಸವಣ್ಣನವರಿಗೆ ಗೌರವ ನಮನ ಕಾರ್ಯಕ್ರಮ ನಡೆಯಿತು.

ಬೆಳಗಾವಿ: ಬಸವ ಸಮಾಜದಲ್ಲಿ ಬಲಪಂಥೀಯರ ಸಂಖ್ಯೆ ಹೆಚ್ಚುತ್ತಿರುವುದು ಸಮಾಜ ಸಂಘಟನೆ ಮತ್ತು ವಿಚಾರಧಾರೆಗಳ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್‌.ಎಸ್‌. ದರ್ಗೆ ಕಳವಳ ವ್ಯಕ್ತಪಡಿಸಿದರು.

ಗುರುಪೂರ್ಣಿಮೆ ಅಂಗವಾಗಿ ಮಂಗಳವಾರ ಬಸವ ಭೀಮ ಸೇನೆಯ ವತಿಯಿಂದ ನಗರದ ಶ್ರೀ ಬಸವೇಶ್ವರ ವೃತ್ತದ ಬಳಿಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಬಸವಣ್ಣನವರಿಗೆ ಗೌರವ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವ ಧರ್ಮಕ್ಕೆ ಬಾಹ್ಯ ಶಕ್ತಿಗಳಿಂದ ಯಾವ ಅಪಾಯ ಇಲ್ಲ. ಆಂತರಿಕ ಶಕ್ತಿಗಳಿಂದಲೇ ಅಪಾಯ ಎದುರಿಸುತ್ತಿದೆ ಎಂದರು.

ಇಡಿ ಜಗತ್ತಿಗೆ ಬಸವಣ್ಣನವರು ಒಬ್ಬ ವಿಸ್ಮಯಕಾರಿ ನಾಯಕರಾಗಿ ವಿಜೃಂಭಿಸುತ್ತಿರುವ ಈ ಸಂದರ್ಭದಲ್ಲಿ ಬಸವಾದಿ ಶರಣರ ಕರ್ಮಭೂಮಿ ಕರ್ನಾಟಕದಲ್ಲಿಯೇ ಬಸವ ಸಮಾಜ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ನಾಡಿನ ಹಿತ, ಸಮಾಜದ ಒಳಿತು, ಅಸ್ತಿತ್ವ, ಸಂಸ್ಕೃತಿ ಹಾಗೂ ಅಸ್ಮಿತೆಯ ಉಳಿವಿಗಾಗಿ ಸಮಾಜದ ನಾಯಕರು ಬಲಪಂಥೀಯ ಶಕ್ತಿಗಳಿಂದ ದೂರ ಸರಿದು ಧರ್ಮ ಗುರುವಿನ ಋಣ ತೀರಿಸಬೇಕು ಎಂದು ಹೇಳಿದರು.

ಸಮಸ್ತ ಲಿಂಗಾಯತ ಮೀಸಲಾತಿ ಹೋರಾಟ ವೇದಿಕೆಯ ಅಧ್ಯಕ್ಷ ಬಿ.ಎಂ. ಚಿಕ್ಕನಗೌಡರ ಮಾತನಾಡಿ, ಧರ್ಮ ಮತ್ತು ಸಂಸ್ಕೃತಿಯ ಉಳಿವಿನ ಹೋರಾಟದ ಜೊತೆಗೆ ಸಮಾಜದ ಬಡ ಮಕ್ಕಳ ಭವಿಷ್ಯದ ಬಗ್ಗೆಯೂ ನಾವಿಂದು ಹೋರಾಡಬೇಕಿದೆ. ಕೃಷಿ ಕಾಯಕ ಆಧಾರಿತ ಸಮಾಜವು ಮತ್ತೆ ಗೌರವಯುತ ಬದುಕು ಕಂಡುಕೊಳ್ಳಬೇಕಾಗಿದೆ. ಈ ದಿಸೆಯಲ್ಲಿ ಮೀಸಲಾತಿ ಹೋರಾಟ ನಡೆಸಲಾಗುತ್ತಿದೆ ಎಂದರು.

ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ಬಸವಣ್ಣನವರು ಅನುಭವ ಮಂಟಪದ ಮೂಲಕ ಸಾರಿದ ಸಮಾನತೆಯ ಕ್ರಾಂತಿ ಮತ್ತೆ ಆರಂಭಿಸಬೇಕಾಗಿದೆ. ಜಗತ್ತಿನ ಇತಿಹಾಸದಲ್ಲಿ ಶೋಷಿತ ಸಮುದಾಯಗಳನ್ನು ಹಾಗೂ ಮಹಿಳೆೆಯರನ್ನು ಒಂದುಗೂಡಿಸಿ, ಅವರಿಗೆ ಸಮಾನತೆಯನ್ನು ಕಲ್ಪಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣ ಮಾಡಿರುವುದು ಬಸವಣ್ಣನವರ ಬಹುದೊಡ್ಡ ಕೊಡುಗೆ ಎಂದರು.

ಲಿಂಗಾಯತ ಸೇವಾ ಸಮಿತಿಯ ರಾಜು ಕುಂದಗೋಳ, ಸಂಚಾರಿ ಗುರುಬಸವ ಬಳಗದ ಬಸವರಾಜ ಪಾಟೀಲ, ಅಖೀಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ನ ನಗರಾಧ್ಯಕ್ಷ ಪ್ರಭು ಬೆಣ್ಣಿ, ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ, ವಿರೂಪಾಕ್ಷಿ ಯಲಿಗಾರ, ನ್ಯಾಯವಾದಿ ಚನ್ನಬಸಪ್ಪ ಬಾಗೇವಾಡಿ, ಆಕಾಶ ಹಲಗೇಕರ, ಕಿರಣ ಪಾಟೀಲ, ಬಿ.ಎಸ್‌.ಪಾಟೀಲ, ಸಿದ್ರಾಮ ಸಾವಳಗಿ, ಯಲ್ಲಪ್ಪ ಹುದಲಿ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.