ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ
Team Udayavani, Dec 6, 2022, 1:01 PM IST
ಬೆಳಗಾವಿ: ಬೆಳಗಾವಿಯಲ್ಲಿ ಬಹಿರಂಗ ಸಭೆ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದತ್ತ ಮುನ್ನುಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿರುವ ಮಹಾರಾಷ್ಟ್ರ ನೋಂದಣಿಯ 6ಕ್ಕೂ ಹೆಚ್ಚು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪುಣೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಹಾರಾಷ್ಟ್ರ ನೋಂದಣಿ ವಾಹನದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಲಾರಿ ಪುಡಿಪುಡಿಯಾಗಿದೆ. ಮಹಾರಾಷ್ಟ್ರ ನೋಂದಣಿಯ ಅನೇಕ ವಾಹನಗಳನ್ನು ತೊಡೆದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಹಾರಾಷ್ಟ್ರ ನೋಂದಣಿ ಇರುವ ಫಲಕದ ಮೇಲೂ ಕಪ್ಪುಮಸಿ ಬಳಿದು ಆಕ್ರೋಶ ಹೊರಹಾಕಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಬೆಳಗಾವಿಯತ್ತ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ