ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ತಾಯಿ ಆತ್ಮಹತ್ಯೆ
Team Udayavani, Nov 19, 2022, 8:52 AM IST
ಬೆಳಗಾವಿ: ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ ನಡೆದಿದೆ.
ಸೌದತ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯ ವಟ್ನಾಳ ಗ್ರಾಮ ಹದ್ದಿಯಲ್ಲಿ ಇರುವ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು ಮೃತ ದುರ್ದೈವಿಗಳನ್ನು ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ (ತನುಜಾ) ಪರಸಪ್ಪ ಗೋಡಿ (32) ಹಾಗೂ ಮಕ್ಕಳಾದ ಸುದೀಪ್ (4 ವರ್ಷ) ಹಾಗೂ ರಾಧಿಕಾ (3 ವರ್ಷ) ಎಂದು ಗುರುತಿಸಲಾಗಿದೆ.
ಸಂಸಾರಿಕ ಜೀವನದ ತಾಪತ್ರಯದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ತನ್ನ ಮಕ್ಕಳನ್ನು ಕರೆದುಕೊಂಡು ನವಿಲು ತೀರ್ಥ ಜಲಾಶಯದ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಸೌದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಿಸಿದ್ದು ತನಿಖೆ ಮುಂದುವರಿದಿದೆ.
ಇದನ್ನೂ ಓದಿ: 7 ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಮೂವರು ಸದಸ್ಯರ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಬ್‌ರಿಜಿಸ್ಟ್ರಾರ್ ಕಚೇರಿಗಳು ಇನ್ನು ಸ್ಮಾರ್ಟ್
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ
ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ