ನವೀಕರಿಸಿದ ಕಟ್ಟಡದಲ್ಲಿ  ಸಿಸಿಬಿ ಠಾಣೆ ಆರಂಭ 


Team Udayavani, Jan 2, 2019, 11:11 AM IST

1-january-17.jpg

ಬೆಳಗಾವಿ: ಮಹಾನಗರದ ಮಾರ್ಕೆಟ್‌ ಪೊಲೀಸ್‌ ಠಾಣೆ ಆವರಣದಲ್ಲಿ ಪಾಳು ಬಿದ್ದ ಕಟ್ಟಡವನ್ನೇ ಬಳಸಿಕೊಂಡು ಸಿಇಎನ್‌(ಸೈಬರ್‌, ಎಕನಾಮಿಕ್‌, ನಾರ್ಕೋಟಿಕ್‌) ವಿಶೇಷ ಪೊಲೀಸ್‌ ಠಾಣೆ ಆರಂಭಿಸಿ ಮಂಗಳವಾರ ಮಹಾನಗರ ಪೊಲೀಸ್‌ ಆಯುಕ್ತ ಡಾ| ಡಿ.ಸಿ. ರಾಜಪ್ಪ ಉದ್ಘಾಟಿಸಿದರು.

ಇದಕ್ಕಿಂತ ಮುನ್ನ ನಗರ ಪೊಲೀಸ್‌ ಕಮಿಷನರ್‌ ಕಚೇರಿ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಇಎನ್‌(ಸಿಸಿಬಿ) ಪೊಲೀಸ್‌ ಠಾಣೆಗೆ ಹೊಸ ರೂಪ ಕೊಡಬೇಕೆಂಬ ಉದ್ದೇಶದಿಂದ ಮಾರ್ಕೆಟ್‌ ಪೊಲೀಸ್‌ ಠಾಣೆಯ ಪಕ್ಕದ ಆವರಣಕ್ಕೆ ಸ್ಥಳಾಂತರಿಸಿ ಹಳೆಯ ಕಟ್ಟಡವನ್ನೇ ನವೀಕರಣಗೊಳಿಸಿ ಬಳಸಿಕೊಳ್ಳಲಾಯಿತು.

ಕಟ್ಟಡ ಉದ್ಘಾಟಿಸಿ ಮಾತನಾಡಿದ ಡಾ| ಡಿ.ಸಿ. ರಾಜಪ್ಪ, ಬಹಳ ದಿನಗಳಿಂದ ಕಮಿಷನರ್‌ ಕಚೇರಿ ಆವರಣದಲ್ಲಿಯೇ ಈ ವಿಭಾಗ ಕಾರ್ಯ ನಿರ್ವಹಿಸುತ್ತಿತ್ತು. ತಮ್ಮ ಕಡೆ ಇದ್ದ ಸೌಲಭ್ಯಗಳನ್ನೇ ಬಳಸಿಕೊಳ್ಳಬೇಕೆಂಬ ಯೋಜನೆ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾರ್ಕೆಟ್‌ ಆವರಣದ ಹಳೆಯ ಕಟ್ಟಡ ಉಪಯೋಗಿಸಿಕೊಳ್ಳಲಾಗಿದೆ. ಮಾರ್ಕೆಟ್‌ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಅತಿ ಸೂಕ್ಷ್ಮ ಪ್ರದೇಶಗಳಿವೆ. ಇಲ್ಲಿ ಸಿಇಎನ್‌(ಸಿಸಿಬಿ) ವಿಭಾಗ ಆರಂಭಿಸುವುದರಿಂದ ಮಾರ್ಕೆಟ್‌ ಠಾಣೆಗೂ ಬಲ ಬರುತ್ತದೆ ಎಂದು ಹೇಳಿದರು. ಮಾರ್ಕೆಟ್‌ ಠಾಣೆ ಸುತ್ತಲೂ ಆಗಾಗ ಕೆಲವು ಅಹಿತಕರ ಘಟನೆಗಳು ಸಂಭವಿಸುತ್ತವೆ. ಜತೆಗೆ ಕಿಡಿಗೇಡಿಗಳು ಶಾಂತಿಗೆ ಭಂಗವನ್ನುಂಟು ಮಾಡುತ್ತಿರುತ್ತಾರೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಿಇಎನ್‌ (ಸಿಸಿಬಿ)ಠಾಣೆ ಹಾಗೂ ಮಾರ್ಕೆಟ್‌ ಠಾಣೆ ಒಂದೇ ಕಡೆ ಮಾಡಲಾಗಿದೆ. ಸಿಬ್ಬಂದಿಗಳ ಮಧ್ಯೆ ಸಮನ್ವಯತೆ ಸಾಧಿಸುವ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಅನುಕೂಲವಾಗುತ್ತದೆ. ಈ ವ್ಯಾಪ್ತಿಯಲ್ಲಿ ಪೊಲೀಸರ ಓಡಾಟ ಹೆಚ್ಚಾಗುವುದರಿಂದ ಠಾಣೆಗೆ ಬಲ ಸಿಕ್ಕಂತಾಗುತ್ತದೆ ಎಂದರು.

ಸಿಇಎನ್‌ (ಸಿಸಿಬಿ) ಠಾಣೆಯ ಕೆಲವು ಸಿಬ್ಬಂದಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಮಾರ್ಕೆಟ್‌ ಠಾಣೆ ವ್ಯಾಪ್ತಿಯಲ್ಲಿ ಕೇಸುಗಳು ಹೆಚ್ಚಾದಾಗ, ಸಮಾಜ ಘಾತುಕ ಶಕ್ತಿಗಳ ಸದೆ ಬಡೆಯಲು ಅಗತ್ಯ ಬಿದ್ದರೆ ಸಿಇಎನ್‌(ಸಿಸಿಬಿ) ಹಾಗೂ ಮಾರ್ಕೆಟ್‌ ಠಾಣೆಯ ಸಿಬ್ಬಂದಿಗಳು ಕೂಡಿಯೇ ಕೆಲಸ ನಿರ್ವಹಿಸಬಹುದಾಗಿದೆ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ವಿಭಾಗ ಡಿಸಿಪಿ ಸೀಮಾ ಲಾಟ್ಕರ್‌, ಅಪರಾಧ ವಿಭಾಗ ಡಿಸಿಪಿ ಮಹಾನಿಂಗ ನಂದಗಾಂವಿ, ನಗರ ಅಪರಾಧ ವಿಭಾಗ ಎಸಿಪಿ ಮಹಾಂತೇಶ್ವರ ಜಿದ್ದಿ, ಮಾರ್ಕೆಟ್‌ ಉಪವಿಭಾಗದ ಎಸಿಪಿ ಎನ್‌.ವಿ. ಬರಮನಿ, ಖಡೇಬಜಾರ್‌ ಉಪವಿಭಾಗದ ಎಸಿಪಿ ಚಂದ್ರಪ್ಪ ಹಾಗೂ ನಗರ ವ್ಯಾಪ್ತಿಯ ಎಲ್ಲ ಠಾಣೆಗಳ ಇನ್ಸಪೆಕ್ಟರ್‌ಗಳು ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

ಕಮಿಷನರ್‌ ಕಚೇರಿ ಆವರಣದಲ್ಲಿ ಕೆಲವು ಕಚೇರಿಗಳಿಗೆ ಕೊರತೆ ಇರುವುದರಿಂದ ಮಾರ್ಕೆಟ್‌ ಆವರಣದಲ್ಲಿಯ ಹಳೆಯ ಕಟ್ಟಡ ಖಾಲಿ ಇತ್ತು. ಹೀಗಾಗಿ ಅದನ್ನೇ ನವೀಕರಿಸಿ ಸಿಇಎನ್‌ (ಸೈಬರ್‌, ಎಕನಾಮಿಕ್‌, ನಾರ್ಕೋಟಿಕ್‌) ಠಾಣೆಗಾಗಿ ಬಳಸಿಕೊಳ್ಳಲಾಗಿದೆ. ಈ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಮಾರ್ಕೆಟ್‌ ಠಾಣೆಯ ಇನ್ಸಪೆಕ್ಟರ್‌ ಅವರೊಂದಿಗೆ ಕೈ ಜೋಡಿಸುವ ಮೂಲಕ ಬಲ ಸಿಕ್ಕಂತಾಗುತ್ತದೆ.
ಡಾ| ಡಿ.ಸಿ. ರಾಜಪ್ಪ,
ಮಹಾನಗರ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.