ಮಾರಾಟವಿಲ್ಲದೆ ಕೊಳೆಯುತ್ತಿವೆ ಹಣ್ಣು-ತರಕಾರಿ


Team Udayavani, Apr 12, 2020, 3:18 PM IST

12-April-17

ಬೆಳಗಾವಿ: ರಾಯಬಾಗ ತಾಲೂಕಿನ ಹಿಡಕಲ್‌ದಲ್ಲಿ ಬೆಳೆದು ನಿಂತಿರುವ ಕ್ಯಾಬೀಜ್‌ ಬೆಳೆ.

ಬೆಳಗಾವಿ: ಕಳೆದ ವರ್ಷ ಹೊಳಿ ಬಂದು ಎಲ್ಲ ಹಾಳು ಮಾಡಿ ಹೋಯಿತು. ಈಗ ಸ್ವಲ್ಪ ಸುಧಾರಿಸಿಕೊಂಡು ಕಣ್ಣು ಬಿಡಬೇಕು ಎನ್ನುವಾಗಲೇ ನಮಗೆ ಗೊತ್ತೆ ಇರದ ಕೊರೊನಾ ಮಹಾಮಾರಿ ಮತ್ತೆ ನಮ್ಮನ್ನು ನೆಲಕಚ್ಚುವಂತೆ ಮಾಡಿದೆ. ಏನು ಮಾಡಬೇಕು. ಯಾರ ಬಳಿ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ.

ಲದಾಗ ಭರಪೂರ ಬೆಳೆ ಇದೆ ಎಂದು ನೋಡಿ ಸಂತೋಷ ಪಡುವಂತಿಲ್ಲ. ಟೊಮಾಟೊ ಹಣ್ಣಾಗಿ ಕಣ್ಣಿಗೆ ಕುಕ್ಕುತ್ತಿವೆ. ಮೆಣಸಿನಕಾಯಿ ಭರ್ಜರಿಯಾಗಿ ಬಂದಿದೆ. ಪಪ್ಪಾಯಿ ಗೊಂಚಲು ಗೊಂಚಲು ಇವೆ. ಕಲ್ಲಂಗಡಿ ಬಳ್ಳಿಯ ತುಂಬಾ ಹರಡಿದೆ. ಒಂದಲ್ಲಾ ಹತ್ತಾರು ತರಕಾರಿಗಳು ತುಂಬಿಕೊಂಡಿದೆ. ಆದರೆ ಯಾವುದೂ ಮಾರಾಟ ಆಗುತ್ತಿಲ್ಲ. ಇನ್ನು ಬೆಳೆದ ಬೆಳೆಗೆ ಬೆಲೆ ಸಿಗುವ ಮಾತು ದೂರವೇ ಉಳಿಯಿತು.

ಈಗೀಗ ಹೊಲದಾಗಿನ ಬೆಳೆ ಹೋದರೆ ಸಾಕು ಎಂಬ ಸ್ಥಿತಿ ಬಂದಿದೆ. ಪ್ರಕೃತಿ ವಿಕೋಪಗಳಿಂದ ಕಂಗೆಟ್ಟು ಹೋಗಿರುವ ರೈತ ಸಮುದಾಯಕ್ಕೆ ಈಗ ಯಾವ ನಿರ್ಧಾರ ಕೈಗೊಳ್ಳಲು ಧೈರ್ಯ ಸಾಲುತ್ತಿಲ್ಲ. ಮುಂಗಾರು ಸಮೀಪಿಸಿದರೂ ಮುಖದಲ್ಲಿ ಬಿತ್ತನೆ ಉತ್ಸಾಹ ಕಾಣುತ್ತಿಲ್ಲ. ಖಾನಾಪುರ, ಗೋಕಾಕ, ಬೈಲಹೊಂಗಲ, ರಾಮದುರ್ಗ, ಸವದತ್ತಿ ಸೇರಿದಂತೆ ಎಲ್ಲ ಕಡೆ ಹೊಲಗಳಲ್ಲಿ ರಾಶಿ-ರಾಶಿ ಮೆಣಸಿನಕಾಯಿ, ಟೊಮಾಟೊ, ಕಲ್ಲಂಗಡಿ, ಬಾಳೆ, ವಿವಿಧ ತರಕಾರಿ ಬಿದ್ದಿವೆ. ಅದನ್ನು ಖರೀದಿ ಮಾಡುವವರು ಕಾಣುತ್ತಿಲ್ಲ. ರೈತರೇ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಬೇಕು ಎಂದರೆ ಮುಂದೆ ಯಾರಿಗೆ ಅದನ್ನು ಕೊಡಬೇಕು ಎಂಬ ಚಿಂತೆ. ಇದರಿಂದ ಅಪಾರ ಪ್ರಮಾಣದಲ್ಲಿ ಬೆಳೆಗಳು ಮಾರಾಟವಿಲ್ಲದೆ ಹಾಳಾಗುತ್ತಿವೆ.

ಕೊರೊನಾ ಲಾಕ್‌ಡೌನ್‌ ಪರಿಣಾಮ ಬೆಳೆದ ಬೆಳೆಗಳ ಮಾರಾಟ ಆಗುತ್ತಿಲ್ಲ. ಹೊಲದಲ್ಲೇ ಕೊಳೆಯುತ್ತಿದೆ. ನಷ್ಟದ ಮೇಲೆ ನಷ್ಟ ಆಗುತ್ತಿದೆ. ಇನ್ನೊಂದು ತಿಂಗಳು ಹೋದರೆ ಮುಂಗಾರು ಆರಂಭ. ಆದರೆ ಬಿತ್ತನೆ ಮಾಡಬೇಕೋ ಬೇಡವೋ ಎಂಬ ಚಿಂತೆ ಆಗಿದೆ ಎನ್ನುತ್ತಾರೆ ಅಥಣಿ ತಾಲೂಕಿನ ಶ್ರೀಶೈಲ ಚೌಗಲಾ. ಸಣ್ಣ ರೈತರು ನೆಲ ಕಚ್ಚಿದ್ದಾರೆ. ಬಹುತೇಕ ತರಕಾರಿ ಬೆಳೆಗಳು ಮಾರುಕಟ್ಟೆಗೆ ಬರದೇ ಹೊಲದಲ್ಲೇ ಕೊಳೆತಿವೆ. ಕೆಲವು ರೈತರು ಕಟಾವು ಮಾಡದೇ ಹೊಲದಲ್ಲೇ ಹಾಗೇ ಬಿಟ್ಟರು. ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಸಣ್ಣ ರೈತರನ್ನು ಉಳಿಸಬೇಕು. ನಿಜವಾಗಿ ಉಳಿಮೆ ಮಾಡುವವರ ಸಮೀಕ್ಷೆ ಮಾಡಿ ಅವರಿಗೆ ನೇರವಾಗಿ ಪರಿಹಾರ ಕೊಡಬೇಕು. ಇಲ್ಲದಿದ್ದರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎನ್ನುತ್ತಾರೆ ಬೆಳಗಾವಿ ತಾಲೂಕು ರೈತ ಸಂಘದ ಅಧ್ಯಕ್ಷ ಅಪ್ಪಾಸಾಹೇಬ ದೇಸಾಯಿ.

ನಷ್ಟದಲ್ಲೂ ಮಾನವೀಯತೆ!
ಸತತ ಆರ್ಥಿಕ ಸಂಕಷ್ಟ ಹಾಗೂ ಬೆಳೆ ಹಾನಿಯಿಂದ ಅಪಾರ ನಷ್ಟ ಅನುಭವಿಸುತ್ತಿರುವ ರೈತ ಸಮುದಾಯ ಈಗ ದೊಡ್ಡ ಹಾಗೂ ಉದಾರ ದಾನಿಗಳಾಗಿ ಕಾಣುತ್ತಿದ್ದಾರೆ. ತಮ್ಮ ಬೆಳೆಗಳನ್ನು ಜನರಿಗೆ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ದಾರೆ. ಲಾಕ್‌ ಡೌನ್‌ ಆಗಿರುವ ಸಂದರ್ಭದಲ್ಲಿ ತಮ್ಮ ಬೆಳೆಗಳು ಮಾರಾಟವಾಗದೆ ಹೊಲದಲ್ಲಿ ಕೊಳೆಯುತ್ತ ಬಿದ್ದಿವೆ. ಹೀಗಾಗಿ ಕೆಲ ರೈತರು ಕಲ್ಲಂಗಡಿ, ಟೊಮಾಟೊ, ಪಪ್ಪಾಯಿ ಸೇರಿದಂತೆ ವಿವಿಧ ತರಕಾರಿಗಳನ್ನು ತಮ್ಮದೇ ವಾಹನದಲ್ಲಿ ತುಂಬಿಕೊಂಡು ಜನರಿಗೆ ಉಚಿತವಾಗಿ ಹಂಚುತ್ತಿದ್ದಾರೆ.

ಅತ್ಯಂತ ಕಷ್ಟದ ಸಮಯದಲ್ಲಿರುವ ರೈತರ ನೆರವಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಹಾಪ್‌ಕಾಮ್ಸ್‌ಗಳು ಬರುತ್ತಿಲ್ಲ. ರೈತರ ತರಕಾರಿಗಳಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಬೆಲೆಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೆಲೆಗೂ ಅಜಗಜಾಂತರ ವ್ಯತ್ಯಾಸ ಇದೆ. ಸಗಟು ಮಾರುಕಟ್ಟೆಯಲ್ಲಿ ಟೊಮೆಟೊಗೆ ಪ್ರತಿ ಕೆಜಿಗೆ ಕೇವಲ 2 ರೂ. ಸಿಗುತ್ತಿದ್ದರೆ ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿ ಕೆಜಿ 20 ರೂ.ದಂತೆ ಮಾರಾಟವಾಗುತ್ತಿದೆ. ರೈತರು ಹಾಗೂ ಗ್ರಾಹಕರಿಬ್ಬರೂ ಶೋಷಣೆಗೆ ಒಳಗಾಗುತ್ತಿದ್ದಾರೆ.
 ಸಿದಗೌಡ ಮೋದಗಿ,
ಭಾರತೀಯ ಕೃಷಿಕ ಸಮಾಜ ಅಧ್ಯಕ್ಷ

ಕೇಶವ ಆದಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.