ಹೂಡಿಕೆದಾರರ ಸಮಾವೇಶಕ್ಕೆ ಕೆಂಗಣ್ಣು¡

ಬೆಳಗಾವಿ ಅವಗಣನೆ; ಹುಬ್ಬಳ್ಳಿಗೆ ಆದ್ಯತೆ | ತಾರತಮ್ಯ ಧೋರಣೆಗೆ ಬೆಳಗಾವಿ ಉದ್ಯಮಿಗಳಿಂದ ಬಹಿಷ್ಕಾರ ಎಚ್ಚರಿಕೆ

Team Udayavani, Feb 13, 2020, 1:48 PM IST

13-February-15

ಬೆಳಗಾವಿ: ರಾಜ್ಯದ ಬೃಹತ್‌ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹುಬ್ಬಳ್ಳಿಯಲ್ಲಿ ಫೆ. 14ರಂದು ಆಯೋಜಿಸಿರುವ ಬೆಳಗಾವಿ ವಿಭಾಗಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್ವೆಸ್ಟ್‌ ಕರ್ನಾಟಕ )ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಸಚಿವರ ಈ ನಿರ್ಧಾರಕ್ಕೆ ಬೆಳಗಾವಿ ಜಿಲ್ಲೆಯ ಉದ್ಯಮಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ಗೋವಾಕ್ಕೆ ಹೊಂದಿಕೊಂಡಿರುವ ಬೆಳಗಾವಿಯಲ್ಲಿ ಉದ್ದಿಮೆದಾರರನ್ನು ಆಕರ್ಷಿಸಲು ಬೇಕಾದ ಎಲ್ಲ ಸೌಲಭ್ಯಗಳು ಇವೆ. ಸಂಪನ್ಮೂಲಗಳಿಗೆ ಕೊರತೆ ಇಲ್ಲ. ಹೀಗಿರುವಾಗ ಈಗಾಗಲೇ ಸಾಕಷ್ಟು ದೊಡ್ಡ ಉದ್ದಿಮೆಗಳನ್ನು ಹೊಂದಿರುವ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಲಿರುವ ಉದ್ದೇಶ ಏನು ಎಂಬ ಪ್ರಶ್ನೆಯನ್ನು ಗಡಿ ಭಾಗದ ಉದ್ಯಮಿಗಳು ಎತ್ತಿದ್ದು, ಈ ಬಂಡವಾಳ ಹೂಡಿಕೆದಾರರ ಸಮಾವೇಶ ಬಹಿಷ್ಕರಿಸುವ ಮಾತೂ ಆಡಿದ್ದಾರೆ.

ಕೈಗಾರಿಕಾ ಸಚಿವರ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಸಣ್ಣ ಕೈಗಾರಿಕೆಗಳು ಬೆಳಗಾವಿಯಲ್ಲಿವೆ. ಅಲ್ಲದೇ ಉತ್ತರ ಕರ್ನಾಟಕದ ಶಕ್ತಿಸೌಧ ಸಹ ಬೆಳಗಾವಿಯಲ್ಲಿದೆ. ಹೀಗಿರುವಾಗ ಸಚಿವರು ಬೆಳಗಾವಿಯನ್ನು ಕಡೆಗಣಿಸಿ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಸಮಾವೇಶ ಮಾಡುತ್ತಿರುವುದು ಈ ಭಾಗದ ಜನತೆಗೆ ಬಗೆದ ದ್ರೋಹ ಎಂದು ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೃಹತ್‌ ಕೈಗಾರಿಕೆಗಳ ಸಚಿವ ಹುದ್ದೆಯ ಜೊತೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಸಹ ವಹಿಸಿಕೊಂಡಿರುವ ಜಗದೀಶ ಶೆಟ್ಟರ ಅವರಿಗೆ ತ್ರಿವಳಿ ನಗರ ಪರಿಕಲ್ಪನೆ ಇಲ್ಲವೇ ಎಂದು ಖಾರವಾಗಿ ಪ್ರಶ್ನೆ ಮಾಡಿರುವ ಕನ್ನಡ ಸಂಘಟನೆಗಳ ಮುಖಂಡರು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳ ಒಡಕಿನ ಲಾಭವನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ಸಚಿವರ ಈ ನಿರ್ಧಾರ ಗಡಿ ಭಾಗದ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೊದಲಿಗೆ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಸಮಾವೇಶ ನಿಗದಿ ಮಾಡಿದ್ದು ನಮಗೆ ಗೊತ್ತೇ ಇಲ್ಲ. ಇದು ಸರಕಾರದ ನಿರ್ಧಾರ ಇರಬಹುದು. ಅದನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ ಪಕ್ಕದಲ್ಲೇ ಸುವರ್ಣ ವಿಧಾನಸೌಧ ಇರುವಾಗ ಸರಕಾರದ ಕಾರ್ಯಕ್ರಮ ಇಲ್ಲಿ ಮಾಡಬೇಕಿತ್ತು. ಆದನ್ನು ಬಿಟ್ಟು ಹೋಟೆಲ್‌ನಲ್ಲಿ ಮಾಡುತ್ತಿದ್ದಾರೆ. ಇಂತಹ ದೊಡ್ಡ ಸಮಾವೇಶವನ್ನು ಇಲ್ಲಿ ಮಾಡಿದ್ದರೆ ನಮ್ಮನ್ನು ಸರ್ಕಾರ ಕಡೆಗಣಿಸಿಲ್ಲ ಎಂಬ ಭಾವನೆ ಬರುತ್ತಿತ್ತು. ಆದರೆ ಕೈಗಾರಿಕಾ ಸಚಿವರ ನಿರ್ಧಾರ ನಮ್ಮ ಉದ್ಯಮಿಗಳಿಗೆ ನಿರಾಸೆ ಉಂಟುಮಾಡಿದೆ ಎಂಬುದು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್‌ ಜುವಳಿ ಅಭಿಪ್ರಾಯ.

ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಟಾಟಾ ಪವರ್‌, ಬಿಡಿಕೆ, ಕಿರ್ಲೋಸ್ಕರ್‌ ಈಗ ಇನ್ಫೋಸಿಸ್‌ ಮೊದಲಾದ ಬೃಹತ್‌ ಕಂಪನಿಗಳಿವೆ. ಆದರೆ ಬೆಳಗಾವಿಯಲ್ಲಿ ಅಂತಹ ಒಂದೂ ಉದ್ದಿಮೆಗಳಿಲ್ಲ. ಸರಕಾರಗಳು ನಮ್ಮ ಕಡೆ ಗಮನವಿಟ್ಟು ನೋಡುತ್ತಲೇ ಇಲ್ಲ. ಈಗ ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವ ಮೂಲಕ ನಮ್ಮ ಬಗ್ಗೆ ಇರುವ ತಾರತಮ್ಯ ಧೋರಣೆ ಮುಂದುವರಿಸಿದ್ದಾರೆ ಎಂಬುದು ರೋಹನ್‌ ಜುವಳಿ ಅಸಮಾಧಾನ.

ಬೆಳಗಾವಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಸಮಾವೇಶ ಮಾಡಿದ್ದರೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ಉದ್ಯಮಿಗಳನ್ನು ಆಕರ್ಷಿಸಬಹುದಿತ್ತು. ಹುಬ್ಬಳ್ಳಿಯಲ್ಲಿ ಮಾಡುತ್ತಿರುವುದು ತಪ್ಪೇನೂ ಅಲ್ಲ. ಆದರೆ ಬೆಳಗಾವಿಯನ್ನೂ ಸಹ ಸಮಾನ ದೃಷ್ಟಿಯಲ್ಲಿ ನೋಡಬೇಕು. ಬೆಂಗಳೂರು-ಹುಬ್ಬಳ್ಳಿಗೆ ಕೊಡುವಷ್ಟು ಮಹತ್ವವನ್ನು ಬೆಳಗಾವಿಗೂ ನೀಡಬೇಕು ಎಂಬುದು ಉದ್ಯಮಿ ರಾಜೇಂದ್ರ ಹರಕುಣಿ ಅಭಿಪ್ರಾಯ.

ಹುಬ್ಬಳ್ಳಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಸಮಾವೇಶ ಮಾಡಿದ ಮಾತ್ರಕ್ಕೆ ಎಲ್ಲವೂ ಅಲ್ಲಿಗೇ ಹೋಗುವುದಿಲ್ಲ. ಆದರೆ ಹಿಂದಿನ ಇಂತಹ ಸಮಾವೇಶಗಳಲ್ಲಿ ಏನಾಗಿದೆ. ಎಷ್ಟು ಬಂಡವಾಳ ಹರಿದುಬಂದಿದೆ. ಅದರ ಸಾರ್ಥಕತೆ ಎಷ್ಟಾಗಿದೆ ಎಂಬ ಬಗ್ಗೆ ಅವಲೋಕನ ಮಾಡಬೇಕು. ಸಮಾವೇಶ ನಂತರ ಕಾಲಮಿತಿಯಲ್ಲಿ ಅದರ ನಿರ್ಣಯಗಳನ್ನು ಅನುಷ್ಠಾನಕ್ಕೆ ತಂದು ಮಂಜೂರಾತಿ ನೀಡಬೇಕು ಎನ್ನುತ್ತಾರೆ ಹರಕುಣಿ.

ಸರ್ಕಾರದಿಂದ ಪ್ರಾದೇಶಿಕವಾರು ನಡೆಸಲಾಗುವ ಬಂಡವಾಳ ಹೂಡಿಕೆದಾರರ ಸಮಾವೇಶವು ಬೆಳಗಾವಿಯಲ್ಲಿಯೇ ನಡೆಯಬೇಕಾಗಿತ್ತು. ಆದರೆ ನಮ್ಮ ಭಾಗದ ಸಚಿವರ ಹಾಗೂ ಶಾಸಕರ ಉದಾಸೀನತೆ ಮತ್ತು ಸಚಿವ ಶೆಟ್ಟರ್‌ ಅವರ ಕೃಪೆಯಿಂದ ಅದು ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಕಲಬುರ್ಗಿ ವಿಭಾಗದ ಸಮಾವೇಶ ಕಲಬುರ್ಗಿಯಲ್ಲಿ,ಬೆಂಗಳೂರು ವಿಭಾಗದ ಸಮಾವೇಶ ಬೆಂಗಳೂರಿನಲ್ಲಿ ನಡೆಯುವುದಾದರೆ ಬೆಳಗಾವಿ ವಿಭಾಗದ ಸಮಾವೇಶ ಬೆಳಗಾವಿಯಲ್ಲಿ ಏಕೆ ನಡೆಯುತ್ತಿಲ್ಲ ಎಂಬುದು ಉದ್ಯಮಿಗಳು ಹಾಗೂ ಕನ್ನಡ ಹೋರಾಟಗಾರರ ಪ್ರಶ್ನೆ.

ಬೆಳಗಾವಿಯಲ್ಲಿ ಕೆಲ ತಿಂಗಳ ಹಿಂದೆ ಮಹಾರಾಷ್ಟ್ರದ ಉದ್ಯಮಿಗಳ ಜೊತೆ ಖಾಸಗಿ ಐಷಾರಾಮಿ ಹೋಟೆಲ್‌ ನಲ್ಲಿ ಸಭೆ ನಡೆಸಿದ ಸಚಿವ ಜಗದೀಶ ಶೆಟ್ಟರ ಈಗ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಸಮಾವೇಶವನ್ನು ಖಾಸಗಿ ಹೋಟೆಲ್‌ನಲ್ಲಿ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ 500 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿದ ಸುವರ್ಣ ವಿಧಾನಸೌಧ ಖಾಲಿ ಬಿದ್ದಿರುವಾಗ ಸರ್ಕಾರದ ಕಾರ್ಯಕ್ರಮವನ್ನು ಖಾಸಗಿ ಹೋಟೆಲ್‌ನಲ್ಲಿ ಮಾಡುವ ಉದ್ದೇಶ ಏನು ಎಂಬುದು ಬೆಳಗಾವಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಸದಸ್ಯರ ಪ್ರಶ್ನೆ.

ಮಲಪ್ರಭಾ ಜಲಾಶಯದಿಂದ ನೀರು, ಜಿಲ್ಲೆಯಿಂದಲೇ ವಿದ್ಯುತ್‌ ಪಡೆಯುವ ಹುಬ್ಬಳ್ಳಿ ಧಾರವಾಡದ ಅಧಿಕಾರಸ್ಥರು ಬೆಳಗಾವಿ ಜಿಲ್ಲೆಯ ಹಿತವನ್ನೂ ಕಾಪಾಡಬೇಕು. 500 ಕೋಟಿ ರೂ.ವೆಚ್ಚದಲ್ಲಿ ಸುವರ್ಣಸೌಧ ಕಟ್ಟಿ ಎರಡನೇ ರಾಜಧಾನಿಯ ಪಟ್ಟ ಪಡೆಯುತ್ತಿರುವ ಬೆಳಗಾವಿಯನ್ನು ನಿರ್ಲಕ್ಷಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂಬುದು ಕನ್ನಡ ಮುಖಂಡರ ಹೇಳಿಕೆ.

ಬೆಳಗಾವಿಗೆ ಅತಿಥಿ ಸಚಿವರು
ಜಿಲ್ಲೆಯ ಉಸ್ತುವಾರಿ ಹೊಣೆಯೂ ಹೊತ್ತ ಜಗದೀಶ ಶೆಟ್ಟರ ಅವರು ಬೆಳಗಾವಿಯ ಪಾಲಿಗೆ ಅತಿಥಿ ಸಚಿವರು. ಬೆಳಗಾವಿಯ ಹಳೆಯ ಜಿಲ್ಲಾ ಪಂಚಾಯತ ಕಟ್ಟಡದಲ್ಲಿ ನಾಲ್ಕು ತಿಂಗಳ ಹಿಂದೆ ತಮ್ಮ ಕಚೇರಿ ಆರಂಭಿಸಿದರೂ ಅಲ್ಲಿ ಒಮ್ಮೆಯೂ ಬಂದು ಕೂಡಲಿಲ್ಲ. ಜನರ ಸಮಸ್ಯೆಗಳನ್ನು ಕೇಳಲಿಲ್ಲ. ಕೇವಲ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲ.ಇನ್ನು ಬೆಳಗಾವಿ ಸೇರಿ ತ್ರಿವಳಿ ನಗರ ಪರಿಕಲ್ಪನೆ ನನಗಿದೆ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಸಚಿವರಿಗೆ ಬೆಳಗಾವಿ ಬಗ್ಗೆ ಕಾಳಜಿ ಇಲ್ಲ ಎಂಬ ಅನುಮಾನ ಮೂಡಿದೆ ಎಂಬುದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆರೋಪ.

ಕೇಶವ ಆದಿ

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.