Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

ಪ್ರಯಾಣಿಕರ ಪರದಾಟ...ಬೇಜವಾಬ್ದಾರಿಗೆ ಹಿಡಿಶಾಪ... ಮಾಜಿ ಸಿಎಂ ಬೊಮ್ಮಾಯಿ ಕೂಡ ಆಗಮಿಸಿದ್ದರು...!

Team Udayavani, Apr 21, 2024, 10:26 PM IST

1-wqeqeewq

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ.

ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ.
ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7.30 ಗಂಟೆಗೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು.ನಂತರ ಪರಿಶೀಲನೆ ನಡೆಸಿದಾಗ ಸುಮಾರು 22 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳು ಬಂದಿರಲಿಲ್ಲ.

ಈ ಕುರಿತು ಇಂಡಿಗೋ ವಿಮಾನ ಸಿಬ್ಬಂದಿಯನ್ನು ಪ್ರಯಾಣಿಕರು ವಿಚಾರಿಸಿದಾಗ ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್ ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್ ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪ್ರತಿಭಟನೆ ನಡೆಸಿದ್ದಾರೆ.

ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ದೊಡ್ಡದಿದ್ದರೆ ಅವರ ಬ್ಯಾಗ್ ಬಿಡಬಹುದಿತ್ತು. ಅಥವಾ ನಮಗೆ ಮೊದಲೇ ಮಾಹಿತಿ ನೀಡಬೇಕಿತ್ತು. ನಮ್ಮಲ್ಲಿ ಬೇರೆ ಊರಿನ ಪ್ರಯಾಣಿಕರಿದ್ದಾರೆ. ಹಲವರ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ಬ್ಯಾಗ್ ನಲ್ಲಿವೆ. ಅಂತವರು ಈಗ ಏನು ಮಾಡಬೇಕು ಎಂದು ಪ್ರಯಾಣಿಕರು ಪ್ರಶ್ನಿಸಿದರು.

ತೂಕ ಸೇರಿದಂತೆ ಎಲ್ಲ ಪರಿಶೀಲನೆಯ ನಂತರವೇ ಲಗೇಜ್ ಪಡೆದು, ವಿಮಾನಕ್ಕೆ ಹಾಕಲಾಗುತ್ತದೆ. ಆದರೂ ಈ ರೀತಿಯ ಅಚಾತುರ್ಯ ಹೇಗಾಯಿತು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಪ್ರಯಾಣಿಕರು ವಿಮಾನ ಸಿಬ್ಬಂದಿಗಳ ಬೇಜವಾಬ್ದಾರಿಗೆ ಹಿಡಿಶಾಪ ಹಾಕಿದರು.

ಟಾಪ್ ನ್ಯೂಸ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

1-fdsfssdf

Belagavi; ಗುಂಪುಗಳ ಘರ್ಷಣೆ: ಮಾರಾಮಾರಿ-ಕಲ್ಲು ತೂರಾಟ

ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

Belagavi; ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಬೈಕ್-ಸರ್ಕಾರಿ ಬಸ್ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Ramanagara: ಬೈಕ್-ಸರ್ಕಾರಿ ಬಸ್ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.