ಮಹಾ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ


Team Udayavani, Dec 6, 2022, 8:33 AM IST

3

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ದಿನದಿಂದ ದಿನಕ್ಕೆ ಭುಗಿಲೇಳುತ್ತಿದ್ದು, ಮರಾಠಿ ಭಾಷಿಕರ ಸಮಸ್ಯೆ ಕೇಳಲು ಮಹಾರಾಷ್ಟ್ರದ ಸಚಿವದ್ವಯರು ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷರು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಈಗಾಗಲೇ ಈ ಮೂವರಿಗೂ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಹಾ ಸಚಿವರ ಆಗಮನ ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರ ತನ್ನ ಮೊಂಡುವಾದ ಬಿಡುತ್ತಿಲ್ಲ. ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ. ಇಂಥ ಬಿಗುವಿನ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಸಮನ್ವಯ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ ದೇಸಾಯಿ ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ.ಹೀಗಾಗಿ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ. ಸಿಆರ್‌ಪಿಸಿ 1973 ಕಲಂ 144(3)ರ ಅನ್ವಯ ಅಧಿಕಾರ ಬಳಸಿ ಜಿಲ್ಲಾಧಿಕಾರಿ ಡಾ|ನಿತೇಶ ಪಾಟೀಲ ಜಿಲ್ಲೆಯ ಗಡಿ ಪ್ರವೇಶಿಸದಂತೆ ಆದೇಶ ಹೊರಡಿಸಿದ್ದಾರೆ.

ಈ ಸಚಿವರು ಆಗಮನ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಟ್ಟು, ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯುಂಟಾಗುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಹಾರಾಷ್ಟ್ರ ಸಚಿವರು ಡಿ.3ರಂದು ಬರುವ ದಿನಾಂಕವನ್ನು ಡಿ.6ಕ್ಕೆ ಮುಂದೂಡಿದ್ದಾರೆ. ಡಾ|ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನ ನಿಮಿತ್ತ ದಲಿತ ಸಂಘಟನೆಗಳ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ.

ಈ ಮೂವರೂ ಬೆಳಗಾವಿಗೆ ಬರುವುದು ಖಚಿತ ಆಗುತ್ತಿದ್ದಂತೆ ಕರವೇ ಕಾರ್ಯಕರ್ತರು ಡಿ.6ರಂದು ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ.

ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಆಗಮಿಸುತ್ತಿರುವುದನ್ನು ಖಂಡಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಸೋಮವಾರ ಕರ್ನಾಟಕ ಏಕೀಕರಣ ಸಮಿತಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ರಮೇಶಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಂಇಎಸ್‌ ಹಾಗೂ ಮಹಾರಾಷ್ಟ್ರ ಸಚಿವರ ವಿರುದ್ಧ ಘೋಷಣೆ ಕೂಗಿದರು. ಬೆಳಗಾವಿಯ ನಾಡದ್ರೋಹಿ ಸಚಿವರಿಗೆ, ತಟಸ್ಥವಾಗಿ ನಿಂತಿರುವ ಬೆಳಗಾವಿ ಶಾಸಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ನಾವು ಯಾರಿಗೂ ಹೆದರಲ್ಲ: ಶಂಭುರಾಜ ಬೆಳಗಾವಿ ಪ್ರವಾಸ ವಿಷಯದಲ್ಲಿ ಸಿಎಂ ಏಕನಾಥ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್‌ ನೀಡುವ ಸೂಚನೆ ಪಾಲಿಸುತ್ತೇವೆ ಎಂದು ಮಹಾರಾಷ್ಟ್ರ ಶಂಭುರಾಜ ದೇಸಾಯಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿಗೆ ಬಾರದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿರುವ ಕುರಿತು ಸಿಎಂ ಹಾಗೂ ಡಿಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದುವರೆಗೆ ನಮ್ಮ ಪ್ರವಾಸವನ್ನು ಅ ಧಿಕೃತವಾಗಿ ರದ್ದುಗೊಳಿಸಿಲ್ಲ. ಉಭಯ ರಾಜ್ಯಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಾವು ಮುಂದೆ ಹೆಜ್ಜೆ ಇಡಲಿದ್ದೇವೆ. ನಾವು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆ ಬಗೆಹರಿಸಬೇಕು. ಗಡಿ ಭಾಗದ ಮರಾಠಿ ಭಾಷಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು 2020ರಿಂದ ಮಹಾ ವಿಕಾಸ ಅಘಾಡಿ ಸರ್ಕಾರ ಇದ್ದಾಗ ನಿಲ್ಲಿಸಲಾಗಿತ್ತು. ಈಗ ನಮ್ಮ ಆಡಳಿತ ಬಂದಾಗಿನಿಂದ ಈ ಸವಲತ್ತು ಕಲ್ಪಿಸಲಾಗುತ್ತಿದೆ. ನಮ್ಮ ತಾಕತ್ತು ಏನೆಂಬುದನ್ನು ನಾವು ಶಿವಸೇನೆ-ಬಿಜೆಪಿ ಸರ್ಕಾರ ರಚಿಸುವಾಗಲೇ ತೋರಿಸಿದ್ದೇವೆ ಎಂದು ಸಂಜಯ ರಾವುತ್‌ಗೆ ನೀಡಿದರು.

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಬರುವುದನ್ನು ನಿರ್ಬಂಧಿಸಲಾಗಿದೆ. ಅವರಾಗಿಯೇ ತಮ್ಮ ಪ್ರವಾಸದ ನಿರ್ಧಾರ ವಾಪಸ್‌ ಪಡೆಯುತ್ತಾರೆ ಎಂದುಕೊಂಡಿದ್ದೇವೆ. ಜಿಲ್ಲೆಯ ಎಲ್ಲ ಗಡಿಭಾಗದಲ್ಲಿಯೂ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ.  –ಡಾ| ನಿತೇಶ ಪಾಟೀಲ, ಜಿಲ್ಲಾಧಿಕಾರಿ, ಬೆಳಗಾವಿ

ಟಾಪ್ ನ್ಯೂಸ್

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

1-fasdsadsa

ಹಿಂದೂಗಳ ಪರವಾದ ಯಾವುದೇ ಸರ್ಕಾರ ಇಲ್ಲ: ವಿಜಯ್ ರೇವಣ್ಕರ್

BJP Symbol

ಯುಪಿ ವಿಧಾನಪರಿಷತ್ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-belagavi

ನಿನ್ನೆ‌ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

1-asd-sa-das

ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ

ಡಿಕೆಶಿ, ರಮೇಶ್,‌ ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಡಿಕೆಶಿ, ರಮೇಶ್,‌ ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್‌ ಜಾರಕಿಹೊಳಿ ಕಿಡಿ

ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್‌ ಜಾರಕಿಹೊಳಿ ಕಿಡಿ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

ello jogappa ninna aramane movie

ಅರಮನೆ ಹುಡುಕಾಟದಲ್ಲಿ ಜೋಗಪ್ಪ; ಕಂಬ್ಳಿಹುಳ ನಾಯಕನ ಹೊಸ ಚಿತ್ರ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.