ಅರಳಿಕಟ್ಟಿ ಸರ್ಕಲ್‌ ಬಸ್‌ ನಿಲ್ದಾಣ ವಿಸ್ತರಿಸಿದ್ರೆ ಅನುಕೂಲ

ಮಳೆ-ಬಿಸಿಲಲ್ಲಿ ಆಶ್ರಯ ನೀಡುವ ಬಸ್‌ ತಂಗುದಾಣ ನಿರ್ಮಿಸಲು ಆಗ್ರಹ

Team Udayavani, Sep 22, 2022, 4:24 PM IST

23

ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ.

ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್‌ ಮುಖಾಂತರ ಆಗಮಿಸುತ್ತಾರೆ. ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್‌ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು ಸಿಗುತ್ತಿಲ್ಲ.

ಈಗ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ಬಹುತೇಕ ಬಸ್‌ಗಳು ತಡವಾಗಿ ಸಂಚರಿಸುತ್ತಿರುವುದರಿಂದ, ಬಸ್‌ ಬರುವವರೆಗೆ ಸುರಿಯುವ ಮಳೆಯಲ್ಲಿ ನೆನೆದು ಮತ್ತು ಬೇಸಿಗೆಯಲ್ಲಿ ನೆತ್ತಿ ಸುಡುವ ಬಿಸಿಲಿನಲ್ಲಿ ಕಾಯುವ ದುಸ್ಥಿತಿ ಇದೆ. ಇದರಿಂದ ಮುಖ್ಯವಾಗಿ ವಿದ್ಯಾರ್ಥಿನಿಯರು, ಮಹಿಳೆಯರು, ವೃದ್ಧರು ಪರದಾಡುವಂತಾಗಿದೆ.

ಅಧಿಕಾರಿಗಳು ಎಚ್ಚೆತ್ತು ಬಸ್‌ ತಂಗುದಾಣ ವಿಸ್ತರಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಯಾಣಿಕರು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ರಾಜಕಾಣಿಗಳು ಏರ್‌ಕಂಡಿಷನ್‌ ಕಾರನ್ಯಾಗ ಓಡಾಡೂದ್ರಿಂದ ನಮ್ಮ ಕಷ್ಟ ಅವರಿಗೆಲ್ಲಿ ಗೊತ್ತಾಗಬೇಕ್ರಿ ದಿನಾಲೂ ನಾವು ಸರಿಯಾಗಿ ಬಿಸಿಲು ಚಾಲೂ ಆಗುವ ಹೊತ್ತಿಗೆ ಕಾಲೇಜಿನಿಂದ ನಡಕೊಂತ ಬಂದ ರಣರಣ ಬಿಸಿಲು ಮತ್ತು ಮಳೆಯಲ್ಲಿ ಗಿಡದ ನೆಳ್ಳಿಗೆ ಕುಂತ ತಾಸಗಟ್ಟಲೆ ಕಾಯ್ತಿàವಿ. ಇಲ್ಲಿ ಎಲ್ಲರಿಗೂ ಕುಳಿತುಕೊಳ್ಳಲು ಒಂದ ಬಸ್‌ಸ್ಟ್ಯಾಂಡ್‌ ಮಾಡಿದ್ರ ಬಾಳ ಚೊಲೊ ಅಕ್ಕೇತ್ರಿ. –ಹೆಸರು ಹೇಳಲು ಇಚ್ಛಿಸದ ಗ್ರಾಮೀಣ ವಿದ್ಯಾರ್ಥಿ.

ಈ ವಿಷಯ ತಮ್ಮ ಮೂಲಕ ಗಮನಕ್ಕೆ ಬಂದಿದ್ದು ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಲ್ಲಿನ ಬಸ್‌ ತಂಗುದಾಣ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಮಹಾಂತೇಶ ದೊಡ್ಡಗೌಡರ, ಶಾಸಕರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.