ಪರೀಕ್ಷಾ ಕೇಂದ್ರ ರದ್ದತಿ; ವಿದ್ಯಾರ್ಥಿಗಳ ಪ್ರತಿಭಟನೆ

ಎಮ್‌ಇಎಸ್‌ ಕಾಲೇಜಿನ ಮಾ.22-23ರ ಪರೀಕ್ಷೆ ಮುಂದೂಡಿದ ರಾಚವಿ

Team Udayavani, Mar 22, 2022, 2:36 PM IST

13

ಮೂಡಲಗಿ: ಪಟ್ಟಣದ ಎಮ್‌ಇಎಸ್‌ ಕಾಲೇಜಿನ ಬಿಎ ಪದವಿ ವಿದ್ಯಾರ್ಥಿಗಳ ಮಾ.22ರಿಂದ ನಡೆಯುವ ಪರೀಕ್ಷೆಗಳ ಸ್ಥಳೀಯ ಕೇಂದ್ರವನ್ನು ರದ್ದು ಮಾಡಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ವಿದ್ಯಾರ್ಥಿಗಳು ಸೋಮವಾರ ಸಂಜೆ ನಾಲ್ಕು ಗಂಟೆಯಿಂದ ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮಧ್ಯ ಪ್ರವೇಶಿಸಿದ್ದರಿಂದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ರಾತ್ರಿ 9 ಗಂಟೆಗೆ ಹಿಂಪಡೆದರು.

ಸೋಮವಾರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ಬಿಎ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಎಮ್‌ಇಎಸ್‌ ಕಾಲೇಜಿನ ಬಿಎ ವಿದ್ಯಾರ್ಥಿಗಳು, ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆಗೆ ನಡೆಸಿ, ಪರೀಕ್ಷಾ ಕೇಂದ್ರದ ವರ್ಗಾವಣೆ ಆದೇಶವನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಕುಲಪತಿಗಳ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ನಿರತ ವಿದ್ಯಾರ್ಥಿನಿ ಮೇಘಾ ಗುಡ್ಲಿ ಮಾತನಾಡಿ, ತಾಲೂಕಿನ ದೂರದ ಹಳ್ಳಿಗಳ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಪಟ್ಟಣದ ಎಮ್‌ಇಎಸ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಇರುವುದರಿಂದ ಏಕಾಏಕಿ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ವಸತಿ ನಿಲಯದಲ್ಲಿ ಇರುವಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಕ್ಕೆ ತಲುಪಲು ಸಮಸ್ಯೆಯಾಗುವುದರಿಂದ ಕೂಡಲೇ ವರ್ಗಾವಣೆ ಮಾಡಿರುವ ಆದೇಶವನ್ನು ರದ್ದು ಮಾಡಿ, ಮೊದಲು ನಡೆಯುವ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ನಡೆಸಲು ಆದೇಶ ನೀಡಬೇಕೆಂದು ಆಗ್ರಹಿಸಿದರು.

ಎಬಿವಿಪಿ ಬೆಳಗಾವಿ ವಿಭಾಗದ ಸಹಸಂಚಾಲಕ ಮಲ್ಲು ಮುಕುಂದ ಮಾತನಾಡಿ, ಮಾ.22ರಂದು ನಡೆಯುವ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವನ್ನು ದಿಢೀರನೆ ವರ್ಗಾವಣೆ ಮಾಡಿದ್ದು, ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ದೂರದ ವಿದ್ಯಾರ್ಥಿಗಳು ಮೊದಲೇ ಸಾರಿಗೆ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು, ಇಂತಹ ಸಂದರ್ಭದಲ್ಲೇ ಪರೀಕ್ಷಾ ಕೇಂದ್ರವನ್ನು ವರ್ಗಾವಣೆ ಮಾಡಿದ್ದರಿಂದ ವಿದ್ಯಾರ್ಥಿಗಳ ಬಾಳು ಮತ್ತಷ್ಟು ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ವರ್ಗಾವಣೆ ಆದೇಶ ಹಿಂಪಡೆಯುವವರೆಗೂ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಮೂಡಲಗಿ ತಹಶೀಲ್ದಾರ್‌ ಡಿ.ಜಿ ಮಹಾತ್‌ ಅವರು ವಿದ್ಯಾರ್ಥಿಗಳ ಪ್ರತಿಭಟನೆ ವಿಷಯವನ್ನು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಗಮನಕ್ಕೆ ತಂದ ಹಿನ್ನೆಲೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ಮಾ.22 ಹಾಗೂ 23ರಂದು ನಡೆಯುವ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದ ಬಗ್ಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಆರ್‌ ಪಿ ಸೋನವಾಲ್ಕರ, ಎಬಿವಿಪಿ ಕಾರ್ಯಕರ್ತರಾದ ಬಸವರಾಜ ಜೋಡಟ್ಟಿ, ಮಹಾದೇವ ನವಣಿ, ಗಿರೀಶ ಬಳಿಗಾರ, ಬಸವರಾಜ ಕೋಣಿ, ಗುರು ಹಿರೇಮಠ, ಹಣಮಂತ ಗುರವ್‌, ಸುಜಾತಾ ಪಟ್ಟಣಶೆಟ್ಟಿ, ಗಾಯಿತ್ರಿ ಸಲಭನ್ನವರ, ಗಂಗುಬಾಯಿ ಚಿಮ್ಮಡಿ, ಈಶ್ವರಿ ದಂಡಪ್ಪನ್ನವರ, ಅನ್ನಪೂರ್ಣ ಮಂಡರ ಹಾಗೂ ಅನೇಕ ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.