ನೀರಿಗಾಗಿ ಗಡಿಯಲ್ಲಿ ಪರಿತಾಪ

ಬತ್ತಿದ ಕೃಷ್ಣಾ ನದಿ ಬಹುಗ್ರಾಮ ಯೋಜನೆಗಳೂ ಸ್ಥಗಿತ ಚಿಕ್ಕೋಡಿಯಲ್ಲಿ ಜಲ ಸಂಕಟ

Team Udayavani, Mar 29, 2019, 4:13 PM IST

29-March-13

ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ನೀರು ಖಾಲಿಯಾಗಿರುವುದರಿಂದ ನದಿ ಬತ್ತಿ ಬರಿದಾಗಿರುವುದು.

ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಸಂಪೂರ್ಣ ನೀರು ಖಾಲಿಯಾಗಿರುವುದರಿಂದ ನದಿ ಬತ್ತಿ ಹೋಗಿದೆ. ಹೀಗಾಗಿ ನದಿ ನೀರನ್ನು ಬಳಕೆ ಮಾಡಿಕೊಳ್ಳುವ ಚಿಕ್ಕೋಡಿ ನಗರ ಮತ್ತು ತಾಲೂಕಿನ ವಿವಿಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡು ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಗಡಿ ಭಾಗದ ಜನರ ಜೀವನಾಡಿಯಾದ ಕೃಷ್ಣಾ ನದಿ ಕಳೆದ ನಾಲ್ಕೈದು ದಿನಗಳಿಂದ ಬತ್ತಿ ಬರಿದಾಗಿದೆ. ಹೀಗಾಗಿ ನದಿ ನೀರನ್ನು ಅವಲಂಬಿಸಿರುವ ಚಿಕ್ಕೋಡಿ ನಗರದ ಜನರಿಗೆ ಆತಂಕ ಸೃಷ್ಟಿಯಾಗಿದ್ದು, ದಿನಕೊಮ್ಮೆ ಬರುವ
ನೀರು ಇದೀಗ ನಾಲ್ಕೈದು ದಿನಕ್ಕೊಮ್ಮೆ ಬರುತ್ತಿದೆ. ಇದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಅನುಭವಿಸುವ ಪ್ರಸಂಗ ಎದುರಾಗಿದೆ. ಚಿಕ್ಕೋಡಿ ನಗರಕ್ಕೆ 24×7 ಕುಡಿಯುವ ನೀರಿನ ಯೋಜನೆ ಜಾರಿಯಲ್ಲಿದೆ. ಆದರೆ ನದಿಯು ಖಾಲಿಯಾಗಿರುವುದರಿಂದ ನಗರದ ಜನರು ನೀರಿಗಾಗಿ ತೀವ್ರ ತೊಂದರೆ ಅನುಭವಿಸುವ ಕಾಲ ದೂರವಿಲ್ಲ.
ಕೃಷ್ಣಾ ನದಿಯಿಂದ ಚಿಕ್ಕೋಡಿ ನಗರಕ್ಕೆ ಪೂರೈಕೆಯಾಗುವ ಅಂಕಲಿ ಬಳಿ ದೊಡ್ಡ ಹೊಂಡ ಇರುವುದರಿಂದ ಮೂರು ದಿನಗಳವರಿಗೆ ನೀರು ಲಭ್ಯವಾಗುವ ಸಾಧ್ಯತೆ ಇದ್ದು, ನಂತರ ದಿನಗಳಲ್ಲಿ ನೀರು ಖಾಲಿಯಾದರೆ ನಗರದ ಜನರಿಗೆ ತೊಂದರೆಯಾಗುವ ಲಕ್ಷಣ ಹೆಚ್ಚಾಗಿದೆ. ಅಂಕಲಿ ಬಳಿ ಇರುವ ಹೊಸ ಜಾಕ್‌ವೆಲ್‌ ಬಳಿ ನೀರು ಸಂಪೂರ್ಣ ಕಡಿಮೆಯಾಗಿದೆ. ಹೀಗಾಗಿ ಕಲ್ಲೋಳ ಬಳಿ ಇರುವ ಹಳೆ ಜಾಕ್‌ವೆಲ್‌ ಬಳಿ ಅಲ್ಪಸ್ವಲ್ಪ ನೀರು ಚಿಕ್ಕೋಡಿ ನಗರಕ್ಕೆ ಬರುತ್ತಿದೆ. ಒಂದು ವೇಳೆ ಶೀಘ್ರವಾಗಿ ನದಿಗೆ ನೀರು ಬರದೇ ಹೋದರೆ ನಗರಕ್ಕೆ ಕುಡಿಯುವ ನೀರಿನ ಕೊರತೆ ಭೀತಿ ತಪ್ಪಿದ್ದಲ್ಲ. ಅದರಂತೆ ಚಿಕ್ಕೋಡಿ ತಾಲೂಕಿನಲ್ಲಿರುವ ಜೈನಾಪುರ, ಕಾಡಾಪುರ ಸೇರಿ ನಾಲ್ಕೈದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ನೀರು ಸರಬರಾಜು ಆಗುತ್ತಿತ್ತು. ಆದರೆ ನದಿಯಲ್ಲಿ ನೀರು ಖಾಲಿಯಾಗಿದ್ದರಿಂದ ಯೋಜನೆ ಸ್ಥಗೀತಗೊಂಡು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆಯಾ ಗ್ರಾಮದಲ್ಲಿ ಇರುವ ಬಾವಿ, ಕೊಳವೆ ಬಾವಿಯಲ್ಲಿಯೂ ಅಂತರ್ಜಲಮಟ್ಟ ಕುಸಿತು ಕಂಡು ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳು ಸಹ ನೀರಿಲ್ಲದೇ ಬತ್ತಿ ಬರಡಾಗಿದ್ದರಿಂದ ಜನಸಾಮಾನ್ಯರು ಹನಿ ನೀರಿಗಾಗಿ ಪರಿತಪಿಸುವ ಪ್ರಸಂಗ ಎದುರಾಗಿದೆ.
ನೆತ್ತಿ ಸುಡುವ ಬೀರು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜನರನ್ನು ಕಾಡುತ್ತಿದೆ. ಇತ್ತ ನೀರಿನ ಸಮಸ್ಯೆ ಬಗೆಹರಿಸುವ ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳು ಚುನಾವಣೆ ಕಾರ್ಯದಲ್ಲಿ ನಿರತರಾಗಿರುವದರಿಂದ ಸಾಮಾನ್ಯ ಜನರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ. ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸಾರ್ವಜನಿಕರು ಆಗ್ರಹ ಪಡಿಸಿದರೆ ಅ ಧಿಕಾರಿಗಳು ಮಾತ್ರ ಚುನಾವಣೆ ಕಾರ್ಯದಲ್ಲಿ ನಿರತರಾಗಿದ್ದೇವೆಂದು ಹಾರಿಕೆ ಉತ್ತರ ನೀಡಿ ಜಾರಿಗೊಳ್ಳುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.
ಕೃಷ್ಣಾ ನದಿಯಲ್ಲಿ ನೀರು ಹರಿಯುತ್ತಿದ್ದರೆ ಚಿಕ್ಕೋಡಿ ನಗರಕ್ಕೆ ಸಂಪೂರ್ಣ ನೀರು ಬರುತ್ತದೆ. ಆದರೆ ನದಿಯಲ್ಲಿ ನೀರು ಇಲ್ಲದೇ ಇರುವುದರಿಂದ ನಗರದಲ್ಲಿ ನಾಲ್ಕೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೂಡಲೇ ಅಧಿಕಾರಿಗಳು ಮಹಾರಾಷ್ಟ್ರದಿಂದ ನೀರು ಹರಿಸಲು ಪ್ರಯತ್ನ ಮಾಡಬೇಕು.
ಚಂದ್ರಕಾಂತ ಹುಕ್ಕೇರಿ
ಸಾಮಾಜಿಕ ಹೋರಾಟಗಾರರು ಚಿಕ್ಕೋಡಿ.
ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ಹೊಸ ಜಾಕ್‌ ವೆಲ್‌ನಲ್ಲಿ ಪಂಪ್‌ಸೆಟ್‌ ಕೆಳಗೆ ಇಡಲಾಗಿದ್ದು, ಹಳೆ ಜಾಕ್‌ವೆಲ್‌ದ ಮೂಲಕ ನೀರು ಪೂರೈಕೆ ಆಗತ್ತಿದೆ. ಈಗ ನದಿಯಲ್ಲಿರುವ ನೀರು ನಗರಕ್ಕೆ ಮೂರು ದಿನಗಳವರಿಗೆ ಪೂರೈಕೆ ಆಗುತ್ತದೆ. ಅಷ್ಟರಲ್ಲಿ ನದಿಗೆ ನೀರು ಬರುವ ಸಾಧ್ಯತೆ ಇದ್ದು, ನಗರದ ಜನ ಆತಂಕ ಪಡುವ ಅಗತ್ಯವಿಲ್ಲ.
ಡಾ.ಸುಂದರ ರೂಗಿ
ಮುಖ್ಯಾಧಿಕಾರಿಗಳು, ಪುರಸಭೆ ಚಿಕ್ಕೋಡಿ.
ಮಹಾದೇವ ಪೂಜೇರಿ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.