ನಿರ್ವಹಣೆಯಿಲ್ಲದೇ ಹಾಳು ಬಿದ್ದ ಘಟಕಗಳು

63 ಗ್ರಾಪಂಗಳಲ್ಲಿವೆ 185 ಶುದ್ಧ ನೀರಿನ ಘಟಕನೂರಾರು ಕೋಟಿ ವ್ಯಯವಾದರೂ ಸಿಗದ ಲಾಭ

Team Udayavani, Mar 11, 2020, 2:03 PM IST

11-March-15

ಚಿಕ್ಕೋಡಿ: ಗ್ರಾಮೀಣ ಜನರು ಶುದ್ಧ ನೀರು ಕುಡಿದು ಆರೋಗ್ಯವಾಗಿರಬೇಕೆಂದು ರಾಜ್ಯ ಸರ್ಕಾರ ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಿದೆ. ಆದರೆ ಎಲ್ಲೆಡೆ ಅಳವಡಿಸಿರುವ ಶುದ್ಧ ನೀರಿನ ಘಟಕಗಳಿಗೆ ಸಮರ್ಪಕ ನಿರ್ವಹಣೆ ಇಲ್ಲದೇ ಇಂದು ಅಶುದ್ಧ ನೀರಿನ ಘಟಕಗಳಾಗಿ ಬಾಗಿಲು ಮುಚ್ಚಿಕೊಂಡಿವೆ.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಎಚ್‌.ಕೆ. ಪಾಟೀಲ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಸಚಿವರಿದ್ದ ವೇಳೆಯಲ್ಲಿ ಗ್ರಾಮೀಣ ಭಾಗದ ಜನರು ಶುದ್ಧ ಕುಡಿಯುವ ನೀರು ಸೇವನೆ ಮಾಡಬೇಕೆಂದು ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜನಸಂಖ್ಯೆ ಅನುಗುಣವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿತ್ತು. ಆದರೆ ಆರಂಭದಲ್ಲಿ ಒಂದು ಅಥವಾ ಎರಡು ತಿಂಗಳ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಶುದ್ಧ ನೀರಿನ ಘಟಕಗಳು ಇಂದು ನೂರಾರು ಸಂಖ್ಯೆಯಲ್ಲಿ ಸಮರ್ಪಕ ನಿರ್ವಹಣೆ ಇಲ್ಲದೇ ಬಾಗಿಲು ಮುಚ್ಚಿಕೊಂಡಿವೆ. ಸರ್ಕಾರದ ನೂರಾರು ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಚಿಕ್ಕೋಡಿ ತಾಲೂಕಿನಲ್ಲಿವೆ 185 ಘಟಕಗಳು: ರಾಜ್ಯದಲ್ಲಿಯೇ ಅತಿ ದೊಡ್ಡ ಚಿಕ್ಕೋಡಿ ತಾಲೂಕಿನ 63 ಗ್ರಾಮ ಪಂಚಾಯತಗಳಲ್ಲಿ 185 ಶುದ್ಧ ನೀರಿನ ಘಟಕಗಳನ್ನು ಸರ್ಕಾರ ಅಳವಡಿಸಿದೆ. 185ರಲ್ಲಿ ಅರ್ಧಕ್ಕಿಂತ ಹೆಚ್ಚಿಗೆ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಹಾಳು ಬಿದ್ದಿವೆ. ಕೆಲ ಗ್ರಾಮಗಳಲ್ಲಿ ಘಟಕಗಳನ್ನು ಅಳವಡಿಸಿ ಮರಳಿ ಪ್ರಾರಂಭ ಮಾಡದೇ ಇರುವ ಉದಾಹರಣೆ ನೋಡಲು ಸಿಗುತ್ತದೆ.

185ರಲ್ಲಿ ಕೇವಲ 7 ಘಟಕಗಳು ಮಾತ್ರ ಬಂದ್‌ ಇದ್ದು, ಉಳಿದೆಲ್ಲವೂ ಚಾಲ್ತಿಯಲ್ಲಿವೆ ಎಂದು ಸ್ಥಳೀಯ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ತಾಲೂಕಿನ ಕರಗಾಂವ ಗ್ರಾಪಂ ವ್ಯಾಪ್ತಿಯ ಹಂಚನಾಳ ಕೆಕೆ, ನಾಗರಮುನ್ನೋಳ್ಳಿ, ಉಮರಾಣಿ, ಭೀಮಾಪುರವಾಡಿ, ಡೋಣೆವಾಡಿ, ಇಟ್ನಾಳ, ಭೋಜವಾಡಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್‌ ಇವೆ.

ಘಟಕಗಳಿಗೆ ಬೀಗ: ಆರಂಭದಲ್ಲಿ ಖಾಸಗಿ ಏಜನ್ಸಿಗಳು ಘಟಕಗಳನ್ನು ಅಳವಡಿಸಿ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿ ಹೋಗಿವೆ. ಶುದ್ಧ ನೀರಿನ ಘಟಕಗಳ ಏನೇ ನಿರ್ವಹಣೆ ಇದ್ದರೂ ಅದನ್ನು ಅಳವಡಿಸಿರುವ ಖಾಸಗಿ ಏಜನ್ಸಿಯವರೇ ಮಾಡಬೇಕಿತ್ತು. ಆದರೆ ಘಟಕಗಳ ನಿರ್ವಹಣೆ ವೆಚ್ಚ ದುಬಾರಿಯಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್‌ ಮರಳಿ ನೋಡಿಲ್ಲ, ಹೀಗಾಗಿ ಘಟಕಗಳಿಗೆ ಬೀಗ ಬಿದ್ದಿವೆ. ಮತ್ತೆ ಸರ್ಕಾರ ನಿರ್ವಹಣೆ ಮಾಡಲು ಲ್ಯಾಂಡ್‌ ಆರ್ಮಿಗೆ ವಹಿಸಿತ್ತು. ಆದರೂ ಅದು ಸಮರ್ಪಕ ನಿರ್ವಹಣೆ ಆಗದೇ ಇರುವುದರಿಂದ ಈಗ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯವರು ಜವಾಬ್ದಾರಿ ಹೊತ್ತುಕೊಂಡು ಪಾಳು ಬಿದ್ದ ನೀರಿನ ಘಟಕಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡುತ್ತಿದ್ದಾರೆ.

ನಿರ್ವಹಣೆ ಸಮಸ್ಯೆ: ಶುದ್ಧ ಕುಡಿಯುವ ನೀರು ಘಟಕಗಳ ಬಹುಮುಖ್ಯ ಸಮಸ್ಯೆ ಎಂದರೆ ನಿರ್ವಹಣೆ. ಖಾಸಗಿ ಸಂಸ್ಥೆಗಳು ಅಳವಡಿಸಿದ ಘಟಕಗಳನ್ನು 5 ವರ್ಷ ಅವರೇ ನಿರ್ವಹಣೆ ಮಾಡಬೇಕಿತ್ತು. ಸಹಕಾರ ಸಂಘಗಳು ಅಳವಡಿಸಿದ ಘಟಕಗಳನ್ನು ಅವರೇ ನಿರ್ವಹಣೆ ಮಾಡಬೇಕು ಮತ್ತು ಕೆಆರ್‌ ಐಡಿಸಿಎಲ್‌ ಅಳವಡಿಸಿರುವ ಘಟಕಗಳನ್ನು ಸ್ಥಳೀಯ ಗ್ರಾಮ ಪಂಚಾಯತ್‌ದವರು ನಿರ್ವಹಣೆ ಮಾಡಬೇಕಿತ್ತು. ಆದರೆ ಘಟಕಗಳ ನಿರ್ವಹಣೆಗೆ ವೆಚ್ಚ ಮತ್ತು ಸಿಬ್ಬಂದಿ ವೇತನ ಭರಿಸಬೇಕಾದ ಹೊರೆ ಗ್ರಾಮ ಪಂಚಾಯತಿಗೆ ಬಿದ್ದಿರುವ ಪರಿಣಾಮ ಗ್ರಾಮ ಪಂಚಾಯತ್‌ ಅಧಿಕಾರಿಗಳು ಘಟಕಗಳ ನಿರ್ವಹಣೆಗೆ ಮೀನಾಮೇಷ ಅನುಸರಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈಗ ಎಲ್ಲ ಘಟಕಗಳ ನಿರ್ವಹಣೆಯ ಹೊಣೆಯನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ನೀಡಿದೆ. ಹಾಳಾದ ಘಟಕಗಳನ್ನು ದುರಸ್ತಿಗೊಳಿಸಿ ಸಮರ್ಪಕ ನಿರ್ವಹಣೆ ಮಾಡಲಾಗುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ತಾಲೂಕಿನಲ್ಲಿ ಅಳವಡಿಸಿರುವ ಶುದ್ಧ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಬಂದ್‌ ಬಿದ್ದಿವೆ. ಸರ್ಕಾರ ಸೂಕ್ತ ನಿರ್ವಹಣೆ ಮಾಡಿ ಜನರಿಗೆ ನೀರು ಕೊಡಬೇಕು. ಸ್ಥಳೀಯ ಉಮರಾಣಿ ಗ್ರಾಮದಲ್ಲಿ ಅಳವಡಿಸಿರುವ ಘಟಕ ಬಂದ್‌ ಆಗಿ ಎರಡು ವರ್ಷ ಕಳೆದಿದೆ. ಇನ್ನೂ ದುರಸ್ತಿಯಾಗಿಲ್ಲ, ಕೂಡಲೇ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಶುದ್ಧ ನೀರು ಕೊಡಲು ಮುಂದೆ ಬರಬೇಕು. ಮುರಿಗೆಪ್ಪ ಅಡಿಸೇರಿ
ಮಾಜಿ ಅಧ್ಯಕ್ಷರು ಉಮರಾಣಿ

ಚಿಕ್ಕೋಡಿ ತಾಲೂಕಿನ 185 ಘಟಕಗಳಲ್ಲಿ ಈಗ ಎಲ್ಲವನ್ನೂ ದುರಸ್ತಿಗೊಳಿಸಲಾಗಿದೆ. ಏಳು ಘಟಕಗಳನ್ನು ದುರಸ್ತಿ ಮಾಡಬೇಕಿದೆ. ಬರುವ ಒಂದು ವಾರದೊಳಗೆ ಎಲ್ಲ ಘಟಕಗಳನ್ನು ದುರಸ್ತಿಗೊಳಿಸಲಾಗುತ್ತದೆ. ನಿರ್ವಹಣೆ ಮಾಡಲು ಖಾಸಗಿ ಏಜೆನ್ಸಿಗೆ ಟೆಂಡರ್‌ ಕೊಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಗ್ರಾಮೀಣ ಜನರು ಸಹ ಸಮರ್ಪಕವಾಗಿ ನೀರು ಬಳಕೆ ಮಾಡಿಕೊಳ್ಳಬೇಕು.
ಆನಂದ ಬಣಕಾರ,
ಎಇಇ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ

„ಮಹಾದೇವ ಪೂಜೇರಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.