Chikodi; ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದವಳಿಗೆ ಜೀವಾವಧಿ ಶಿಕ್ಷೆ

ತಂದೆಗೆ ಹೇಳುತ್ತೇನೆಂದು ಓಡಿದ ಮಗನನ್ನು ಬಾವಿಗೆ ದೂಡಿದ್ದಳು

Team Udayavani, Aug 14, 2023, 6:58 PM IST

court

ಚಿಕ್ಕೋಡಿ: ಅನೈತಿಕ ಸಂಬಂಧಕ್ಕೆ ಅಡಿಯಾದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ ಮಾಡಿದ ಆರೋಪದ ಹಿನ್ನಲ್ಲೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(31) ಇತಳಿಗೆ ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 2019ರ ಅ. 22ರಂದು ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ವೈ.ಜಿ.ತುಂಗಳ ವಾದ ಮಂಡಿಸಿದರು.

ಘಟನೆ ವಿವರ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(31)  ರಾಮಪ್ಪ ಕೆಂಚಪ್ಪ ಬಸ್ತವಾಡನ ಜತೆ ಅನೈತಿಕ ಸಂಬಂಧ ಹೊಂದಿದ್ದಾಗ  ಆಕೆಯ ಹಿರಿಯ ಮಗ ಪ್ರವೀಣ(10) ತಂದೆಗೆ ಹೇಳುತ್ತೇನೆಂದು ಓಡಿ ಹೋಗಿದ್ದಾನೆ. ಅವನನ್ನು ಕರೆದು 50 ರೂ ಕೊಟ್ಟು ಅಂಗಡಿಯಲ್ಲಿ ತಿನಿಸು ತರಲು ಹೇಳಿ ಕಳುಹಿಸಿದ್ದಳು, ಅವನ ಜತೆ ಚಿಕ್ಕ ಮಗ ಪ್ರಜ್ವಲ(8) ನನ್ನೂ ಕಳುಹಿಸಿ, ಹಿಂದಿನಿಂದ ಹೋಗಿ ಬೆಲ್ಲದ ಬಾಗೇವಾಡಿ ಉದಯಕುಮಾರ ಮಲ್ಲಿನಾಥ ಪಾಟೀಲ ಎಂಬುವವರ ಜಮೀನಿನಲ್ಲಿರುವ ಬಾವಿಯಲ್ಲಿ ಪ್ರವೀಣನ್ನು ಮುಳುಗಿಸಿ ಕೊಲೆ ಮಾಡಿದ್ದಾಳೆ. ಇನ್ನೊಬ್ಬ ಮಗ ಪ್ರಜ್ವಲನಿಗೆ ನೀನು ಯಾರ ಮುಂದೆಯಾದರೂ ಹೇಳಿದರೆ ನಿನಗೂ ಸಹ ಹೀಗೆ ಮಾಡಿ ಸಾಯಿಸಿ ಬಿಡುತ್ತೇನೆ ಅಂತ ಜೀವದ ಬೆದರಿಕೆ ಹಾಕಿದ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕಣದ ತನಿಖೆಯನ್ನು ಮಾಡಿ ಆಗಿನ ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.