ಚೋರ್ಲಾ ಘಾಟ್ನಲ್ಲಿ ಗುಡ್ಡ ಕುಸಿತ: ಸಂಚಾರ ಸ್ಥಗಿತ
Team Udayavani, Jun 17, 2020, 12:51 AM IST
ಬೆಳಗಾವಿ: ಕಳೆದ ಮರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿ-ಗೋವಾ ಮಾರ್ಗದಲ್ಲಿರುವ ಚೋರ್ಲಾ ಘಾಟ್ನಲ್ಲಿ ಮಂಗಳವಾರ ಗುಡ್ಡ ಕುಸಿದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
ಚೊರ್ಲಾ ಘಾಟ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಮಳೆ ಸುರಿಯುತ್ತಿದ್ದು, ಮೇಲ್ಭಾಗದಿಂದ ಗುಡ್ಡ ಕುಸಿದು ಬಿದ್ದಿದೆ. ರಸ್ತೆ ಮೇಲೆ ಮಣ್ಣು, ಗಿಡಗಳು ಬಿದ್ದಿದ್ದರಿಂದ ರಸ್ತೆ ಸಂಚಾರ ಬಂದ್ ಆಗಿತ್ತು.
ಖಾನಾಪುರ ಮೂಲಕ ಗೋವಾಕ್ಕೆ ಹೋಗುವ ಈ ಮಾರ್ಗ ಸಂಪೂರ್ಣ ಸ್ಥಗಿತಗೊಂಡಿದೆ. ಅನೇಕ ವಾಹನಗಳು ರಸ್ತೆ ಮೇಲೆ ನಿಂತಿವೆ.
ಗೋವಾಕ್ಕೆ ಬೆಳಗಾವಿಯಿಂದ ಹೋಗುವ ತರಕಾರಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಿಸಿದ ಇಲಾಖೆ ಸಿಬ್ಬಂದಿ ಬಂದು ಮಣ್ಣು ಹಾಗೂ ಗಿಡದ ಟೊಂಗೆಗಳನ್ನು ತೆಗೆದು ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ