ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ: ಸವದಿ


Team Udayavani, Jan 25, 2020, 10:10 PM IST

Laxman-Savadi

ಬೆಳಗಾವಿ: ಸರಕಾರದಲ್ಲಿ ತಮ್ಮನ್ನು ಮುಂದುವರಿಸುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸಂಪುಟದಿಂದ ತಮ್ಮನ್ನು ಕೈಬಿಟ್ಟು, ಆರ್‌.ಶಂಕರ್‌ಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಕುರಿತು ಏನೂ ಮಾತನಾಡುವುದಿಲ್ಲ. ಈ ವಿಷಯದಲ್ಲಿ ಹೈಕಮಾಂಡ್‌ ನಿರ್ಧಾರ ಅಂತಿಮ ಎಂದರು.

ಬ್ಲ್ಯಾಕ್‌ಮೇಲ್‌ ಇಲ್ಲ:
ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಚ್‌.ವಿಶ್ವನಾಥ್‌ ಹಾಗೂ ಎಂಟಿಬಿ ನಾಗರಾಜ್‌ ಅವರು ಭಾವನಾತ್ಮಕವಾಗಿ ಮುಖ್ಯಮಂತ್ರಿಗಳನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅವರೆಲ್ಲರ ಬೆಂಬಲದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಯಾವುದೋ ಕಾರಣಕ್ಕೆ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ನಮಗೂ ಸ್ಥಾನ ಬೇಕು ಎಂದು ಅವರು ಅಪೇಕ್ಷೆ ಪಡುವುದರಲ್ಲಿ ತಪ್ಪೇನೂ ಇಲ್ಲ ಎಂದರು.

ಮುಖ್ಯಮಂತ್ರಿಯವರಿಗೆ ಪರ್ಸನಲ್‌ ಪವರ್‌ ಮುಖ್ಯ. ರಾಜ್ಯದ ಬಗ್ಗೆ ಚಿಂತೆ ಇಲ್ಲ, ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಟ್ವೀಟ್‌ ಕುರಿತು ಪ್ರತಿಕ್ರಿಯಿಸಿದ ಅವರು, “ವಿಪಕ್ಷ ನಾಯಕರಿಗೆ ನಮ್ಮನ್ನು ಟೀಕೆ ಮಾಡುವುದೇ ಕೆಲಸ. ಅದನ್ನು ಸಿದ್ದರಾಮಯ್ಯ ನಿಭಾಯಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಎಲ್ಲರಿಗೂ ಸಚಿವರಾಗುವ ಅಪೇಕ್ಷೆ ಇರುತ್ತದೆ. ಅಧಿಕಾರ, ಅಂತಸ್ತಿನ ಬಯಕೆ ಹಾಗೂ ಕೆಲಸ ಮಾಡುವ ಇಚ್ಛಾಶಕ್ತಿ ಇರುತ್ತದೆ. ಹಾಗಾಗಿ, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದು, ಕಾರ್ಯಕರ್ತನಾಗಿಯೂ ಕೆಲಸ ಮಾಡಲು ಸಿದ್ಧವಿರುವುದಾಗಿ ಅವರು ಸ್ಪಷ್ಟಪಡಿಸಿದರು.

ಒಂದು ವಾರದಲ್ಲಿ ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಧನುರ್ಮಾಸ ಕಳೆದಿದೆ. ವರಿಷ್ಠರ ಜೊತೆಗೆ ಮಾತನಾಡುವುದಾಗಿ ಸ್ವತ: ಸಿಎಂ ಯಡಿಯೂರಪ್ಪ ಅವರೇ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪರಮಾಧಿಕಾರ ಬಳಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.