ಕೋರೆ ಅಮೃತ ಮಹೋತ್ಸವಕ್ಕೆ ಕ್ಷಣಗಣನೆ

ಲಕ್ಷ ಜನ ಸೇರುವ ನಿರೀಕ್ಷೆ; ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ; ವರ್ಷಪೂರ್ತಿ ಕಾರ್ಯಕ್ರಮಗಳ ಆಯೋಜನೆ

Team Udayavani, Oct 15, 2022, 3:06 PM IST

15

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವವನ್ನು ಅದ್ದೂರಿಯ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳು ಭರದಿಂದ ನಡೆದಿದ್ದು, ಇದಕ್ಕಾಗಿ ಜಿಲ್ಲಾ ಕ್ರೀಡಾಂಗಣವನ್ನು ಮದುವಣಗಿತ್ತಿಯಂತೆ ಸಜ್ಜುಗೊಳಿಸಲಾಗುತ್ತಿದೆ.

ಕಳೆದ ನಾಲ್ಕೈದು ದಿನಗಳಿಂದ ಮಳೆ ಕಾಡುತ್ತಿದ್ದರೂ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ ಸುಸಜ್ಜಿತ ವೇದಿಕೆ ಹಾಗೂ ಪ್ರೇಕ್ಷಕರು ಕುಳಿತುಕೊಳ್ಳುವ ಬೃಹತ್‌ ಪೆಂಡಾಲ್‌ ನಿರ್ಮಾಣ ಮಾಡಲಾಗುತ್ತಿದೆ. ಕೋರೆ ಅವರ ಅಮೃತ ಮಹೋತ್ಸವ ಬಹಳ ಅರ್ಥಪೂರ್ಣವಾಗಿರಬೇಕು. ಇತಿಹಾಸದಲ್ಲಿ ದಾಖಲಾಗಬೇಕು ಎಂಬ ಉದ್ದೇಶದಿಂದ ಇಡೀ ಕೆಎಲ್‌ಇ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿಗಳು ಟೊಂಕಕಟ್ಟಿ ನಿಂತಿದ್ದು ಇದಕ್ಕೆ ಬೆಳಗಾವಿ ಜಿಲ್ಲೆಯ ರಾಜಕೀಯ ನಾಯಕರು ಪಕ್ಷಾತೀತವಾಗಿ ಬೆಂಬಲವಾಗಿ ನಿಂತಿರುವುದು ವಿಶೇಷ.

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಅ. 15ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಅಮೃತ ಮಹೋತ್ಸವ ಸಮಾರಂಭಕ್ಕೆ ಕರ್ನಾಟಕವಲ್ಲದೆ ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಸುಮಾರು ಒಂದು ಲಕ್ಷ ಜನರು ಸಾಕ್ಷಿಯಾಗಲಿದ್ದಾರೆ.

ಗಣ್ಯರು ಭಾಗಿ: ಮುಖ್ಯ ಅತಿಥಿಯಾಗಿ ಕೇಂದ್ರ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ, ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ ಸಾವಂತ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ .ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಆರ್‌.ವಿ. ದೇಶಪಾಂಡೆ, ಮಹಾರಾಷ್ಟ್ರದ ಸಚಿವ ರಾಧಾಕೃಷ್ಣ ಪಾಟೀಲ, ಅಖೀಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಗಮಿಸಲಿದ್ದಾರೆ.

ಊಟ-ಪಾರ್ಕಿಂಗ್‌ ವ್ಯವಸ್ಥೆ: ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಜನರಿಗಾಗಿ ಭೂತರಾಮನಹಟ್ಟಿಯ ಮುಕ್ತಿಮಠ, ಕಣಬರ್ಗಿಯ ಸಂಕಲ್ಪ ಗಾರ್ಡನ್‌, ನಿಲಜಿ, ಧರ್ಮನಾಥ ಭವನ, ನಾಗನೂರು ರುದ್ರಾಕ್ಷಿಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಮಹಾಂತೇಶ ನಗರ, ಬಾಕ್ಸೈಟ್‌ ರಸ್ತೆ, ಶ್ರೀನಗರ ಹಾಗೂ ಐಸಿಎಂಆರ್‌ ಆವರಣದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವರ್ಷವಿಡೀ ಕಾರ್ಯಕ್ರಮ: ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಅವಿಸ್ಮರಣೀಯವಾಗಿ ಉಳಿಯಬೇಕು ಎಂಬ ಉದ್ದೇಶದಿಂದ ವಿಶಿಷ್ಟವಾಗಿ ಕಾರ್ಯಕ್ರಮ ಆಯೋಜಿಸಿರುವ ಕೆಎಲ್‌ಇ ಸಂಸ್ಥೆಯು ಇದಕ್ಕೆ ಪೂರಕವಾಗಿ ವರ್ಷವಿಡೀ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂದಿನ ತಿಂಗಳು ನವಂಬರ್‌ ದಲ್ಲಿ ಬೆಳಗಾವಿಯಲ್ಲಿ ಮಠಾಧೀಶರ ಸಮಾವೇಶ ಆಯೋಜಿಸಿದೆ. 2023ರ ಜನವರಿಯಲ್ಲಿ ಚಿದಾನಂದ ಪ್ರಭು ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೃಷಿ ಮೇಳ ನಡೆಸಲಾಗುವುದು ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.