ಚುನಾವಣಾ ಕಾವಿನ ಜತೆ ಪಾಸಿಟಿವ್‌ ಏರಿಕೆ

­ರಾಜಕೀಯ ಮುಖಂಡರಿಗೆ ತಗುಲಿದ ಸೋಂಕು !­ಸಮಾವೇಶ, ಸಭೆ, ರೋಡ್‌ ಶೋಗಳಿಂದ ಆತಂಕ !

Team Udayavani, Apr 17, 2021, 7:45 PM IST

fgdrt

ಬೆಳಗಾವಿ: ದೇಶಾದ್ಯಂತ ಕೋವಿಡ್ ಎರಡನೇ ಅಲೆ ಅಪ್ಪಳಿಸಿದರೂ ಬೆಳಗಾವಿಯತ್ತ ಮುಖ ಮಾಡಿಲ್ಲ ಎಂದುಕೊಂಡಿದ್ದ ಬೆಳಗಾವಿಗರಲ್ಲಿ ಈಗ ಆತಂಕ ಮನೆ ಮಾಡಿದ್ದು, ಲೋಕಸಭೆ ಉಪಚುನಾವಣೆ ಬಹಿರಂಗ ಪ್ರಚಾರ ಸಭೆ ಶುರುವಾದಾಗಿನಿಂದ ಸೋಂಕಿತರ ಪ್ರಮಾಣದಲ್ಲಿಯೂ ಏರಿಕೆ ಆಗಿದೆ.

ರಾಜಕೀಯ ನಾಯಕರಲ್ಲಿ ಪಾಸಿಟಿವ್‌ ಬಂದಿರುವುದು ಆತಂಕಕ್ಕೆ ಪುಷ್ಠಿ ನೀಡಿದಂತಾಗಿದೆ. ಕಳೆದ 15 ದಿನಗಳಿಂದ ಲೋಕಸಭೆ ಉಪಚುನಾವಣಾ ಕಾವು ಹೆಚ್ಚಳವಾಗಿದ್ದರಿಂದ ಬಹಿರಂಗ ಸಭೆ, ಸಮಾವೇಶ, ರ್ಯಾಲಿ, ರೋಡ್‌ ಷೋಗಳಿಗೆ ನಿರ್ಬಂಧ ಇಲ್ಲವಾಗಿತ್ತು. ರಾಜಕೀಯ ಪಕ್ಷಗಳು ಬೇಕಾಬಿಟ್ಟಿಯಾಗಿ ಜನದಟ್ಟಣೆ ಮಾಡಿ ಪ್ರಚಾರ ನಡೆಸಿವೆ. ಈಗ ರಾಜಕೀಯ ಮುಖಂಡರಲ್ಲಿ ಸೋಂಕು ಕಂಡು ಬಂದಿರುವುದು ಇನ್ನುಳಿದವರಲ್ಲಿ ಭೀತಿ ಕಾಡುತ್ತಿದೆ. ನಿತ್ಯ 100 ಗಡಿ ಸೋಂಕು: ದಾಟಿದ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ.

ನಾಲ್ಕೈದು ಸಲ ಸೋಂಕಿತ ಪ್ರಕರಣಗಳು ಪ್ರತಿ ನಿತ್ಯ 100 ಗಡಿ ದಾಟಿವೆ. ಬೆಳಗಾವಿ ನಗರ, ತಾಲೂಕು ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿಯೇ ಈ ಪ್ರಮಾಣ ಹೆಚ್ಚಳವಾಗಿದ್ದು, ಸಾಮಾಜಿಕ ಅಂತರ ಇಲ್ಲದ ಸಮಾವೇಶಗಳೇ ಕಾರಣವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡತೊಡಗಿದೆ. ಬಹುತೇಕ ಚುನಾವಣಾ ಪ್ರಚಾರ ಸಭೆಗಳಲ್ಲಿ ಮಾಸ್ಕ್ ಕಡ್ಡಾಯ ಕಂಡು ಬಂದೇ ಇಲ್ಲ. ಸಾಮಾಜಿಕ ಅಂತರವಂತೂ ಕಾಣ ಸಿಕ್ಕಿಲ್ಲ. ಶಕ್ತಿ ಪ್ರದರ್ಶನ ತೋರಿಸಲು ರಾಜಕೀಯ ನಾಯಕರು ಹೆಚ್ಚೆಚ್ಚು ಜನರನ್ನು ಸೇರಿದ್ದರು. ಕೆಲವು ಕಡೆಗಳಲ್ಲಿ ನಾಯಕರೂ ಮಾಸ್ಕ್ ಧರಿಸಿರಲಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.

ಹೆಚ್ಚಿದ ಪ್ರಕರಣಗಳ ಸಂಖ್ಯೆ:

ಜಿಲ್ಲೆಯಲ್ಲಿ ಇ. 16ರಂದು 120, ಏ. 15ರಂದು 135, ಏ. 14ರಂದು 107, ಏ. 13ರಂದು 42, ಏ. 12ರಂದು 39, ಏ. 11ರಂದು 74, ಏ. 10ರಂದು 75, ಏ. 9ರಂದು 76, ಏ. 8ರಂದು 92, ಏ. 7ರಂದು 101, ಏ. 6ರಂದು 47ಹೀಗೆ ದಿನದಿಂದ ದಿನಕ್ಕೆ ಸೋಂಕಿತರ ಸಂಕ್ಯೆ ಹೆಚ್ಚುತ್ತಲೇ ಹೋಗಿದೆ. ಇದರಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎರಡು ದಿನಗಳ ಚುನಾವಣಾ ಪ್ರಚಾರಕ್ಕೆಂದು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸೋಂಕು ತಗುಲಿದೆ. ಇವರ ಸಂಪರ್ಕದಲ್ಲಿ ಬಹಳಷ್ಟು ಜನರು ಬಂದಿದ್ದಾರೆ. ಜತೆಗೆ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರೂ ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು. ಈಗ ಅವರಿಗೂ ಸೋಂಕು ದೃಢಪಟ್ಟಿದೆ. ಕಳೆದ 15 ದಿನಗಳಿಂದ ಬಿಜೆಪಿ ನಾಯಕರು ಎಡೆಬಿಡದೇ ತಿರುಗಾಡಿ ಕಾರ್ಯಕರ್ತರ ಸಂಪರ್ಕದಲ್ಲಿದ್ದುಕೊಂಡು ಪ್ರಚಾರ ನಡೆಸಿದ್ದರು. ಕಳೆದ 10-12 ದಿನಗಳಲ್ಲಿ ಮುಖ್ಯಮಂತ್ರಿಗಳು ಎರಡು ಬಾರಿ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಸವದತ್ತಿ, ರಾಮದುರ್ಗ, ಗೋಕಾಕ, ಅರಭಾಂವಿ, ಬೆಳಗಾವಿ ಗ್ರಾಮೀಣ, ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಅನೇಕರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು. ಸುಮಾರು 200ಕ್ಕೂ ಹೆಚ್ಚು ಜನರು ಪ್ರಾಥಮಿಕ ಸಂಪರ್ಕದಲ್ಲಿ ಬಂದಿರಬಹುದು ಎಂಬುದನ್ನು ಅಂದಾಜಿಸಲಾಗಿದೆ.

ಹೆಬ್ಟಾಳಕರಗೆ ಪಾಸಿಟಿವ್‌: ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪ್ರಚಾರದಲ್ಲಿ ಹಗಲಿರುಳು ತೊಡಗಿಕೊಂಡಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿà ಹೆಬ್ಟಾಳಕರ, ಸಹೋದರ ಚನ್ನರಾಜ ಹಟ್ಟಿಹೊಳಿ, ವಾಹನ ಚಾಲಕ ಸೇರಿ 8 ಮಂದಿಗೆ ಸೋಂಕು ದೃಢಪಟ್ಟಿದೆ. ಗ್ರಾಮೀಣ ಭಾಗದಲ್ಲಿ ಒಂದು ದಿನವೂ ವಿಶ್ರಾಂತಿ ಪಡೆಯದೇ ಹೆಬ್ಟಾಳಕರ ಹಾಗೂ ಹಟ್ಟಿಹೊಳಿ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಐದಾರು ದಿನಗಳ ಹಿಂದೆಯಷ್ಟೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್‌ ಸುಜೇìವಾಲ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎಂ.ಬಿ. ಪಾಟೀಲ, ರಾಮಲಿಂಗಾ ರೆಡ್ಡಿ, ಆರ್‌.ವಿ. ದೇಶಪಾಂಡೆ ಸೇರಿ ಅನೇಕ ಕೈ ನಾಯಕರು ಬೆಳಗಾವಿಗೆ ಬಂದು ಪ್ರಚಾರ ನಡೆಸಿದ್ದರು. ಇವರೆಲ್ಲರ ಸಂಪರ್ಕದಲ್ಲಿ ಶಾಸಕಿ ಹೆಬ್ಟಾಳಕರ ಮತ್ತು ಸಹೋದರ ಚನ್ನರಾಜ ಇದ್ದರು. ಈಗ ಈ ಎಲ್ಲ ನಾಯಕರಿಗೂ ಆತಂಕ ಶುರುವಾಗಿದೆ.

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.