ಕೋವಿಡ್ ಸೋಂಕು ಹಿನ್ನೆಲೆ : ರಮೇಶ್ ಜಾರಕಿಹೊಳಿ ಐಸಿಯುಗೆ ಶಿಫ್ಟ್!
Team Udayavani, Apr 5, 2021, 1:43 PM IST
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಗೋಕಾಕದ ಸರ್ಕಾರಿ ಆಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊರ ರಾಜ್ಯದ ಪ್ರವಾಸದಲ್ಲಿದ್ದ ರಮೇಶ್ ಜಾರಕಿಹೊಳಿ ಗುರುವಾರ ರಾತ್ರಿ ಗೋಕಾಕಿಗೆ ಬಂದಿದ್ದರು. ನಂತರ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿದ್ದವು. ಭಾನುವಾರ ರಾತ್ರಿ ಅವರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಸೋಂಕು ದೃಢಪಟ್ಟಿದೆ ಎಂದು ಗೋಕಾಕ ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಹಿತಿ ನೀಡಿದರು.
ರಮೇಶ್ ಜಾರಕಿಹೊಳಿ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಇರುವ ಕಾರಣ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ ಬಂದಿರುವ ಮಾಹಿತಿ ಲಭ್ಯವಾಗಿದ್ದು ಅಲ್ಲಿಂದ ಅವರಿಗೆ ಈ ಸೋಂಕು ತಗುಲಿರಬಹುದು ಎಂದು ವೈದ್ಯರು ಹೇಳಿದ್ದಾರೆ. ಈಗ ಕೋವಿಡ್ ವಾರ್ಡ್ನ ಐಸಿಯುನಲ್ಲಿರುವ ರಮೇಶ್ ಜಾರಕಿಹೊಳಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ