ನಾಲೆಗೆ ಬಿದ್ದ ಕೂಲಿ ಕೆಲಸಗಾರರಿದ್ದ ಕ್ರೂಸರ್: ಸ್ಥಳದಲ್ಲೇ ಏಳು ಜನರ ಸಾವು, ಮೂವರು ಗಂಭೀರ
Team Udayavani, Jun 26, 2022, 9:53 AM IST
ಬೆಳಗಾವಿ: ಕೂಲಿ ಕೆಲಸಗಾರರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವೊಂದು ನಾಲಾಗೆ ಬಿದ್ದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಘಟನೆ ನಡೆದಿದ್ದು, ಒಟ್ಟು 12 ಜನರು ಕೂಲಿ ಕೆಲಸಕ್ಕೆಂದು ಅಕ್ಕತಂಗೇರಹಾಳದಿಂದ ಬೆಳಗಾವಿಗೆ ಆಗಮಿಸುತ್ತಿದ್ದರು.
ಗೋಕಾಕ ತಾಲೂಕಿನ ಬಸನು ಹನಮನ್ನವರ, ಫಕೀರಪ್ಪ ಕಳಸನ್ನವರ, ಅಡಿವೆಪ್ಪ ಚಿಲಬಾವಿ, ಕರೆಪ್ಪ ರಾಮಣ್ಣ ಗಸ್ತಿ, ಬಸವರಾಜ ಚಂದ್ರಪ್ಪ ದಳವಿ, ದಾಸನಟ್ಟಿ ಗ್ರಾಮದ ಕೃಷ್ಣಾ ಕಂಡೂರಿ ಸೇರಿದಂತೆ ಏಳು ಜನ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಬೈಕ್ ನಲ್ಲಿ ಜಾಲಿ ರೈಡ್: ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು
ಕಲ್ಯಾಳ ಪುಲ್ ಬಳಿ ನಿಯಂತ್ರಣ ತಪ್ಪಿದ ಕ್ರೂಸರ್ ಬಳ್ಳಾರಿ ನಾಲಾಕ್ಕೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಏಳು ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರನ್ನೂ ಸ್ಥಳೀಯರು, ಪೊಲೀಸರು ಸೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?