ಕೃಷ್ಣಾ ತೀರ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಪ್ರವಾಹ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಜ್ಜು ; ಅನುದಾನದ ಕೊರತೆ ಇಲ್ಲ ; 2.90 ಲಕ್ಷ ಕ್ಯೂಸೆಕ್‌ ನೀರು ಬಂದರೆ ಪ್ರವಾಹ ಪರಿಸ್ಥಿತಿ: ಡಿಸಿ

Team Udayavani, Jul 14, 2022, 4:29 PM IST

17

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಶೇ. 38 ರಷ್ಟು ನೀರು ಮಾತ್ರ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಹರಿದು ಬರುತ್ತಿದೆ. ಒಟ್ಟು 2.90 ಲಕ್ಷ ಕ್ಯೂಸೆಕ್‌ ನೀರು ಬಂದರೆ ಮಾತ್ರ ಇಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುತ್ತದೆ. ಪ್ರವಾಹ ನಿರ್ವಹಣೆಗೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಅನುದಾನ ನೀಡಿದೆ. ನದಿ ತೀರದ ಜನರು ಸುರಕ್ಷಿತವಾಗಿ ಇರಬೇಕು ಮತ್ತು ಸಂಭವನೀಯ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಕೃಷ್ಣಾ ನದಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ತೆರಳಿ ಬೆಳಗಾವಿ ಜಿಪಂ ಸಿಇಒ ದರ್ಶನ ಮತ್ತು ಎಸ್‌ಪಿ ಡಾ| ಸಂಜೀವ ಪಾಟೀಲ ಜೊತೆಗೂಡಿ ಪ್ರವಾಹ ನಿರ್ವಹಣೆ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಸದ್ಯ ಕೃಷ್ಣಾ ನದಿಗೆ ಕಲ್ಲೋಳ ಬ್ಯಾರೇಜ್‌ದಿಂದ 1.12 ಲಕ್ಷ ಕ್ಯೂಸೆಕ್‌ ನೀರು ಬರುತ್ತಿದೆ. ಮುಂದಿನ ವಾರದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಈಗ ಮಹಾರಾಷ್ಟ್ರದ ಜಲಾಶಯಗಳಿಂದ ಯಾವುದೇ ನೀರು ಹರಿಬಿಟ್ಟಿಲ್ಲ. ಅಲ್ಲಿಯ ಜಲಾಶಯ ಭರ್ತಿಯಾಗಿಲ್ಲ, ಭರ್ತಿಯಾದ ನಂತರ ನೀರು ಬಿಡುವ ಸಾಧ್ಯತೆ ಇದೆ ಎಂದರು.

ಕಳೆದ ಬಾರಿಯ ಅನುಭವವನ್ನು ಆಧರಿಸಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಹಾನಿಯಾದ ಮನೆಗೆ ಪರಿಹಾರ: ಮನೆಗಳಿಗೆ ನೀರು ನುಗ್ಗಿದರೆ 10 ಸಾವಿರ ಮತ್ತು ಸಂಪೂರ್ಣ ಮನೆ ಬಿದ್ದರೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಇಲ್ಲಿಯವರಿಗೆ 317 ಮನೆಗಳಿಗೆ ಹಾನಿಯಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳು ಹಾನಿಯಾದ ಮನೆ ಸಮೀಕ್ಷೆ ಮಾಡಿದ ಬಳಿಕ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದರು.

ನೋಡಲ್‌ ಅಧಿಕಾರಿಗಳಿಗೆ ಸೂಚನೆ: ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಈಗಾಗಲೇ ಪ್ರತಿ ತಾಲೂಕಿಗೂ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡಲ್‌ ಅಧಿಕಾರಿಗಳು ಆಯಾ ತಾಲೂಕಿನ ಪರಿಸ್ಥಿತಿಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು ಎಂದು ಸೂಚನೆ ನೀಡುವುದಾಗಿ ತಿಳಿಸಿದರು.

ರಕ್ಷಣೆಗೆ 30 ಬೋಟ್‌ ವ್ಯವಸ್ಥೆ: ಕೃಷ್ಣಾ ಮತ್ತು ಉಪನದಿಗಳಿಗೆ ಪ್ರವಾಹ ಎದುರಾದರೆ ಜನ-ಜಾನುವಾರು ರಕ್ಷಣೆ ಮಾಡಲು ಉಪವಿಭಾಗದಲ್ಲಿ 30 ಬೋಟ್‌ ವ್ಯವಸ್ಥೆ ಮಾಡಲಾಗಿದೆ. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಈಗಾಗಲೇ ನದಿ ತೀರದ ಪ್ರದೇಶದಲ್ಲಿ ಬಿಡುಬಿಟ್ಟಿದ್ದಾರೆ.

ಬೋಟ್‌ಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ: ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಿಂದ ಕಲ್ಲೋಳ ಗ್ರಾಮದ ಸೇತುವೆ ತನಕ ಕೃಷ್ಣಾ ನದಿಯಲ್ಲಿ ಬೋಟ್‌ದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಸಂಚರಿಸಿ ನೀರಿನ ಮಟ್ಟವನ್ನು ಅವಲೋಕಿಸಿದರು. ಬೋಟ್‌ ಹತ್ತುವ ಮೊದಲು ಜಿಲ್ಲಾ ಧಿಕಾರಿ ನಿತೇಶ ಪಾಟೀಲ ಲೈಫ್‌ ಜಾಕೇಟ್‌ ಧರಿಸಿ, ಉಳಿದ ಅಧಿಕಾರಿಗಳಿಗೂ ಸಹ ಲೈಫ್‌ ಜಾಕೇಟ್‌ ಧರಿಸುವಂತೆ ಸೂಚಿಸಿದರು.

ಚಿಕ್ಕೋಡಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ, ಜಿಲ್ಲಾ ನೋಡಲ್‌ ಅಧಿಕಾರಿ ಎಸ್‌.ಎಸ್‌.ಪಾಟೀಲ, ಉಪತಹಶೀಲ್ದಾರ್‌ ಸಿ.ಎ.ಪಾಟೀಲ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಗಿರೀಶ ಎಸ್‌.ಬಿ, ಸಿಪಿಐ ಆರ್‌.ಆರ್‌.ಪಾಟೀಲ, ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.