ಮೊಳವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಜನರ ಅಹವಾಲು ಆಲಿಸಿದ ಡಿಸಿ
Team Udayavani, Mar 20, 2022, 12:21 PM IST
ಬೆಳಗಾವಿ: ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೊಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಗ್ರಾಮಸ್ಥರು ಅಲಂಕೃತ ಎತ್ತಿನ ಬಂಡಿಯಲ್ಲಿ ಪ್ರೀತಿಯಿಂದ ಸ್ವಾಗತಿಸಿಕೊಂಡರು.
ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆಗೆ ಜಿಲ್ಲಾಧಿಕಾರಿ ಹಿರೇಮಠ ಹೆಜ್ಜೆ ಹಾಕಿದರು. ಗ್ರಾಮದ ಹಿರಿಯರು, ಪೂರ್ಣಕುಂಭ ಹೊತ್ತ ಮಹಿಳೆಯರು ಆತ್ಮೀಯವಾಗಿ ಬರಮಾಡಿಕೊಂಡರು. ಮೊಳವಾಡದ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಗ್ರಾಮ ಸಂಚಾರ ಆರಂಭಿಸಿದರು.
ಅಹವಾಲು ಆಲಿಸಲು ಬಂದ ಜಿಲ್ಲಾಧಿಕಾರಿಗಳನ್ನು ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಕರೆದೊಯ್ದರು. ಗ್ರಾಮದ ಮಹಾದೇವ ಮಂದಿರದ ಬಳಿ ಎತ್ತಿನ ಬಂಡಿಯಿಂದ ಕೆಳಗಿಳಿದ ಜಿಲ್ಲಾಧಿಕಾರಿಗಳು ಸ್ವತಃ ಡೊಳ್ಳು ಬಾರಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸಾಥ್ ನೀಡಿದರು.
ಗ್ರಾಮದ ಮಂದಿರಗಳಿಗೆ ಭೇಟಿ: ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಕ್ಕದ ಬೀರದೇವರ ದರ್ಶನ ಪಡೆದುಕೊಂಡರು. ಇದಾದ ಬಳಿಕ ಜೈನ ಬಸದಿಗೆ ತೆರಳಿದರು. ನಂತರ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಬಳಿಕ ಗ್ರಾಮಸ್ಥರ ಅಹವಾಲು ಆಲಿಸಿದರು.
2019ರಲ್ಲಿ ಪ್ರವಾಹದ ವೇಳೆ ಮುಳುಗಡೆಯಾಗಿದ್ದ ಪ್ರದೇಶಗಳ ಕುರಿತು ಜನರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಂಗವಿಕಲ ಬಾಲಕ ಪ್ರಜ್ವಲ್ ರಾಮು ಬಾಳಿಕಾಯಿ ಅವರ ಪಾಲಕರೊಂದಿಗೆ ಮಾತನಾಡಿದರು. ಮಗ ಬುದ್ಧಿಮಾಂಧ್ಯನಾಗಿದ್ದು, ತಂದೆ ಕ್ಯಾನ್ಸರ್ ಪೀಡಿತರಾಗಿದ್ದಾರೆ. ಕೂಡಲೇ ಮನೆಯನ್ನು ಕಟ್ಟಿಸಿಕೊಡುವಂತೆ ಬಾಲಕನ ತಂದೆ ಮನವಿ ಮಾಡಿಕೊಂಡರು.
ಹತ್ತಿರದಲ್ಲಿ ಪುನರ್ವಸತಿಗೆ ಮನವಿ: ಕೃಷ್ಣಾ ನದಿ ತೀರದಲ್ಲಿರುವ ಮೋಳವಾಡ ಗ್ರಾಮವನ್ನು ಮುಳುಗಡೆ ಗ್ರಾಮ ಎಂದು ಘೋಷಿಸಿ ಈಗಾಗಲೇ ಎಲ್ಲ ಕುಟುಂಬಗಳಿಗೂ ಸರ್ಕಾರ ಪರಿಹಾರ ಒದಗಿಸಿದೆ. ಆದರೆ ಪುನರ್ವಸತಿ ಕೇಂದ್ರವು ಮುಳುಗಡೆ ಗ್ರಾಮದಿಂದ ಎಂಟತ್ತು ಕಿ.ಮೀ. ದೂರವಿದೆ. ಇದರ ಬದಲಾಗಿ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸಮೀಪದಲ್ಲಿ ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒಕ್ಕೋರಲಿನ ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು, ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ. ಕೊಡ್ಲಿ, ತಹಶೀಲ್ದಾರ್ ಆರ್.ಆರ್. ಬುರ್ಲಿ, ತಾಲೂಕು ಆರೋಗ್ಯಾಧಿಕಾರಿ ಬಸಗೌಡ ಕಾಗೆ ಸೇರಿದಂತೆ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ