ಶೀಘ್ರವೇ ಅಸಮಾಧಾನ ಶಮನ

Team Udayavani, Mar 28, 2021, 7:30 PM IST

laxman

ಅಥಣಿ: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು. ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಕೆಲವರು ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವುದು ಸಹಜ. ಶರಣು ಸಲಗರ ಅ ಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ. ನಿಜವಾದ ಬಿಜೆಪಿ ಕಾರ್ಯಕರ್ತರು ಯಾರೂ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲ್ಲ. ಬಂಡಾಯವಾಗಿ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಖಾಲಿ ಇರುವುದು ಮತ್ತು ಇನ್ನೂ ಕೆಲವು ಸಚಿವ ಸ್ಥಾನಗಳು ಖಾಲಿ ಇವೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಆವಾಗ ವರಿಷ್ಠರು ಯಾರಿಗೆ ನೀಡಬೇಕೆಂದು ತಿಳಿಸುತ್ತಾರೆಂದು ಪ್ರತಿಕ್ರಿಯಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಇಲ್ಲದೆ ಇರುವುದರಿಂದ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬಿರುವುದಿಲ್ಲ ಮತ್ತು ಬೆಳಗಾವಿ, ರಾಯಚೂರು ಎರಡು ಕಡೆ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸವದಿ ಹೇಳಿದರು.

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಸತೀಶ್‌ ಜಾರಕಿಹೊಳಿ ಪ್ರಬಲ ಕಾಂಗ್ರೆಸ್‌ ಅಭ್ಯರ್ಥಿ ಎಂಬುದನ್ನು ಇಲ್ಲಿ ಪ್ರಶ್ನೆಯಲ್ಲ. ಬಿಜೆಪಿ ಎದುರು ರಾಹುಲ್‌ ಗಾಂಧಿ , ಸೋನಿಯಾ ಗಾಂ ಧಿ ಸ್ಪರ್ಧೆ ಮಾಡಿದರು ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. ದೇಶದ ಪ್ರಧಾನಿ ನರೇಂದ್ರ ಮೋದಿ ಶಕ್ತಿ ಹೆಚ್ಚಿಸಲು ಮತದಾರರ ಪ್ರಭು ಆಶೀರ್ವಾದ ಮಾಡುತ್ತಿದ್ದಾರೆ. ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತತದ ಅಂತರದಲ್ಲಿ ಗೆಲುವು ಸಾಧಿ ಸಲಿದೆ ಎಂದು ತಿಳಿಸಿದರು.

ಪ್ರತಿಭಟನೆ ಕೈ ಬಿಡುವಂತೆ ಮನವಿ: ಮುಂಬರುವ ಏ.7ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿವೆ ಎಂದು ಈಗಾಗಲೇ ಸೂಚನೆ ನೀಡಿದ್ದಾರೆ, ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಸದಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರಿಗೆ ವಿನಂತಿ ಮಾಡಿಕೊಂಡರು. ಈಗಾಗಲೇ ರಾಜ್ಯ ಸರ್ಕಾರ ಸಾರಿಗೆ ನೌಕರರ ಹಲವು ಬೇಡಿಕೆ ಈಡೇರಿಸಿದೆ. ಸಾರಿಗೆ ನೌಕರ ಪ್ರಮುಖ 9 ಬೇಡಿಕೆಯಲ್ಲಿ 8 ಬೇಡಿಕೆ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ತೊಂದರೆ ಉಂಟು ಮಾಡುವ ಕಾರ್ಯಕ್ಕೆ ಮುಂದಾಗಬೇಡಿ. ಸಮಸ್ಯೆಗಳಿಗೆ ಪ್ರತಿಭಟನೆ ಒಂದೇ ಮಾರ್ಗವಲ್ಲ. ಸರ್ಕಾರ ಸಾರಿಗೆ ನೌಕರರ ಪರವಾಗಿ ಇರುವುದು. ಸಾರಿಗೆ ಇಲಾಖೆ ನೌಕರರಿಗೆ ಸದ್ಯದಲ್ಲೇ 6ನೇ ವೇತನ ಆಯೋಗ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.