ಅರ್ಥಪೂರ್ಣ ಜಯಂತಿ ಆಚರಣೆಗೆ ನಿರ್ಧಾರ

ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

Team Udayavani, Mar 22, 2022, 1:16 PM IST

11

ಬೆಳಗಾವಿ: ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್‌ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಏಪ್ರಿಲ್‌ 14 ರಂದು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆದ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ| ಬಾಬಾಸಾಹೇಬ ಅಂಬೇಡ್ಕರ್‌ ಉದ್ಯಾನವನದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ಡಾ.ಬಿ.ಆರ್‌ ಅಂಬೇಡ್ಕರ್‌ ಉದ್ಯಾನವನದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಕಾರ್ಯಕ್ರಮಕ್ಕೆ ಅವಶ್ಯವಿರುವ ಪೆಂಡಾಲ್‌, ವೇದಿಕೆ, ಆಸನಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು ಹಾಗೂ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದರು.

ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಸಲು ಅಂಬೇಡ್ಕರರ ಜೀವನ ಚರಿತ್ರೆ ಹಾಗೂ ಆದರ್ಶಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಉಪನ್ಯಾಸಕರ ಆಯ್ಕೆ ಮಾಡಬೇಕು ಎಂದು ಅಂಬೇಡ್ಕರ್‌ ಸಂಘಟನೆಯ ಮುಖಂಡರಿಗೆ ಸೂಚಿಸಿದರು.

ಧರ್ಮವೀರ ಸಂಭಾಜಿ ವೃತ್ತದಿಂದ, ಕಿರ್ಲೋಸ್ಕರ್‌ ರೋಡ್‌, ರಾಮದೇವ ಗಲ್ಲಿ, ಖಡೆಬಜಾರ್‌ ಮಾರ್ಗವಾಗಿ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಉದ್ಯಾನವನದ ವರೆಗೆ ರೂಪಕ ವಾಹನಗಳ ಮೆರವಣಿಗೆ ಮಾಡಲಾಗುವುದು. ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಉದ್ಯಾನವನದಲ್ಲಿ ಬೆಳಿಗ್ಗೆ ಅಲ್ಪೋಹಾರ ಹಾಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾ ಪ್ರದರ್ಶನಕ್ಕಾಗಿ ಸ್ಥಳೀಯ 10 ಉತ್ತಮ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್‌ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ. ಉಮಾ ಸಾಲಿಗೌಡರ, ಡಿ.ಸಿ.ಪಿ ರವೀಂದ್ರ ಗಡಾದಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು, ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.