ಬೆಳಗಾವಿಯಲ್ಲಿ ಇಳಿಕೆಯಾಗುತ್ತಿದೆ ಮರಣ ಪ್ರಮಾಣ


Team Udayavani, May 17, 2021, 5:03 PM IST

cats

ವರದಿ : ಕೇಶವ ಆದಿ

ಬೆಳಗಾವಿ: ಕೊರೊನಾ ಎರಡನೇ ಅಲೆಯ ಆತಂಕ ಇನ್ನೂ ಕಡಿಮೆಯಾಗಿಲ್ಲ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ ಜಿಲ್ಲೆಯಲ್ಲಿ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಇರುವುದು ಬಹಳಷ್ಟು ಸಮಾಧಾನ ಮೂಡಿಸಿದೆ.

ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈಗ ಪ್ರತಿಶತ 0.26ರಷ್ಟು ಮರಣ ಪ್ರಮಾಣ ಇದೆ. ಪ್ರತಿ ಹತ್ತು ದಿನಗಳಿಗೊಮ್ಮೆ ಪ್ರಕಟವಾಗುವ ಈ ಅಂಕಿ-ಅಂಶಗಳಲ್ಲಿ ಇಳಿಕೆಯಾಗುತ್ತಿರುವುದು ಸ್ವಲ್ಪ ನೆಮ್ಮದಿ ತಂದಿದೆ. ಜತೆಗೆ ಸೋಂಕಿತರಲ್ಲಿ ಹಾಗೂ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾಡಳಿತದಲ್ಲಿ ಹೊಸ ವಿಶ್ವಾಸ ಕಾಣುವಂತೆ ಮಾಡಿದೆ. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ ದಿನವೂ 1000 ಗಡಿ ದಾಟಿದೆ. ಸಮಾಧಾನಕರ ಸಂಗತಿ ಎಂದರೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಮರಣ ಪ್ರಮಾಣದ ಸಂಖ್ಯೆ ಕಡಿಮೆ ಇದೆ. ಇದು ಜನರಲ್ಲಿ ಸ್ವಲ್ಪಮಟ್ಟಿನ ಆತಂಕ ದೂರ ಮಾಡಿದೆ. ಇದರ ಜತೆಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಂದ ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಸಹ ಕಡಿಮೆ ಇದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಒಟ್ಟು ಪಾಸಿಟಿವಿಟಿ ಪ್ರಮಾಣ ಪ್ರತಿಶತ 16.8ರಷ್ಟಿತ್ತು ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಮರಣ ಪ್ರಮಾಣದಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಹಾಗೂ ನಿಯಂತ್ರಣದಲ್ಲಿರುವುದಕ್ಕೆ ಸೋಂಕಿತರ ತಪಾಸಣೆ, ಹೋಮ್‌ ಐಸೋಲೇಷನ್‌, ಅವರಿಗೆ ಸಂಪರ್ಕ ಬಂದವರ ಗುರುತು ಮತ್ತು ತಪಾಸಣೆ ಪ್ರಮುಖ ಕಾರಣ. ಜಿಲ್ಲೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳ ನಿರ್ವಹಣೆ ವಿಷಯದಲ್ಲಿ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬಂದರೂ ಅದಕ್ಕೆ ತಲೆಕೆಡಿಸಿಕೊಳ್ಳದ ವೈದ್ಯರು ಹಾಗೂ ಅಲ್ಲಿನ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುತ್ತಿರುವುದರಿಂದ ಮರಣ ಪ್ರಮಾಣದಲ್ಲಿ ಆತಂಕ ಪಡುವಷ್ಟು ಏರಿಕೆ ಕಂಡು ಬಂದಿಲ್ಲ.

ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಇದ್ದ ಮರಣ ಪ್ರಮಾಣ ಈಗ ಇಲ್ಲ. ಸಾಕಷ್ಟು ಕಡಿಮೆಯಾಗಿದೆ. ಮಾರ್ಚ್‌-ಏಪ್ರಿಲ್‌ದಲ್ಲಿನ ಅಂಕಿ ಅಂಶಗಳು ನಮಗೂ ಸಾಕಷ್ಟು ಚಿಂತೆ ಹುಟ್ಟಿಸಿದ್ದವು. ಆದರೆ ಪರಿಸ್ಥಿತಿಯಲ್ಲಿ ಬಹಳ ಸುಧಾರಣೆಯಾಗಿದೆ. ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಪ್ರತಿಶತ ಒಂದರಷ್ಟಿದ್ದರೆ ಏಪ್ರಿಲ್‌ ತಿಂಗಳಲ್ಲಿ ಇದರ ಪ್ರಮಾಣ 0.93 ದಷ್ಟಿತ್ತು. ಈಗ ಮೇ ತಿಂಗಳಲ್ಲಿ ಇದರ ಪ್ರಮಾಣ ಇಲ್ಲಿಯವರೆಗೆ 0.26 ದಷ್ಟಿದೆ. ಕಡಿಮೆ ಎಂದ ಮಾತ್ರಕ್ಕೆ ಮೈಮರೆತಿಲ್ಲ ಎನ್ನುತ್ತಾರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಸ್‌.ವಿ. ಮುನ್ಯಾಳ. ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಉಂಟಾಗಿಲ್ಲ.

ಆಸ್ಪತ್ರೆಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಜನರೂ ಸಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು. ಸೋಂಕು ಖಚಿತಪಟ್ಟರೆ ಅದಕ್ಕೆ ಚಿಕಿತ್ಸೆ ಪಡೆದರೆ ಸಾವು ತಪ್ಪಿಸಬಹುದು. ಯಾವುದೇ ಕಾರಣಕ್ಕೂ ಸೋಂಕಿನ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬಾರದೆಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂಬುದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಹೇಳಿಕೆ. ಜಿಲ್ಲೆಯಲ್ಲಿ ಸಂಭವಿಸುವ ಎಲ್ಲ ಸಾವುಗಳನ್ನು ಕೊರೊನಾದಿಂದ ಆಗಿವೆ ಎಂದು ಪರಿಗಣಿಸಲು ಆಗಲ್ಲ. ಐಸಿಎಂಆರ್‌ ನ ಕೋವಿಡ್‌ ಮಾರ್ಗಸೂಚಿಯನ್ವಯ ಇರುವ ಸಾವುಗಳನ್ನು ಮಾತ್ರ ಕೋವಿಡ್‌ ಪ್ರಕರಣ ಎಂದು ಪರಿಗಣಿಸಲಾಗುತ್ತದೆ. ಈ ನಿಯಮಾವಳಿಗಳ ಪ್ರಕಾರ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಆತಂಕ ಪಡುವಷ್ಟು ಇಲ್ಲ ಎಂಬುದು ಆರೋಗ್ಯ ಇಲಾಖೆ ಅಧಿಕಾರಿಗಳ ಅಭಿಪ್ರಾಯ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.