ಪುನರ್ವಸತಿ ಕೇಂದ್ರದಲ್ಲಿ ಸಿಎಂ ಬಳಿ ಪಠ್ಯಪುಸ್ತಕಕ್ಕೆ ಬೇಡಿಕೆ!
Team Udayavani, Aug 9, 2019, 5:35 AM IST
ಬೆಳಗಾವಿ: ಮಳೆಯ ಹಾವಳಿಗೆ ತನ್ನ ಪಠ್ಯಪುಸ್ತಕ ಹಾಳಾಗಿದ್ದು, ದಯವಿಟ್ಟು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಮನವಿ ಮಾಡಿಕೊಂಡಿದ್ದಾಳೆ.
ಪ್ರವಾಹ ಸಂಕಷ್ಟಕ್ಕೆ ಸಿಲುಕಿ ಸಂಕೇಶ್ವರದಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ವಿದ್ಯಾರ್ಥಿನಿ, ತಮ್ಮ ನೋವು ಕೇಳಲು ಬಂದ ಮುಖ್ಯಮಂತ್ರಿಗೆ ಗುರುವಾರ ಈ ರೀತಿ ಮನವಿ ಮಾಡಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾದಳು.
ಸಿ.ಎ. ಮೊದಲ ವರ್ಷದ ವಿದ್ಯಾರ್ಥಿನಿ ಸೀಮಾ ಇಂಗಳಿ ಸಿಎಂಗೆ ಪಠ್ಯಪುಸ್ತಕ ಕೊಡಿಸುವಂತೆ ಕೇಳಿದಳು. ಒಂದು ಕ್ಷಣ ಆಶ್ಚರ್ಯಚಕಿತಗೊಂಡ ಮುಖ್ಯಮಂತ್ರಿಗಳು, ನಾಳೆ ಸಂಜೆಯೊಳಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸುವುದಾಗಿ ತಿಳಿಸಿ ತಕ್ಷಣ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ಈ ಬಗ್ಗೆ ಸೂಚನೆ ನೀಡಿದರು.
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸ್ಥಾಪಿಸಲಾಗಿರುವ ಪರಿಹಾರ ಕೇಂದ್ರಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿದಾಗ ಜನರು ತಮ್ಮ ಸಂಕಷ್ಟದ ನಡುವೆಯೂ ಚಪ್ಪಾಳೆ ತಟ್ಟಿ ಅವರಿಗೆ ಸ್ವಾಗತ ಕೋರಿದರು. ಸಂತ್ರಸ್ತರತ್ತ ಮುಖ್ಯಮಂತ್ರಿಗಳು ಕೈಮುಗಿದು ಅವರ ಬಳಿಗೆ ತೆರಳಿದರು. ಸಮಸ್ಯೆ ಆಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ
ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ
ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ