ಕರಾವಳಿ ಸಮಸ್ಯೆ ಚರ್ಚಿಸಲು ನಿರುತ್ಸಾಹ

ಅಧಿವೇಶನದಲ್ಲಿ ಪ್ರಶ್ನೆ ಕ್ಷೇತ್ರದ ಸಮಸ್ಯೆಗೆ ಸೀಮಿತ; ಕಾಣದ ಸಮಗ್ರ ದೃಷ್ಟಿ

Team Udayavani, Dec 20, 2021, 7:20 AM IST

ಕರಾವಳಿ ಸಮಸ್ಯೆ ಚರ್ಚಿಸಲು ನಿರುತ್ಸಾಹ

ಬೆಳಗಾವಿ: ಕರಾವಳಿಯ ಪ್ರಮುಖ ಸಮಸ್ಯೆಗಳ ಕುರಿತು ವಿಧಾನ ಮಂಡಲದ ಅಧಿವೇಶನದಲ್ಲಿ ಸ್ಥಳೀಯ ಶಾಸಕರು ಮೊದಲ ವಾರದಲ್ಲಿ ಚರ್ಚೆ ಯನ್ನೇ ನಡೆಸಿಲ್ಲ. ಎರಡನೇ ವಾರದಲ್ಲಿ ಯಾದರೂ ಆ ಬಗ್ಗೆ ಪ್ರಸ್ತಾವಿಸಿ ಸರಕಾರದ ಗಮನ ಸೆಳೆಯುವ ಅಗತ್ಯವಿದೆ.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಸೂಚಿಸಿದ್ದರೂ ಕೆಂಪಕ್ಕಿಗೆ ಅವಕಾಶ ಇಲ್ಲವಾಗಿದೆ. ಮಳೆ ಯಿಂದಾಗಿ ಭತ್ತ ಮತ್ತು ಬೈ ಹುಲ್ಲು ಹಾಳಾಗಿದ್ದು ಅದಕ್ಕೂ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಕರಾವಳಿಯ ಕೆಲವು ಶಾಸಕರು ತಮ್ಮ ಪ್ರದೇಶದ ಸಮಸ್ಯೆಗಳ ಕುರಿತು ಪ್ರಸ್ತಾವಿಸಿರುವರೇ ವಿನಾ ಕರಾವಳಿಯ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಗಮನ ಸೆಳೆದಿಲ್ಲ.

ಅಕ್ಟೋಬರ್‌, ನವೆಂಬರ್‌ನಲ್ಲಿ ಸುರಿದ ಭಾರೀ ಮಳೆಯಿಂದ ಬಹುತೇಕ ಕಡೆಗಳಲ್ಲಿ ಭತ್ತದ ಕೊಯ್ಲು ಸರಿಯಾಗಿ ಮಾಡಲು ಸಾಧ್ಯವಾಗಿರಲಿಲ್ಲ. ಗದ್ದೆಯಲ್ಲೇ ಭತ್ತ ಮೊಳಕೆಯೊಡೆದು ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿತ್ತು. ಸರಕಾರ ಭತ್ತ ಖರೀದಿ ಕೇಂದ್ರ ತೆರೆದಿದ್ದರೂ ನಿರ್ದಿಷ್ಟ ಸಮಯದಲ್ಲಿ ಖರೀದಿ ಪ್ರಕ್ರಿಯೆ ಆರಂಭಿಸದೆ ಇರುವುದು ರೈತರಿಗೆ ಇನ್ನಷ್ಟು ನೋವುಂಟು ಮಾಡಿದೆ. ಮಲ್ಲಿಗೆ, ಮಟ್ಟುಗುಳ್ಳ ಮತ್ತಿತರ ವಿವಿಧ ವಾಣಿಜ್ಯ ಬೆಳೆಗಳು ಕೂಡ ಫಸಲು ಬಿಡುವ ಸಮಯದಲ್ಲಿ ನಾಶವಾಗಿದ್ದವು. ಬೆಳೆ ಪರಿಹಾರವೂ ಸಿಕ್ಕಿಲ್ಲ. ಮಳೆ ಯಿಂದಾದ ಬೆಳೆ ಹಾನಿ, ಪರಿ ಹಾರ ಸಿಗದೆ ಇರುವ ಬಗ್ಗೆ ಚರ್ಚೆ ಆಗಿಲ್ಲ.

ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ

ತುಳು ಭಾಷೆ: ಕೇಳದ ಧ್ವನಿ
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಬಹು ವರ್ಷಗಳಿಂದ ಹೋರಾಟ ಗಳು ನಡೆದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸುತ್ತ ಬರಲಾಗಿದೆ. ಈಚೆಗೆ ಕೇಂದ್ರದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್‌, ಸದ್ಯ ಇದಕ್ಕೆ ಅವಕಾಶ ಇಲ್ಲ ಎಂದು ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಈ ಬಗ್ಗೆಯೂ ಕರಾವಳಿಯ ಶಾಸಕರು ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯುವ ಅಥವಾ ರಾಜ್ಯ ಸರಕಾರದ ಮೂಲಕ ಕೇಂದ್ರದ ಮೇಲೆ ಮತ್ತೊಮ್ಮೆ ಒತ್ತಡ ಹೇರುವ ಪ್ರಯತ್ನ ಮಾಡಬೇಕಿತ್ತು. ರಾಜ್ಯ ಸರಕಾರದಲ್ಲಿ ಕರಾವಳಿಯ ಎರಡು ಜಿಲ್ಲೆಗಳ ಮೂವರು ಸಚಿವರಿದ್ದು, ಕೇಂದ್ರ ದಲ್ಲಿ ಕೃಷಿ ಖಾತೆಯ ಸಚಿವೆ ಕರಾವಳಿ ಯವರಾಗಿದ್ದರೂ ಸ್ಥಳೀಯ ಕುಚ್ಚಲು ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆ ಯಡಿ ವಿತರಿಸುವ ಪ್ರಕ್ರಿಯೆ ಇನ್ನೂ ಆರಂಭ ವಾಗಿಲ್ಲ. ಈ ಬಗ್ಗೆಯೂ ಸರಕಾರದ ಗಮನ ಸೆಳೆಯುವ ಮತ್ತು ಕೇಂದ್ರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಿಲ್ಲ.

ಕ್ಷೇತ್ರದ ಸಮಸ್ಯೆಗೆ ಸೀಮಿತ
ಕರಾವಳಿಯ ಶಾಸಕರು ತಮ್ಮ ಕ್ಷೇತ್ರದ ಇ-ಸ್ವತ್ತು ತಂತ್ರಾಂಶ ಸಮಸ್ಯೆ, ಯುಪಿಸಿಎಲ್‌ ವಿದ್ಯುತ್‌ ಮಾಗದಿಂದ ಅನಾನುಕೂಲ ಮತ್ತಿತರ ಸಮಸ್ಯೆ ಗಳನ್ನು ಪ್ರಶ್ನೋತ್ತರ ಕಲಾಪ ವೇಳೆ ಸರಕಾರದ ಗಮನಕ್ಕೆ ತಂದು ಪರಿ ಹಾರ ಕಂಡುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಆದರೆ ಇಡೀ ಕರಾವಳಿಯ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಅಧಿವೇಶನವನ್ನು ವೇದಿಕೆ ಯಾಗಿ ಬಳಸಿಕೊಳ್ಳುತ್ತಿಲ್ಲ.

ಈ ವಾರವಾದರೂ ಧ್ವನಿಯೆತ್ತಲಿ
ಕರಾವಳಿಯಲ್ಲಿ ಕಾಂಗ್ರೆಸ್‌ನ ಏಕೈಕ ಶಾಸಕ ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕರಿದ್ದಾರೆ. ಇವರಲ್ಲಿ ಮೂವರು ಸಚಿವರು. ಶಾಸಕ, ಸಚಿವರು ಒಟ್ಟಾಗಿ ಈ ವಾರವಾದರೂ ಕರಾವಳಿಯ ವಿವಿಧ ಸಮಸ್ಯೆಗಳನ್ನು ಚರ್ಚಿಸಲು ಉಭಯ ಸದನದಲ್ಲಿ ಅವಕಾಶ ಕೋರಿ ಕನಿಷ್ಠ ಒಂದೆರಡು ತಾಸು ಕಾಲವಾದರೂ ಚರ್ಚೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂಬುದು ಕರಾವಳಿ ಭಾಗದ ಜನರ ಆಶಯ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.