ಮದ್ಯ ಮಾರಾಟಕ್ಕೆ ಅವಕಾಶ ಬೇಡ : ಸಚಿವ ರಮೇಶ್ ಜಾರಕಿಹೊಳಿ
Team Udayavani, Apr 13, 2020, 3:51 PM IST
ಬೆಳಗಾವಿ: ಎಂಎಸ್ ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಕೋವಿಡ್ 19 ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಅವರು ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ