ಮಕ್ಕಳಿಗೆ ಶಿಕ್ಷಣ ನೀಡಿ ಸಂಸ್ಕಾರವಂತರನ್ನಾಗಿ ಮಾಡಿ: ಸ್ವಾಮೀಜಿ

ಸಂಘಟಿತರಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸನ್ನದ್ಧರಾಗಬೇಕು

Team Udayavani, May 14, 2022, 6:18 PM IST

ಮಕ್ಕಳಿಗೆ ಶಿಕ್ಷಣ ನೀಡಿ ಸಂಸ್ಕಾರವಂತರನ್ನಾಗಿ ಮಾಡಿ: ಸ್ವಾಮೀಜಿ

ಅಡಹಳ್ಳಿ: ಪೂಜಾರಿ, ಗುರವ್‌, ಹೂಗಾರ ಕುಲಬಾಂಧವರು ಹೂವು, ಪೂಜೆ ಕಾಯಕ ಮಾಡುವುದರ ಜೊತೆಗೆ ಉಪ-ಕಸಬು ಮಾಡಿ ಆರ್ಥಿಕವಾಗಿ ಸಬಲರಾಗಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವದರ ಜೊತೆಗೆ ಸಂಸ್ಕಾರವಂತರನ್ನಾಗಿ ಮಾಡಬೇಕು. ಅಂದಾಗ ಮಾತ್ರ ಸಮಾಜ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ ಎಂದು ಕಾಗವಾಡ ಗುರುದೇವಾಶ್ರಮದ ಯತೀಶ್ವರಾನಂದ ಸ್ವಾಮೀಜಿ ಹೇಳಿದರು.

ಅವರು ಸಮೀಪದ ಸಂಕೋನಟ್ಟಿ ಗ್ರಾಮದಲ್ಲಿ ಗುರುವ, ಪೂಜಾರಿ, ಹೂಗಾರ ಸಮಾಜದ 200 ಮಕ್ಕಳ ಉಪನಯನ ಹಾಗೂ ವಧು-ವರರ ವೇದಿಕೆ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿ, 15 ಲಕ್ಷ ಜನಸಂಖ್ಯೆ ಹೊಂದಿರುವ ಹೂಗಾರರು ಹೋರಾಟ, ಪ್ರತಿಭಟನೆಯಂತಹ ಗೋಜಿಗೆ ಹೋಗದ ಪರಿಣಾಮ ಸರ್ಕಾರದಿಂದ ಯಾವುದೇ ಸಹಾಯ ಸಹಕಾರವಿಲ್ಲ. ಸಂಘಟನೆ ಮೂಲಕ ಸಮಾಜದ ಸ್ಥಿತಿಗತಿಗಳನ್ನು ಸರ್ಕಾರಕ್ಕೆ ತಿಳಿಸಬೇಕಾಗಿದೆ. ಯಾವುದೇ ಸರ್ಕಾರ ಬಂದರೂ ಸರ್ಕಾರ ಈ ಸಮಾಜವನ್ನು ಕಡೆಗಣಿಸುತ್ತಿರುವುದು ದುರ್ದೈವದ ಸಂಗತಿ. ಸಮಾಜದ ಅನೇಕರು ಉನ್ನತ ಹುದ್ದೆಯಲ್ಲಿ ಇದ್ದಾರೆ. ಆದರೆ ಯಾರೊಬ್ಬರೂ ಶಾಸಕ, ಸಂಸದರಾಗಿ ಆಯ್ಕೆಗೊಳ್ಳದಿರುವುದಕ್ಕೆ ಸಮಘಟನೆ ಕೊರತೆ ಕಾರಣ. ಮನೆ ಗೆದ್ದು ಮಾರು ಗೆಲ್ಲು ಎಂಬ ನಾಣ್ಣುಡಿಯಂತೆ ಯಾದವೀ ಕಲಹ ಬಿಟ್ಟು ಪರಸ್ಪರ ಪ್ರೀತಿಯಿಂದ ಬಾಳಬೇಕು ಎಂದರು.

ಅಖಿಲ ಕರ್ನಾಟಕ ಹುಗಾರ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಹೂಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೂಗಾರ, ಜೀರ, ಗುರವ್‌ ಈ ಎಲ್ಲ ಜಾತಿಗಳು ಒಂದೇ ಆಗಿದ್ದರೂ ಎಲ್ಲ ಪಕ್ಷದ ಸರ್ಕಾರಗಳು ಒಂದು ನಿಗಮ ಸ್ಥಾಪಿಸದೇ ಅನ್ಯಾಯ ಮಾಡಿವೆ. ಪ್ರವರ್ಗ 1 ಹಾಗೂ 2ಎ ನೀಡುವಲ್ಲಿ ಗೊಂದಲ ಸೃಷ್ಟಿಸಿ ವಿಳಂಬ ಧೋರಣೆ ಅನುಸರಿಸುತ್ತಿವೆ. ಸಮಾಜದ ಹಿತದೃಷ್ಟಿಯಿಂದ ಸಂಘಟಿತರಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸನ್ನದ್ಧರಾಗಬೇಕು ಎಂದರು.

ಉದ್ಯಮಿ ಹಾಗೂ ಸಮಾಜದ ಮುಖಂಡ ಅವಿನಾಶ ಗುರುಸ್ವಾಮಿ ಮಾತನಾಡಿ., ಸಮಾಜದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣ ಸಂಸ್ಥೆಯೊಂದನ್ನು ಪ್ರಾರಂಭಿಸುವ ಅವಶ್ಯಕತೆ ಇದ್ದು, ಈ ಕಾರ್ಯಕ್ಕೆ ಸಮಾಜ ಬಾಂಧವರು ಮುಂದೆ ಬಂದು ಸ್ಥಳ ನೀಡಿದರೆ 1 ಕೋಟಿ ದೇಣಿಗೆ ನೀಡುವುದಾಗಿ ವಾಗ್ಧಾನ ಮಾಡಿದರು. ಹಣಕಾಸು ಸಂಸ್ಥೆ ಹಾಗೂ ಕಾರ್ಖಾನೆ ಸ್ಥಾಪಿಸುವ ಮೂಲಕ ಔದ್ಯೋಗಿಕ ಕ್ರಾಂತಿ ಮಾಡಿ ಉದ್ಯೋಗ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.

ನದಿ ಸಿಂಧನೂರದ ಅಭಿನವ ಗುರುರಾಜೇಂದ್ರ ಸ್ವಾಮೀಜಿ, ಡಾ| ಎಂ.ಬಿ. ಹೂಗಾರ, ಕಾಂಗ್ರೆಸ್‌ ಮುಖಂಡರಾದ ಸದಾಶಿವ ಬುಟಾಳಿ, ಗಜಾನನ ಮಂಗಸೂಳಿ ಮಾತನಾಡಿದರು. ಬಸಪ್ಪ ಗುರವ, ತಾಲೂಕಾಧ್ಯಕ್ಷ ರಾಚಪ್ಪ ಪೂಜಾರಿ, ಉಪಾಧ್ಯಕ್ಷ ಹಣಮಂತ ಗುರವ, ಮಹಾವೀರ ಪಡನಾಡ, ರವಿ ಪೂಜಾರಿ, ರಾಜು ಗುರವ, ವೀರುಪಾಕ್ಷ ಹೂಗಾರ, ಸಂಗಮೇಶ್ವರ ಹೂಗಾರ, ಮುತ್ತಪ್ಪ ಗುರವ್‌, ಅಣ್ಣಪ್ಪ ಗುರವ, ಕೃಷ್ಣಾ ಗುರವ, ಶೋಭಾ ಗುರವ ಸೇರಿದಂತೆ ಹಲವರು ಇದ್ದರು. ಪ್ರಕಾಶ ಪೂಜಾರಿ ಸ್ವಾಗತಿಸಿದರು., ಕುಮಾರ ನಾವಿ ನಿರೂಪಿಸಿದರು, ಆನಂದ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.