ಗುಡಾರ ಶಾಲೆಯಲ್ಲಿ ಮಕ್ಕಳ ಬಿಡಾರ


Team Udayavani, Dec 28, 2019, 12:33 PM IST

bg-tdy-3

ಚಿಕ್ಕೋಡಿ: ಕಬ್ಬು ಕಟಾವು ಮಾಡಲು ನೆರೆಯ ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದಿರುವ ಮಕ್ಕಳಿಗೆ ಶಿಕ್ಷಣ ಸಿಗಬೇಕೆನ್ನುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಸದ್ದಿಲ್ಲದೇ ಅವರಿಗೆ ಶಿಕ್ಷಣ ನೀಡುತ್ತಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಕಟಾವು ಮಾಡಲು ಬಂದ ವಲಸಿಗರ ಕೂಲಿಕಾರ್ಮಿಕ ಮಕ್ಕಳಿಗೆ ನಿಪ್ಪಾಣಿ ಹಾಗೂ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಟೆಂಟ್‌ ಶಾಲೆಗಳನ್ನು ಆರಂಭ ಮಾಡಿದೆ.

ಕಬ್ಬು ಕಟಾವು ಮಾಡಲು ವಲಸೆ ಬಂದ ಕೂಲಿಕಾರ್ಮಿಕರ ಮಕ್ಕಳನ್ನು ಗಮನದಲ್ಲಿಟ್ಟುಕೊಂಡೇ ಗುಡಾರ(ಟೆಂಟ್‌) ಶಾಲೆಗಳನ್ನು ಆರಂಭಿಸಿದ್ದು, ನಿಪ್ಪಾಣಿ ಮತ್ತು ಚಿಕ್ಕೋಡಿ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಮೂರು ಟೆಂಟ್‌ ಶಾಲೆಗಳನ್ನು ಪ್ರಾರಂಭಿಸಿದ್ದು, ಸುಮಾರು ನೂರಕ್ಕಿಂತ ಹೆಚ್ಚಿನ ಮಕ್ಕಳು ವಿಶೇಷ ಶಿಕ್ಷಣ ಪಡೆಯುತ್ತಿದ್ದಾರೆ. ನಿಪ್ಪಾಣಿ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣ ಹತ್ತಿರ, ಬೇಡಕಿಹಾಳ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಆವರಣ ಮತ್ತು ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಹತ್ತಿರ ಈ ಶಾಲೆಗಳು ಆರಂಭವಾಗಿವೆ.

ಜೀವನೋಪಾಯಕ್ಕೆ ನೆರೆಯ ಮಹಾರಾಷ್ಟ್ರದ ರಾಜ್ಯದ ಭೀಡ್‌, ಉಸ್ಮಾನಾಬಾದ, ಲಾತೂರ ಮುಂತಾದ ಜಿಲ್ಲೆಗಳಿಂದ ಕಬ್ಬು ಕಟಾವು ಮಾಡಲು ಪ್ರತಿ ವರ್ಷ ಸಾವಿರಾರು ಕೂಲಿ ಕಾರ್ಮಿಕರು ರಾಜ್ಯದ ಗಡಿ ಭಾಗಕ್ಕೆ ಆಗಮಿಸುತ್ತಾರೆ. ಇದರಿಂದ ಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಕೂಲಿ ಕಾರ್ಮಿಕರು ಕಾರ್ಯನಿರ್ವಹಿಸುವ ಸ್ಥಳದಲ್ಲಿಯೇ ಟೆಂಟ್‌ ಶಾಲೆಗಳನ್ನು ತೆರೆಯಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯಿಂದ ಚಿದಾನಂದ ಬಸವಪ್ರಭು ಸಕ್ಕರೆ ಕಾರ್ಖಾನೆ ಹತ್ತಿರ ಆರಂಭ ಮಾಡಿರುವ ಟೆಂಟ್‌ ಶಾಲೆಯಲ್ಲಿ ಸುಮಾರು 25ಕ್ಕಿಂತ ಹೆಚ್ಚಿನ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಇಲಾಖೆ ಇಬ್ಬರು ಮರಾಠಿ ಭಾಷಿಕ ಶಿಕ್ಷಕರನ್ನು ಟೆಂಟ್‌ ಶಾಲೆಗೆ ನಿಯೋಜನೆ ಮಾಡಿದೆ. ಮಧ್ಯಾಹ್ನ ಬಿಸಿಯೂಟ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಿದೆ.

ಅದರಂತೆ ನಿಪ್ಪಾಣಿ ಭಾಗದ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದ ಹತ್ತಿರ ಒಂದು ಟೆಂಟ್‌ ಶಾಲೆ ಆರಂಭ ಮಾಡಿದ್ದು, ಅಲ್ಲಿ ಸುಮಾರು 28 ಮಕ್ಕಳು ದಾಖಲಾಗಿದ್ದಾರೆ. ಓರ್ವ ಮರಾಠಿ ಶಿಕ್ಷಕರನ್ನು ನಿಯೋಜಿಸಿದೆ. ಬೇಡಕಿಹಾಳ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಆವರಣದ ಹತ್ತಿರ ಆರಂಭ ಮಾಡಿರುವ ಟೆಂಟ್‌ ಶಾಲೆಯಲ್ಲಿ ಸುಮಾರು 35 ಮಕ್ಕಳು ದಾಖಲಾಗಿವೆ. ಅಲ್ಲಿಯೂ ಸಹ ಓರ್ವ ಶಿಕ್ಷಕನನ್ನು ನಿಯೋಜಿಸಿದೆ. ಮತ್ತು ಕೂಲಿ ಕಾರ್ಮಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ಬರಬೇಕೆಂದು ಶಿಕ್ಷಣ ಇಲಾಖೆ ಜಾಗೃತಿ ಮೂಡಿಸಿದ್ದರಿಂದ ನಿಪ್ಪಾಣಿ ತಾಲೂಕಿನ ಭೋಜ ಶಾಲೆಯಲ್ಲಿ 12 ಜನ ಕೂಲಿಕಾರ್ಮಿಕರ ಮಕ್ಕಳು ದಾಖಲಾಗಿವೆ. ಬಿಡುಗಡೆಯಾಗದ ಅನುದಾನ: ವಲಸೆ ಬಂದಿರುವ ಕೂಲಿಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಬೇಕೆಂದು ಸರ್ಕಾರದ ನಿಯಮ ಇದೆ. ಆದರೆ ಟೆಂಟ್‌ ಶಾಲೆ ಆರಂಭ ಮಾಡಿ ಮೂಲ ಸೌಲಭ್ಯ ಒದಗಿಸಲು

ಸರ್ಕಾರ ವಿಶೇಷ ಅನುದಾನ ನೀಡುತ್ತದೆ. ಆದರೆ ಪ್ರಸಕ್ತ ವರ್ಷ ಸಕ್ಕರೆ ಕಾರ್ಖಾನೆಗಳು ಆರಂಭವಾಗಿ ಒಂದೂವರೆ ತಿಂಗಳು ಕಳೆಯುತ್ತಾ ಬಂದರೂ ಟೆಂಟ್‌ ಶಾಲೆ ಆರಂಭ ಮಾಡಿ ಮೂಲ ಸೌಲಭ್ಯ ಒದಗಿಸಲು ಅನುದಾನ ಬಿಡುಗಡೆಯಾಗಿಲ್ಲ, ಸ್ವ-ಇಚ್ಛೆಯಿಂದ ಆಯಾ ಕ್ಷೇತ್ರ ಶಿಕ್ಷಣಾಧಿ ಕಾರಿಗಳು ಶಿಕ್ಷಕರನ್ನು ನಿಯೋಜಿಸಿ ಸ್ಥಳೀಯ ದೇಣಿಗೆದಾರರಿಂದ ಟೆಂಟ್‌ ಹೊಡಿಸಿ ಶಾಲೆ ಆರಂಭಿಸಿದ್ದಾರೆ.

ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಬಳಿ ಟೆಂಟ್‌ ಶಾಲೆ ಆರಂಭಿಸಿ ಇಬ್ಬರು ಶಿಕ್ಷಕರನ್ನು ನಿಯೋಜಿಸಿದೆ. ಬರುವ ಎರಡು ದಿನಗಳ ಒಳಗಾಗಿ ಪುಸ್ತಕ, ಪೆನ್ನು, ಕಪ್ಪು ಹಲಗೆ ನೀಡಲಾಗುತ್ತದೆ. ಪ್ರತಿದಿನ 25 ಮಕ್ಕಳು ಶಿಕ್ಷಣ ಪಡೆಯುತ್ತಾರೆ. –ಬಿ.ಎ.ಮೇಕನಮರಡಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕೋಡಿ

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

ಬೆಳಗಾವಿ: ವಡಗಾವಿಯ ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

ಸತೀಶ್ ಜಾರಕಿಹೊಳಿ

ಮೇಕೆದಾಟು ರೀತಿಯಲ್ಲೇ ಮಹದಾಯಿ ಹೋರಾಟ ನಡೆಸುತ್ತೇವೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಜಕಲಕಜಹಗ್ದಸ

ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ

ೆ9ಒಕಜಹಗ್ದಸ

ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ

eರತಯುಇಕಲಕ

ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ

ಯುಇಒಲಕಜಹಚಷಱ

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.