ಮನೆ ನವೀಕರಣಕ್ಕೆ ವಿದ್ಯುತ್‌ ತಂತಿ ಅಡ್ಡಿ

•ಹೆಸ್ಕಾಂ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ •ವಿದ್ಯುತ್‌ ತಂತಿಗಳ ತೆರವಿಗೆ ಶಾಸಕ ಸೂಚನೆ

Team Udayavani, Jul 3, 2019, 12:52 PM IST

bg-tdy-5..

ರಾಮದುರ್ಗ: ಪಟ್ಟಣದ ಮಿನಿವಿಧಾನ ಸೌಧದಲ್ಲಿ ನಡೆದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿದರು.

ರಾಮದುರ್ಗ: ಗ್ರಾಮೀಣ ಪ್ರದೇಶದ ಹಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನತೆಯ ಮನೆಯ ಮೇಲೆ ಹೆಸ್ಕಾಂ ವಿದ್ಯುತ್‌ ತಂತಿಗಳನ್ನು ಹಾಕಲಾಗಿದೆ. ಇದರಿಂದ ಮನೆ ನವೀಕರಣ ಸಂದರ್ಭದಲ್ಲಿ ಜನತೆ ಪರಿತಪಿಸುವಂತಾಗಿದೆ ಎಂದು ಸಮುದಾಯದ ಜನರು ಆರೋಪಿಸಿದರು.

ಪಟ್ಟಣದ ಮಿನಿವಿಧಾನ ಸೌಧದಲ್ಲಿ ನಡೆದ ಎಸಿ-ಎಸ್ಟಿ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಈ ಕುರಿತು ಹೆಸ್ಕಾಂ ಅಧಿಕಾರಿಗಳಲ್ಲಿ ಹಲವು ಬಾರಿ ಮನವಿ ಸಲ್ಲಿದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಕೂಡಲೇ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿರುವ ವಿದ್ಯುತ್‌ ತಂತಿಗಳ ತೆರವಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ಹೆಸ್ಕಾಂ ಎಇಇ ರಾಮಕೃಷ್ಣ ಗುಣಗಾ ಅವರಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಗೆ ಸರಕಾರ ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಹಲವು ಸಾಲ ಸೌಲಭ್ಯಗಳನ್ನು ಒದಗಿಸಿದ್ದು, ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಸಾಲ ನೀಡಲು ಬ್ಯಾಂಕ್‌ ಅಧಿಕಾರಿಗಳು ಮುಂದಾಗುತ್ತಿಲ್ಲ. ಇದಕ್ಕೆ ಪರಿಹಾರ ಕಲ್ಪಿಸಿ ಎಂದು ಸಮುದಾಯದ ಜನತೆ ಒತ್ತಾಯಿಸುತ್ತಿದ್ದಂತೆ ಸ್ಥಳದಲ್ಲಿದ್ದ ಬ್ಯಾಂಕ್‌ ಅಧಿಕಾರಿಗಳಿಗೆ ಸರಕಾರದ ಸೌಲಭ್ಯಗಳ ಬ್ಯಾಂಕ್‌ ವ್ಯವಹಾರಕ್ಕೆ ಅನುಕೂಲ ಒದಗಿಸುವಂತೆ ಆಗ್ರಹಿಸಲಾಯಿತು.

ದಲಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ದಾಖಲಾತಿಗಳಿಗೆ ಅಲೆದಾಡಿಸದೇ ಅವಶ್ಯಕ ದಾಖಲಾತಿಗಳನ್ನು ಮಾತ್ರ ಪಡೆದು ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಬೇರೆ ಬೇರೆಡೆ ಕೂಲಿಗಾಗಿ ಹೋದ ಪಾಲಕರು ಮಕ್ಕಳ ವಿದ್ಯಾರ್ಥಿ ವೇತನದ ಸಲುವಾಗಿ ಅಲೆದಾಡುವುದು ಸರಿಯಲ್ಲ. ಎನ್ನುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್‌. ಕರ್ಕಿ ಪಾಲಕರಿಗೆ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳವುದಾಗಿ ತಿಳಿಸಿದರು.

ನಂತರ ಮಾತನಾಡಿದ ಶಾಸಕ ಮಹಾದೇವಪ್ಪ ಯಾದವಾಡ ಸಮುದಾಯದ ಜನತೆಯ ಸಮಸ್ಯೆಗಳ ನಿವಾರಣೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶೀಘ್ರ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.